Connect with us

Featured

‘ಕೊರೊನಾ’ ‘ಖರೀದಿ’ಯಲ್ಲೂ ಅಕ್ರಮ – ಸರ್ಕಾರದ ವಿರುದ್ಧ ಡಿ.ಕೆ ಶಿವಕುಮಾರ್ ಆಕ್ರೋಶ..!

ರೈಸಿಂಗ್ ಕನ್ನಡ :

ಬೆಂಗಳೂರು :

ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಸಾವಿನ ಪ್ರಮಾಣ ಏರಿಕೆಯಾಗುತ್ತಿದೆ. ಈ ಸಂದರ್ಭದಲ್ಲಿ ಸಚಿವರುಗಳು ಜನರನ್ನು ರಕ್ಷಿಸುವ ಬದಲು ದುಡ್ಡು ಬಾಚಿಕೊಳ್ಳುವತ್ತ ಹೆಚ್ಚು ಗಮನ ಹರಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಭ್ರಷ್ಟಾಚಾರದ ಕುರಿತ ಎಲ್ಲಾ ಆರೋಪಗಳಿಗೆ ಮುಖ್ಯಮಂತ್ರಿಗಳು ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

‘ಕೊರೊನಾ ನಿಯಂತ್ರಣಕ್ಕೆ ಹಾಗೂ ಜನರ ಜೀವ ಉಳಿಸಲು ದೇಶದೆಲ್ಲೆಡೆ ಸರ್ಕಾರಗಳಿಗೆ ಸಂಪೂರ್ಣ ಸಹಕಾರ ನೀಡಲಾಗುತ್ತಿದೆ. ಆದರೆ ಕರ್ನಾಟಕದಲ್ಲಿ ಪ್ರತಿ ಹಂತದಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ.

ಹಾಸಿಗೆ, ದಿಂಬಿನಿಂದ ಹಿಡಿದು, ವೆಂಟಿಲೇಟರ್, ಪಿಪಿಟಿ ಕಿಟ್ ಖರೀದಿವರೆಗೂ ಅಕ್ರಮ ನಡೆದಿದೆ. ಇಲ್ಲಿ ಶೇ. 5, 10, 20, 30ರಷ್ಟು ಭ್ರಷ್ಟಾಚಾರ ನಡೆದಿಲ್ಲ. ಶೇ.200ರಿಂದ 500 ರಷ್ಟು ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ನಾವು ನೋಡುತ್ತಿದ್ದೇವೆ.

ಹಾಸಿಗೆ ಹಗರಣ, ವೆಂಟಿಲೇಟರ್ ಹಗರಣಗಳ ಬಗ್ಗೆ ಮಾಧ್ಯಮಗಳು ಬೆಳಕು ಚೆಲ್ಲಿವೆ. ರಾಜ್ಯದಲ್ಲಿ ಮಾಧ್ಯಮಗಳು ಜನರ ಪರ ಧ್ವನಿಯಾಗಿ ಅಂಕಿಅಂಶಗಳನ್ನು ನಮ್ಮ ಮುಂದೆ ಇಡುತ್ತಿವೆ.

Advertisement

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು, ಇದಕ್ಕೆ ಉತ್ತರ ಹಾಗೂ ಲೆಕ್ಕವನ್ನು ನೀಡಲಿ ಎಂದು ಆಗ್ರಹಿಸುತ್ತೇನೆ. ನಾನು ಅಥವಾ ನಮ್ಮ ವಿರೋಧ ಪಕ್ಷದ ನಾಯಕರು ಈ ವಿಚಾರದ ಬಗ್ಗೆ ಮಾತನಾಡಿದರೆ ಅದನ್ನು ರಾಜಕೀಯ ಆರೋಪ ಎಂದು ದೂರುತ್ತೀರಿ. ಆದರೆ ಮಾಧ್ಯಮಗಳು ಯಾವುದೇ ವೈಯಕ್ತಿಕ ಹಾಗೂ ರಾಜಕೀಯ ಅಜೆಂಡಾ ಇಟ್ಟುಕೊಂಡಿಲ್ಲ.

ಮುಖ್ಯಮಂತ್ರಿ ಸ್ಥಾನದಲ್ಲಿ ಕೂತಿರುವ ನೀವು ಈ ಪ್ರಶ್ನೆಗಳಿಗೆಲ್ಲಾ ಉತ್ತರ ನೀಡಬೇಕಾಗಿರುವುದು ನಿಮ್ಮ ಕರ್ತವ್ಯ. ಕಳೆದ 60 ವರ್ಷಗಳಲ್ಲಿ ಮಾನವೀಯ ವಿಚಾರಕ್ಕೆ ಸಂಬಂಧಿಸಿದಂತೆ ನಡೆದಿರುವ ಅತಿ ದೊಡ್ಡ ಹಗರಣ ಇದಾಗಿದೆ. ಕೊರೋನಾದಂತಹ ಕಠಿಣ ಸಮಯದಲ್ಲಿ ಇಂತಹ ದೊಡ್ಡ ಭ್ರಷ್ಟಾಚಾರವನ್ನು ಜನರು ನಿರೀಕ್ಷೆ ಮಾಡಿರಲಿಲ್ಲ.

ಹಾಸಿಗೆ ವಿಚಾರದಲ್ಲಿ ಅವ್ಯವಹಾರದ ಬಗ್ಗೆ ಗೊತ್ತಾಗಿ ಮುಖ್ಯಮಂತ್ರಿಗಳೇ ಆ ನಿರ್ಧಾರ ವಾಪಸ್ ಪಡೆದಿದ್ದಾರೆ. ಅದೇ ರೀತಿ ಸಚಿವರುಗಳು ಪ್ರತಿ ಹಂತದಲ್ಲೂ ದುಡ್ಡು ಹೊಡೆಯುತ್ತಿದ್ದಾರೆ. ಮುಖ್ಯಮಂತ್ರಿಗಳು ಸಾಲು ಸಾಲಾಗಿ ಮಂತ್ರಿಗಳಿಗೆ ಕೊರೊನಾ ಜವಾಬ್ದಾರಿ ವಹಿಸಿದರೂ, ಯಾರೊಬ್ಬರೂ ಆಸ್ಪತ್ರೆಗೆ ಹೋಗಿ ಅಲ್ಲಿನ ಸೋಂಕಿತರ ಜತೆ ಮಾತನಾಡಿ ಅವರಿಗೆ ಆತ್ಮ ವಿಶ್ವಾಸ ತುಂಬುವ ಕೆಲಸ ಮಾಡಿಲ್ಲ. ಸಚಿವರು ಜನರನ್ನು ರಕ್ಷಿಸುವ ಬದಲು ದುಡ್ಡು ಮಾಡುವ ಬಗ್ಗೆ ಆಸಕ್ತಿ ಹೊಂದಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳು ಈ ವಿಚಾರವಾಗಿ ಉತ್ತರ ನೀಡಲೇಬೇಕು.’ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ