Featured
24 ಗಂಟೆಯಲ್ಲಿ ಭಾರತದಲ್ಲಿ 37,148 ಕೊರೊನಾ ಕೇಸ್- ಮಹಾರಾಷ್ಟ್ರದಲ್ಲಿ ಕೊರೊನಾ ‘ಮಹಾ’ ಸ್ಪೋಟ

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್ :
ಕೊರೊನಾ ಕಂಟ್ರೋಲ್ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇನ್ನಿಲ್ಲದ ಸರ್ಕಸ್ ಮಾಡುತ್ತಿವೆ. ಆದ್ರೆ ಕೊರೊನಾ ಪಾಸಿಟಿವ್ ಕೇಸ್ಗಳು ಗಂಟೆ ಗಂಟೆಗೂ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 37,148 ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿದ್ದು ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 11,55,191 ಏರಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ 587 ಮಂದಿ ಸಾವನಪ್ಪಿದ್ದು ಒಟ್ಟು 28,084 ಮಂದಿ ಕೊನೆಯುಸಿರೆಳೆದಿದ್ದಾರೆ. ಇದುವರೆಗೂ 7,24,577 ಜನ ಡಿಸ್ಚಾರ್ಜ್ ಆಗಿದ್ದಾರೆ.
ಸದ್ಯ ದೇಶದಲ್ಲಿ 4,02,529 ಸಕ್ರಿಯ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕೊರೊನಾ 176 ಜನರನ್ನ ಬಲಿ ತೆಗೆದುಕೊಂಡು ಅಟ್ಟಹಾಸ ಮೆರೆದಿದೆ.
72 ಮಂದಿ ಕರ್ನಾಟಕದಲ್ಲಿ, ತಮಿಳುನಾಡಿನಲ್ಲಿ 70, ಆಂಧ್ರ ಪ್ರದೇಶ 54, ಉತ್ತರ ಪ್ರದೇಶ 46, ಪಶ್ಚಿಮ ಬಂಗಾಳ ಮತ್ತು ದೆಹಲಿಯಲ್ಲಿ 35, ಗುಜರಾತ್ನಲ್ಲಿ 20, ಮಧ್ಯಪ್ರದೇಶದಲ್ಲಿ 17, ಜಮ್ಮು ಕಾಶ್ಮೀರದಲ್ಲಿ 10 ಮಂದಿ ಪ್ರಾಣ ಬಿಟ್ಟಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?