Featured
ರಾಮನಗರ ಕೋವಿಡ್ ಆಸ್ಪತ್ರೆಗೆ ಸಂಸದ ಡಿ.ಕೆ.ಸುರೇಶ್ ಭೇಟಿ: ರೋಗಿಗಳ ದೂರಿಗೆ ಸ್ಪಂದಿಸಲು ಸೂಚನೆ

ರೈಸಿಂಗ್ ಕನ್ನಡ:
ರಾಮನಗರ:
ಹೌದು ಕಂದಾಯ ಭವನದಲ್ಲಿ ಸ್ಥಾಪನೆಯಾಗಿರುವ ಕೋವಿಡ್ 19 ರೆಫರಲ್ ಆಸ್ಪತ್ರೆಗೆ ಸಂಸದ ಡಿ.ಕೆ.ಸುರೇಶ್ ಭೇಟಿ ಕೊಟ್ಟು ಸೋಂಕಿತರೊಂದಿಗೆ ಚರ್ಚಿಸಿ ಸಮಸ್ಯೆಗಳ ಬಗ್ಗೆ ಆಲಿಸಿದರು.
ಸೋಮವಾರ ಡಿಸಿ ಕಚೇರಿಗೆ ಭೇಟಿ ನೀಡಿದ್ದ ಸಂಸದರು ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳೊಂದಿಗೆ ಅನೇಕ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ.

ನಂತರ ಪಿಪಿಇ ಕಿಟ್ ಧರಿಸಿದ ಸಂಸದ ಡಿ.ಕೆ.ಸುರೇಶ್, ಜಿಪಂ ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್ ಮತ್ತು ಸಂಸದರ ಸಹಾಯಕರು ಕೋವಿಡ್ 19 ಆಸ್ಪತ್ರೆಯಲ್ಲಿ ಸೋಂಕಿತರ ವಾರ್ಡುಗಳಿಗೆ ಭೇಟಿ ಕೊಟ್ಟು ಅವರಲ್ಲಿ ಆತ್ಮ ಸ್ಥೈರ್ಯ ತುಂಬಿದ್ದಾರೆ.
ಔಷಧ, ವೈದ್ಯೋಪಚಾರ, ಉಪಹಾರ, ಊಟದ ಬಗ್ಗೆ ವಿಚಾರಿಸಿದ್ದಾರೆ. ಸೋಂಕಿತರು ವೈದ್ಯೋಪಚಾರದ ಬಗ್ಗೆ ಸಕರಾತ್ಮಕ ಪ್ರತಿಕ್ರಿಯೆ ನೀಡಿದ್ದು, ಶೌಚಾಲಯಗಳ ಅವ್ಯವಸ್ಥೆಯ ಬಗ್ಗೆ ಗಮನ ಸೆಳೆದಿದ್ದಾರೆ.
ನಂತರ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಂಸದರು ಕೂಡಲೆ ಕೊವೀಡ್ ರೋಗಿಗಳ ಸಮಸ್ಯಗಳಿಗೆ ಸ್ಪಂದಿಸುವಂತೆ ಸೂಚಿಸಿದರು.
You may like
ಕರ್ನಾಟಕದಲ್ಲಿ ಕೆಆರ್ ಕೆ ಸಂಸ್ಥೆಯಿಂದ ಪ್ರಭಾಸ್ ಆದಿಪುರುಷ್ ಬಿಡುಗಡೆ
ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್ಡೌನ್ ಫಿಕ್ಸಾ.?
ಸಿಎಂ ಬೊಮ್ಮಾಯಿ ಸೇರಿ ಸಂಪುಟದ ಐವರಿಗೆ ಕೊರೋನಾ ಶಾಕ್..!
ದೆಹಲಿ ಮಾದರಿ ಲಾಕ್ ಆಗುತ್ತಾ ಬೆಂಗಳೂರು.? ಯಾಕೆ..? ಏನಾಗ್ತಿದೆ ಬೆಂಗಳೂರಲ್ಲಿ.?
ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್
ದಾವಣಗೆರೆ ಕೆಎಸ್ಆರ್ಟಿಸಿ ಸಿಬ್ಬಂದಿಗಳಿಗೆ ಉಚಿತ ಮಾಸ್ಕ್ ವಿತರಣೆ