Featured
ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ‘ಮಹಾ’ ತಾಯಿ

ರೈಸಿಂಗ್ ಕನ್ನಡ:
ಬಾಗಲಕೋಟೆ:
ಮೂವರು ಮಕ್ಕಳಿಗೆ ವಿಷವುಣಿಸಿ ತಾನು ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲ್ಲೂಕಿನ ಬಂಡಿಗಣಿ ಗ್ರಾಮದಲ್ಲಿ ನಡೆದಿದೆ. ಮೂರು ಮಕ್ಕಳು ಸಾವಿಗೀಡಾಗಿದ್ದು, ತಾಯಿ ಆಸ್ಪತ್ರೆಗೆ ದಾಖಲಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ.
ಭಾಗೀರಥಿ ಚಿಕ್ಕಯ್ಯ ಮಠದ(28) ಮಹಲಿಂಗಪುರ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ತಾಯಿ. ಮಕ್ಕಳಾದ ಶಿವಾನಿ(13),ಶಂಕರ್(9),ಸುಹಾಸಿನಿ(7) ಮೃತ ದುರ್ದೈವಿಗಳು. ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತಾಯಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎಂಬ ಮಾಹಿತಿ ತಿಳಿದು ಬಂದಿದೆ. ಅವಳೇ ಮಕ್ಕಳಿಗೆ ವಿಷ ಹಾಕಿ ತಾನು ವಿಷ ಕುಡಿದಿರುವ ಬಗ್ಗೆ ತಿಳಿದು ಬಂದಿದ್ದು ಪ್ರಕರಣಕ್ಕೆ ನೈಜ ಕಾರಣ ತಿಳಿದು ಬಂದಿಲ್ಲ.
ಬನಹಟ್ಟಿ ಪೊಲೀಸರಿಂದ ಪರಿಶೀಲನೆ ನಡೆದಿದ್ದು, ಮೂರು ವರ್ಷದ ಹಿಂದೆ ಭಾಗೀರಥಿ ಪತಿಯ ಕೊಲೆಯಾಗಿತ್ತು. ಮಠದ ಆಸ್ತಿ ವಿಚಾರವಾಗಿ ಬಾಗೀರಥಿಯ ಪತಿಯ ಕೊಲೆಯಾಗಿತ್ತು.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್