Featured
ರಾಮನಗರದಲ್ಲಿ 64 ಹೊಸ ಪಾಸಿಟಿವ್ ಕೇಸ್: ರಾಮನಗರ, ಕನಕಪುರ ಕೊರೊನಾ ಹಾಟ್ಸ್ಪಾಟ್

ರೈಸಿಂಗ್ ಕನ್ನಡ:
ರಾಮನಗರ :
ಜಿಲ್ಲೆಯಲ್ಲಿ ಕೊರೊನಾ ಅಬ್ಬರ ಜೋರಾಗುತ್ತಿದ್ದು ಭಾನುವಾರ 64 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.
ಚನ್ನಪಟ್ಟಣ 9, ಕನಕಪುರ 19, ಮಾಗಡಿ 16 ಮತ್ತು ರಾಮನಗರ 20 ಪ್ರಕರಣಗಳು ದಾಖಲಾಗಿವೆ. ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.
ಒಟ್ಟು ಪ್ರಕರಣ: ಇದುವರೆಗೆ ಜಿಲ್ಲೆಯಲ್ಲಿ 730 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 156, ಕನಕಪುರ 153, ಮಾಗಡಿ 198 ಮತ್ತು ರಾಮನಗರ 223 ಪ್ರಕರಣಗಳು ಸೇರಿವೆ.
ಗುಣಮುಖ : ಜಿಲ್ಲೆಯಲ್ಲಿ ಈವರೆಗೆ ಒಟ್ಟು 329 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 51, ಕನಕಪುರ 94, ಮಾಗಡಿ 98 ಮತ್ತು ರಾಮನಗರ 86 ಜನರು ಸೇರಿದ್ದಾರೆ. ಇಂದು ಯಾರು ಕೂಡ ಗುಣಮುಖರಾಗಿ ಬಿಡುಗಡೆಯಾಗಿರುವುದಿಲ್ಲ.
ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ದಾಖಲಾಗಿರುವ 730 ಪ್ರಕರಣಗಳ ಪೈಕಿ 329 ಜನರು ಗುಣಮುಖರಾಗಿದ್ದಾರೆ, ಇನ್ನೂ 388 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಪೈಕಿ ಚನ್ನಪಟ್ಟಣ 105, ಕನಕಪುರ 58, ಮಾಗಡಿ 91 ಮತ್ತು ರಾಮನಗರ 134 ಪ್ರಕರಣಗಳು ಸೇರಿವೆ.
ಸಾವು : ಕನಕಪುರ ತಾಲ್ಲೂಕಿನಲ್ಲಿ ಒಬ್ಬರು, ಮಾಗಡಿ ತಾಲ್ಲೂಕಿನಲ್ಲಿ 9 ಜನ ಹಾಗೂ ರಾಮನಗರ ತಾಲ್ಲೂಕಿನಲ್ಲಿ 3 ಜನ ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 13 ಮಂದಿ ನಿಧನರಾಗಿದ್ದಾರೆ.
ಜಿಲ್ಲಾ ಆರೋಗ್ಯ ಇಲಾಖೆ ವರದಿ : ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಭಾನುವಾರ (ಜುಲೈ 26) ವರದಿಯಲ್ಲಿ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 14841 (ಹೊಸದಾಗಿ ಇಂದಿನ 196 ಸೇರಿ). ಒಟ್ಟು 6676 ಜನ 14 ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. 179 ಜನರು ಇಂದು ಹೋಂ ಕ್ವಾರಂಟೈನ್ ಅವಧಿಯನ್ನು ಪೂರೈಸಿದ್ದು, ಇವರ ಒಟ್ಟಾರೆ ಸಂಖ್ಯೆ 38,26ಗೆ ಏರಿಕೆಯಾಗಿದೆ.
ಜ್ವರ ತಪಾಸಣೆ: ಜ್ವರ ತಪಾಸಣಾ ಕೇಂದ್ರದಲ್ಲಿ ಇಂದು 16 ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ 3939 ಮಂದಿ ತಪಾಸಣೆಗೆ ಮಾಡಿಸಿಕೊಂಡಿದ್ದಾರೆ.
ಕ್ವಾರಂಟೈನ್ : ಒಟ್ಟು 12 ಜನರು ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ. ಇನ್ಸಟ್ಯೂಷನಲ್ ಕ್ವಾರಂಟೈನ್ ಗೆ ಇಂದು 15 ಜನರು ಸೇರಿದ್ದಾರೆ. ಒಟ್ಟಾರೆ ಇನ್ಸ್ಟ್ಯೂಷನಲ್ ಕ್ವಾರೆಂಟೈನ್ ಸಂಖ್ಯೆ 168ಕ್ಕೆ ಏರಿಕೆಯಾಗಿದೆ.
ಮಾದರಿ ಸಂಗ್ರಹ: ಇಂದು ಹೊಸದಾಗಿ 196 ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು 15393 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು 13408 ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. ಇಂದಿನ 196 ಬಾಕಿ ವರದಿ ಸೇರಿ ಒಟ್ಟು 1058 ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ.
You may like
ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್ಡೌನ್ ಫಿಕ್ಸಾ.?
ಸಿಎಂ ಬೊಮ್ಮಾಯಿ ಸೇರಿ ಸಂಪುಟದ ಐವರಿಗೆ ಕೊರೋನಾ ಶಾಕ್..!
ದೆಹಲಿ ಮಾದರಿ ಲಾಕ್ ಆಗುತ್ತಾ ಬೆಂಗಳೂರು.? ಯಾಕೆ..? ಏನಾಗ್ತಿದೆ ಬೆಂಗಳೂರಲ್ಲಿ.?
ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್
3 ತಿಂಗಳ ಬಳಿಕ ರಾಜ್ಯದಲ್ಲಿ ಕೊರೋನಾ ಭಾರೀ ಏರಿಕೆ : ಇದೇನಾ 3ನೇ ಅಲೆ.?
ನೀಟ್ ಪರೀಕ್ಷೆಯಲ್ಲಿ 9ನೇ ಸ್ಥಾನ : ಉಸ್ತುವಾರಿ ಸಚಿವ ಪ್ರಭುಚೌಹಾಣ್ರಿಂದ ಅಭಿನಂದನೆ