Featured
ಲಾಕ್‌ಡೌನ್ ಶುರು…! ಓಡಾಡುವಾಗ ಹುಷಾರು..! ಇದು ಬಿಎಂಟಿಸಿ ಹಾಕಿರೋ ಷರತ್ತು..!
ರೈಸಿಂಗ್ ಕನ್ನಡ :
ಬೆಂಗಳೂರು :
ಸರ್ಕಾರ ಘೋಷಿಸಿದಂತೆ, ಮಂಗಳವಾರ ರಾತ್ರಿ 8 ಗಂಟೆಯಿಂದಲೇ ಲಾಕ್‌ಡೌನ್ ಶುರುವಾಗಿದೆ. ಬೆಂಗಳೂರು ಲಾಕ್‌ಡೌನ್ ಬಿಸಿ ಬಿಎಂಟಿಸಿಗೂ ತಟ್ಟಿದೆ. ಇದಕ್ಕಾಗಿ ಬಿಎಂಟಿಸಿ ತನ್ನದೇ ಆದ ಮಾರ್ಗಸೂಚಿಗಳನ್ನೂ ಬಿಡುಗಡೆಮಾಡಿದೆ. ಮಾರ್ಗಸೂಚಿಯಂತೆ ಒಂದುವಾರ ಬಿಎಂಟಿಸಿ ಸಾರಿಗೆಯಲಲಿ ಸಾರ್ವಜನಿಕರ ಪ್ರಯಾಮ ನಿಷಿದ್ಧವಾಗಿದೆ. ಆದ್ರೆ, ಅಗತ್ಯ ಸಾರಿಗೆ ಸೇವೆಗಳಿಗೆ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಅವಕಾಶವನ್ನ ಕಲ್ಪಿಸಲಾಗಿದೆ.
ಸರ್ಕಾರಿ ಅಧಿಕಾರಿಗಳು, ಸರ್ಕಾರಿ ನೌಕರರು, ಪೊಲೀಸ್, ತುರ್ತು ಸೇವೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು, ಪತ್ರಕರ್ತರು, ವೈದ್ಯಕೀಯ ಸಿಬ್ಬಂದಿ, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಸ್ ಸೇವೆ ಕಲ್ಪಿಸಲು ಬಿಎಂಟಿಸಿ ನಿರ್ಧರಿಸಿದೆ. ಆದ್ರೆ, ಸಿಬ್ಬಂದಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸುವಂತೆ ಸೂಚಿಸಲಾಗಿದೆ.
ಅಲ್ಲದೇ, ಬಸ್ಸುಗಳಲ್ಲಿ ಸಾಮಾಜಿಕ ಅಂತರವನ್ನ ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಪ್ರಯಾಣಿಕರನ್ನ ಹತ್ತಿಸುವುದು, ಇಳಿಸುವಾಗಲೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ತಿಳಸಾಲಿಗಿದೆ. ಜೊತೆಗೆ ಅನಿವಾರ್ಯ ಕಾರಣಗಳಿಗಾಗಿ ಓಡಾಡುವವರು, ಗುರುತಿನ ಚೀಟಿಯನ್ನ ತಪ್ಪದೇ ತರಲೇಬೇಕು.
ಜ್ವರ ಹಾಗೂ ಇತರೆ ಕಾಯಿಲೆಯಿಂದ ಬಳಲುತ್ತಿದ್ದರೆ ಪ್ರಯಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಬಿಎಂಟಿಸಿ ಸ್ಪಷ್ಟಪಡಿಸಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?