Featured
ಸಿದ್ದರಾಮಯ್ಯನವರಿಂದ ಈ ರೀತಿಯ ಹೇಳಿಕೆ ನಿರೀಕ್ಷಿಸಿರಲಿಲ್ಲ – ಸಚಿವ ಸುಧಾಕರ್ ಪ್ರತಿಕ್ರಿಯೆ
ರೈಸಿಂಗ್ ಕನ್ನಡ :
ಬೆಂಗಳೂರು :
ವಿರೋಧ ಪಕ್ಷದ ನಾಯಕ ಹಾಗು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ, ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್ ವಿಶ್ವನಾಥ್ ಪ್ರತಿಕ್ರಿಯಿಸಿದ್ದಾರೆ. ಕೋವಿಂಡ್-19 ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಬೆಡ್‌ಗಳಿಗೆ ಯಾವುದೇ ಕೊರತೆ ಇಲ್ಲ, ಅಂತರಾಷ್ಟ್ರೀಯ ವಸ್ತು ಪ್ರದರ್ಶನ, ಜಿಕೆವಿಕೆಗಳಲ್ಲಿ ಹೆಚ್ಚುವರಿಯಾಗಿ ಬೆಡ್‌ಗಳ ವ್ಯವಸ್ಥೆ ಆಗಿದೆ.
ರೋಗ ಲಕ್ಷಣ ಇಲ್ಲದವರಿಗೆ ಕೊರೋನಾ ಇರುತ್ತೆ, ಆಸ್ಪತ್ರೆಗೆ ದಾಖಲಾತಿ ಮಾಡುವ ವಿಚಾರದಲ್ಲಿ ಸ್ವಲ್ಪ ವಿಳಂಬ ಆಗ್ತಿರೋದು ಹೌದು, ಆದ್ರೆ, ಅದಕ್ಕೂ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು. ಸರ್ಕಾರ ಕೊರೊನಾ ನಿಯಂತ್ರಿಸಲು ಬಹಳ ಶ್ರಮ ಪಡ್ತಿದೆ. ಸಿದ್ದರಾಮಯ್ಯ ಮನೆಯಲ್ಲಿ ಕೂತು ಆರೋಪ ಮಾಡ್ತಿದ್ದಾರೆ, ಕೇವಲ ಸಲಹೆ ಕೊಡೋದಲ್ಲ ಪ್ರತಿಪಕ್ಷಗಳೂ ನಮ್ಮ ಜೊತೆ ಕೈಜೋಡಿಸಲಿ ಅಂತ ಆಹ್ವಾನಿಸಿದ್ದಾರೆ,
ನಮಗೂ ಒಂದು ಆಸ್ಪತ್ರೆ ಹೊಣೆ ಕೊಡಿ, ನಿಭಾಯಿಸ್ತೀವಿ ಅಂತ ಸಿದ್ದರಾಮಯ್ಯ ಹೇಳಲಿ, ಅದನ್ನ ಬಿಟ್ಟಿ, ರಾಜಕೀಯ ಹೇಳಿಕೆ ಕೊಡೋದು ಸರಿಯಲ್ಲ ಎಂದು ಎಸ್.ಆರ್ ವಿಶ್ವನಾಥ್ ಸವಾಲು ಹಾಕಿದ್ದಾರೆ. ಇನ್ನೂ ರಾಜ್ಯದಲ್ಲಿ ಲಾಕ್‌ಡೌನ್ ಹೇರುವ ಚಿಂತನೆ ಸರ್ಕಾರದ ಬಳಿ ಇಲ್ಲ ಅಂತ ಸ್ಪಷ್ಟನೆ ನೀಡಿದ್ದಾರೆ. ಕೆಲವು ಕಡೆ ಸ್ವಯಂ ಪ್ರೇರಿತವಾಗಿ ಲಾಕ್‌ಡೌನ್ ಮಾಡಿಕೊಳ್ತಿದ್ದಾರೆ. ಸ್ವಯಂ ಪ್ರೇರಿತ ಲಾಕ್‌ಡೌನ್‌ಗೆ ಸರ್ಕಾರದ ವಿರೋಧ ಇಲ್ಲ ಎಂದಿದ್ದಾರೆ ಎಸ್.ಆರ್ ವಿಶ್ವನಾಥ್.
ಮತ್ತೊಂದೆಡೆ ಸಚಿವ ಡಾ.ಕೆ ಸುಧಾಕರ್ ಕೂಡ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯನವರಿಂದ ಈ ರೀತಿಯ ಹೇಳಿಕೆ ನಿರೀಕ್ಷಿಸಿರಲಿಲ್ಲ ಎಂದಿದ್ದಾರೆ. ಇಂತಹ ವಿಚಾರದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ, ಯಾವುದೇ ತನಿಖೆಗೂ ಸಿದ್ಧ ಎಂದಿದ್ದಾರೆ. ಇನ್ನೂ ಸಚಿವರ ನಡುವೆ ಭಿನ್ನಭಿಪ್ರಾಯವಿದೆ ಅನ್ನೋ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರೋ ಸಚಿವ ಸುಧಾಕರ್, ಆರ್. ಅಶೋಕ್, ಬೊಮ್ಮಾಯಿ, ಶ್ರೀರಾಮುಲು ನಾನು ಎಲ್ಲರೂ ಒಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದೇವೆ, ನಮ್ಮ ನಡುವೆ ಯಾವುದೇ ಭಿನ್ನಭಿಪ್ರಾಯ ಇಲ್ಲ ಎಂದಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?