ರೈಸಿಂಗ್ ಕನ್ನಡ :
ಸ್ಪೋರ್ಟ್ಸ್ ಡೆಸ್ಕ್ :
ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯು ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಸೆಪ್ಟೆಂಬರ್ 19 ರಿಂದ ಆರಂಭವಾಗಲಿದೆ. ಎಂದು ಐಪಿಎಲ್ ಅಧ್ಯಕ್ಷ ಬ್ರಿಜೇಷ್ ಪಟೇಲ್ ಘೋಷಿಸಿದ್ದಾರೆ. ನವೆಂಬರ್ 8 ರಂದು ಫೈನಲ್ ಪಂದ್ಯ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಇನ್ನೂ, ಯಾವೆಲ್ಲಾ ಪಂದ್ಯಗಳು ಯಾವಾಗ ನಡೆಯಲಿವೆ ಅನ್ನೋ ವೇಳಾಪಟ್ಟಿಯನ್ನ ಅಂತಿಮಗೊಳಿಸಲು ಐಪಿಎಲ್ ಆಡಳಿತ ಮಂಡಳಿ ಶೀಘ್ರ ಸಭೆ ಸೇರಲಿದೆ ಎಂದು ಬ್ರಿಜೇಷ್ ಪಟೇಲ್ ತಿಳಿಸಿದ್ದಾರೆ. ಸೆಪ್ಟೆಂಬರ್ 19 ರಿಂದ ನವೆಂಬರ್ 8ರವರೆಗೆ ಟೂರ್ನಿ ನಡೆಯಲಿದೆ. ಸರ್ಕಾರದ ಅನುಮತಿಗಾಗಿ ಕಾಯುತ್ತಿದ್ದೇವೆ. 51 ದಿನಗಳ ಪೂರ್ಣ ಪ್ರಮಾಣದ ಟೂರ್ನಿ ಆಯೋಜನೆಯಾಗಲಿದೆ ಎಂದು ಬ್ರಿಜೇಷ್ ಪಟೇಲ್ ತಿಳಿಸಿದ್ದಾರೆ.
ಕೊರೊನಾ ಹಿನ್ನಲೆಯಲ್ಲಿ ಪಾಲಿಸಬೇಕಾದ ನಿಯಮಗಳನ್ನು ರೂಪಿಸಲಾಗುತ್ತಿದೆ. ಈ ಕುರಿತು ಎಮಿರೇಟ್ಸ್ ಕ್ರಿಕೆಟ್ ಮಂಡಳಿಗೆ ಮಾಹಿತಿ ನೀಡಲಾಗುವುದು. ಖಾಲಿ ಕ್ರೀಡಾಂಗಣ ಅಥವಾ ಪ್ರೇಕ್ಷಕರಿಗೆ ಅವಕಾಶ ನೀಡುವ ನಿರ್ಧಾರ ಯುಎಇ ಸರ್ಕಾರದ್ದಾಗಿದೆ ಎಂದು ಬ್ರಿಜೇಷ್ ಸ್ಪಷ್ಟಪಡಿಸಿದ್ದಾರೆ.
ಯುಎಇನಲ್ಲಿ ಐಪಿಎಲ್ ನಡೆಸಲವು ಮೂರು ಕ್ರೀಡಾಂಗಣಗಳು ಫೈನಲ್ ಆಗಿವೆಯಂತೆ. ಇನ್ನೂ ತಂಡಗಳ ತರಬೇತಿಗಾಗಿ ಐಸಿಸಿ ಅಕಾಡೆಮಿಯ ಅಧೀನದಲ್ಲಿರುವ ಕ್ರೀಡಾಂಗಣಗಳನ್ನು ಬಿಸಿಸಿಐ ಬಾಡಿಗೆಗೆ ಪಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?