Featured
ಕೋವಿಡ್-19 ಸೋಂಕಿನ ಲಕ್ಷಣಗಳ ಬಗ್ಗೆ ಸಮುದಾಯದ ಜನರಲ್ಲಿ ಹೆಚ್ಚಿನ ಅರಿವು ಅಗತ್ಯ : ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ
![](https://risingkannada.com/wp-content/uploads/2020/07/madhuswamy-2-2.jpg)
ರೈಸಿಂಗ್ ಕನ್ನಡ :
ತುಮಕೂರು:
ಕೋವಿಡ್-19 ಸೋಂಕಿನ ಲಕ್ಷಣಗಳ ಬಗ್ಗೆ ಸಮುದಾಯದ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಕೋವಿಡ್-19 ನಿಯಂತ್ರಣ ಸಂಬಂಧ ನಡೆದ ಅಲ್ಪಸಂಖ್ಯಾತ ಸಮುದಾಯ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು ಕೋವಿಡ್-19 ರ ಬಗ್ಗೆ ಜನರು ಭಯ ಪಡುವುದು ಬೇಡ.ಸೋಂಕಿನ ಲಕ್ಷಣಗಳು ಕಂಡು ಬಂದ ತಕ್ಷಣವೇ ಜನರು ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು.
![](https://risingkannada.com/wp-content/uploads/2020/07/madhuswamy-2307-2-1024x768.jpg)
ಆಸ್ಪತ್ರೆಗೆ ವಿಳಂಬ ಮಾಡಿ ಬರುತ್ತಿರುವುದರಿಂದ ಮರಣ ಪ್ರಕರಣಗಳು ಹೆಚ್ಚಾಗುತ್ತಿವೆ. ರೋಗ ಲಕ್ಷಣಗಳು ಕಂಡುಬಂದ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ಪಡೆಯುವಂತೆ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಿದರು.
ಕೋವಿಡ್-19 ನಿಯಂತ್ರಣ ಸಂಬಂಧ ಜಿಲ್ಲೆಯಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಕೆ. ರಾಕೇಶ್‌ಕುಮಾರ್ ವಿವರಿಸಿದರು.
ಸಭೆಯಲ್ಲಿ ಮಾಜಿ ಶಾಸಕ ಡಾ. ರಫೀಕ್ ಅಹಮದ್, ಮೇಯರ್ ಫರೀದಾ ಬೇಗಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ ವಂಶಿಕೃಷ್ಣ, ಉಪವಿಭಾಗಾಧಿಕಾರಿ ಅಜಯ್, ಪಾಲಿಕೆ ಆಯುಕ್ತೆ ರೇಣುಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ, ಮತ್ತಿತರರು ಹಾಜರಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?