Featured
ಕೊರೊನಾ ನಡುವೆ ರಾಜ್ಯ ಸರಕಾರಕ್ಕೆ ಮತ್ತೊಂದು ಶಾಕ್- ಜುಲೈ 10ರಿಂದ ಆಶಾ ಕಾರ್ಯಕರ್ತೆಯರ ಸ್ಟ್ರೈಕ್
![](https://risingkannada.com/wp-content/uploads/2020/07/ASHA.jpg)
ರೈಸಿಂಗ್ ಕನ್ನಡ:
ಬೆಂಗಳೂರು:
ಕೊರೊನಾ ಮಹಾಮಾರಿ ಆತಂಕದ ನಡುವೆ ರಾಜ್ಯ ಸರಕಾರಕ್ಕೆ ಮತ್ತೊಂದು ತಲೆನೋವು ಶುರುವಾಗಿದೆ. ಕೊರೊನಾ ವಾರಿಯರ್ಸ್ ಆಗಿ ರಾಜ್ಯದ ಮೂಲೆ ಮೂಲೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಈಗ ಸರಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ. ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜುಲೈ 10 ರಿಂದ ಅನಿರ್ದಿಷ್ಟ ಅವಧಿಯ ಮುಷ್ಕರಕ್ಕೆ ಅಶಾ ಕಾರ್ಯಕರ್ತೆಯರು ಮುಂದಾಗಿದ್ದಾರೆ.
ಕೆಲ ತಿಂಗಳ ಹಿಂದೆ ಗುತ್ತಿಗೆ ವೈದ್ಯರು ಸರಕಾರದ ವಿರುದ್ಧ ತಿರುಗಿಬಿದ್ದಿದ್ದರು. ಹಾಗೂ ಹೀಗೂ ಮಾಡಿ ಗುತ್ತಿಗೆ ವೈದ್ಯರ ಬಂಡಾಯವನ್ನು ಸರಕಾರ ಸರಿದೂಗಿಸಿತ್ತು. ಇದರ ಬೆನ್ನಲ್ಲೇ ಈಗ ಅಶಾ ಕಾರ್ಯಕರ್ತೆಯರು ಸರಕಾರಕ್ಕೆ ಸಂಕಟ ತರುವ ಲಕ್ಷಣ ಕಾಣುತ್ತಿದೆ. ರಾಜ್ಯದಾದ್ಯಂತ ಜುಲೈ 10ರಿಂದ ಅಶಾ ಕಾರ್ಯಕರ್ತೆಯರ ಸೇವೆ ಸ್ಥಗಿತವಾಗಲಿದೆ. ಸರ್ಕಾರದ ಧೋರಣೆ ಖಂಡಿಸಿ ರಾಜ್ಯಾದ್ಯಂತ ಅಶಾ ಕಾರ್ಯಕರ್ತೆಯರು ಮುಷ್ಕರಕ್ಕೆ ಮುಂದಾಗಿದ್ದಾರೆ.
![](https://risingkannada.com/wp-content/uploads/2020/07/ASHA-Strike-July-10th-Press-Release-pdf-724x1024.jpg)
ಕೊರೊನಾ ಟೈಮ್ ನಲ್ಲಿ ಆಶಾ ಕಾರ್ಯಕರ್ತೆಯರನ್ನ ರಾಜ್ಯ ಸರ್ಕಾರ ಕಡೆಗಣಿಸುತ್ತಿದೆ ಎಂದು ಆರೋಪಿಸಲಾಗಿದೆ, ಮಾಸಿಕ ಗೌರವ ಧನ 12 ಸಾವಿರಕ್ಕೆ ಹೆಚ್ಚಳ ಸೇರಿದಂತೆ ಅಗತ್ಯ ಸೌಲಭ್ಯಕ್ಕೆ ಅಗ್ರಹಿಸಿ ಧರಣಿಗೆ ಮುಂದಾಗಿದ್ದಾರೆ. ಆಶಾ ಕಾರ್ಯಕರ್ತೆಯರು ಜನವರಿಯಿಂದ ಸರ್ಕಾರ ಕ್ಕೆ 10 ಭಾರಿ ಮನವಿ ಪತ್ರ ನೀಡಿದ್ರು, ಆ ಬಗ್ಗೆ ಸರಕಾರ ಕ್ಯಾರೆ ಎನ್ನುತ್ತಿಲ್ಲ. ಹೀಗಾಗಿ ಜುಲೈ 10 ರಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕೆ ರಾಜ್ಯ ಅಶಾ ಕಾರ್ಯಕರ್ತೆಯರು ಮುಂದಾಗಿದ್ದಾರೆ.
ಕರ್ನಾಟಕದಲ್ಲಿ ಸುಮಾರು 42 ಸಾವಿರ ಆಶಾ ಕಾರ್ಯಕರ್ತೆಯರು ಕೆಲಸ ಮಾಡುತ್ತಿದ್ದಾರೆ. ಕೊರೊನಾ ತಡೆಗಟ್ಟುವಲ್ಲಿ ಆಶಾ ಕಾರ್ಯಕರ್ತೆಯರ ಪರಿಶ್ರಮ ಅಪಾರ. ಮನೆ ಮನೆಗೆ ತೆರಳಿ ಸಮೀಕ್ಷೆ, ಸೋಂಕು ಪತ್ತೆ ಹಚ್ಚವಲ್ಲಿ ಇವರ ಪಾತ್ರ ಅತಿ ಮುಖ್ಯವಾಗಿದೆ. ಈಗ ಈ ಆರೋಗ್ಯ ಸಿಬ್ಬಂಧಿಗಳು ಸರಕಾರದ ವಿರುದ್ಧ ತಿರುಗಿಬಿದ್ದಿರೋದು ಆಡಳಿತ ನಡೆಸುವವರಿಗೆ ತಲೆ ನೋವು ಹೆಚ್ಚಿಸಿದೆ.
![](https://risingkannada.com/wp-content/uploads/2020/04/RISING-KANNADA-logo-150px.jpg)
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?