ರೈಸಿಂಗ್ ಕನ್ನಡ :
ಬೆಳಗಾವಿ :
ಗೋಕಾಕ್ ಉಪಚುನಾವಣೆ ವೇಳೆ ಮಾದರಿ ನೀತಿ ಸಂಹಿತಿ ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 1 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಗೋಕಾಕ್ ಪ್ರಧಾನ ಜೆಎಂಎಪ್ ನ್ಯಾಯಾಲಯ ಸಮಸ್ಸ್ ಜಾರಿಮಾಡಿದೆ. ಕಳೆದ ತಿಂಗಳು 26ರಂದು ಆದೇಶ ನೀಡಿರುವ ನ್ಯಾಯಾಧೀಶ ಸಿ.ಕೆ ವೀರೇಶ್ ಕುಮಾರ್, ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸಮನ್ಸ್ ಜಾರಿಗೊಳಿಸಲು ಸೂಚಿಸಿದ್ದಾರೆ.
ಕಳೆದ ವರ್ಷ ನವೆಂಬರ್ 23ರಂದು ಗೋಕಾಕದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಪರ ಚುನಾವಣಾ ಸಮಾವೇಶ ನಡೆದಿತ್ತು. ಸಮಾವೇಶವನ್ನ ಉದ್ದೇಶಿಸಿ ಮಾತನಾಡಿದ್ದ ಯಡಿಯೂರಪ್ಪ, ವೀರಶೈವ ಲಿಂಗಾಯತ ಸಮುದಾಯದವರ ಒಂದು ಮತವೂ ಬೇರೆ ಕಡೆ ಹೋಗಬಾರದು ಎಂದು ಕರೆ ನೀಡಿದ್ದರು.
ಚುನಾವಣೆ ಸಂದರ್ಭದಲ್ಲಿ ನಿರ್ದಿಷ್ಟ ಜನಾಂಗವನ್ನು ಓಲೈಸುವುದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂಬು ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯಾಗಿದ್ದ ಲಕ್ಷ್ಮಣ ತುಕ್ಕಪ್ಪ ಹಾಗೂ ಅವರ ಸಹಾಯಕ ಮಾರುತಿ ಗೋವಿಂದ ಉಪ್ಪಾರ ಅವರು ಜನಪ್ರತಿನಿಧಿಗಳ ಕಾಯ್ದೆಯಡಿ ಪ್ರಕರಮ ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಧೀಶರು ಬಿ ರಿಪೋರ್ಟ್ ವಜಾಗಳಿಸಿ, ಸಮನ್ಸ್ ಜಾರಿ ಮಾಡಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?