Featured
ವರಮಹಾಲಕ್ಷ್ಮಿ ಹಬ್ಬ ದಿನವೇ ಚಿತ್ರದುರ್ಗದಲ್ಲಿ ಪೈಲ್ವಾನ್ ಆಡಿಯೋ ರಿಲೀಸ್

ಬೆಂಗಳೂರು : ವರ ಮಹಾಲಕ್ಷ್ಮೀ ಹಬ್ಬ ಅಂದ್ರೆ ಆಗಸ್ಟ್ 9ರಂದು ಸ್ಯಾಂಡಲ್ವುಡ್ನಲ್ಲಿ ಡಬಲ್ ಸಂಭ್ರಮ. ಮೊದಲನೆಯದ್ದು ಚಾಲೆಂಜೆಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಸಿನಿಮಾ ರಿಲೀಸ್ ಆಗ್ತಿದ್ರೆ, ಮತ್ತೊಂದೆಡೆ ಅವತ್ತೇ ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಆಡಿಯೋ ಬಿಡುಗಡೆ ಆಗ್ತಿದೆ. ಹೀಗಾಗಿ, ಅಭಿಮಾನಿಗಳಿಗೆ ಡಬಲ್ ಖುಷಿ..
ಪೈಲ್ವಾನ್ ಆಡಿಯೋ ಬಿಡುಗಡೆ ಬಗ್ಗೆ ಕಿಚ್ಚ ಸುದೀಪ್ ಅಧಿಕೃತವಾಗಿ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ಆಡಿಯೋ ಬಿಡುಗಡೆಯ ಕ್ಷಣಕ್ಕಾಗಿ ಎದುರು ನೋಡುತ್ತಿದ್ದೇನೆ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ. ಆಗಸ್ಟ್ 9ರಂದು ಕೋಟೆನಗರಿ ಚಿತ್ರದುರ್ಗದಲ್ಲಿ ಆಡಿಯೋ ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಸೆಪ್ಟೆಂಬರ್ 12ಕ್ಕೆ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಪೈಲ್ವಾನ್ ಸಿನಿಮಾ ರಿಲೀಸ್ ಆಗಲಿದೆ. Excited to Eager to once again join the team of #Pailwaan on th ocassion of the audio launch.
August 9th at Chitradurga. Hoping to be fit n fine by then. 🤗@krisshdop @SunielVShetty @ArjunjanyaAJ @LahariMusic @ZeeStudios_ @aakanksha_s30 @iswapnakrishna @Kabirduhansingh pic.twitter.com/DDFe7xY09Z— Kichcha Sudeepa (@KicchaSudeep) August 2, 2019
ಎಲ್ಲವೂ ಅಂದುಕೊಂಡತೆ ಆಗಿದ್ದರೆ ಈಗಾಗಲೇ ಆಡಿಯೋ ರಿಲೀಸ್ ಆಗಿ, ವರಲಕ್ಷ್ಮಿ ಹಬ್ಬಕ್ಕೆ ಸಿನಿಮಾ ರಿಲೀಸ್ ಆಗಬೇಕಿತ್ತು. ಆದ್ರೆ, ಕೆಲವು ತಾಂತ್ರಿಕ ಕಾರಣಗಳಿಂದ ಮುಂದಕ್ಕೆ ಹೋಗಿದ್ದು, ಈಗ ಹಬ್ಬಕ್ಕೆ ಆಡಿಯೋ ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಝಿ ಕನ್ನಡ ವಾಹಿನಿ ಆಡಿಯೋ ರಿಲೀಸ್ ಕಾರ್ಯಕ್ರಮ ರೆಕಾರ್ಡ್ ಮಾಡಿಕೊಳ್ಳಲಿದ್ದು, ವಾರದ ಬಳಿಕ ಪ್ರಸಾರ ಮಾಡಲಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?