Connect with us

Featured

ಕಾಂಗ್ರೆಸ್ ನಾಯಕರಿಗೆ ಮಾಡಲು ಬೇರೆ ಕೆಲಸ ಇಲ್ಲ : ಕೈ ನಾಯಕರ ವಿರುದ್ಧ ಗುಡುಗಿದ ಸಚಿವ ಬಿ.ಸಿ.ಪಾಟೀಲ್

ರೈಸಿಂಗ್ ಕನ್ನಡ :

ಕೊಪ್ಪಳ:

ಕಾಂಗ್ರೆಸ್ ನಾಯಕರಿಗೆ ಮಾಡಲು ಬೇರೆ ಕೆಲಸ ಇಲ್ಲ. ವಿನಾಕಾರಣ ಸರಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆಯಲ್ಲಿನ ಅವ್ಯವಹಾರದ ಬಗ್ಗೆ ಕಾಂಗ್ರೆಸ್ ನಾಯಕರ ದೂರಿನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಸರಕಾರದ ಐವರು ಸಚಿವರು ಸಮಗ್ರ ಲೆಕ್ಕ ನೀಡಿದರೂ, ಇನ್ನೂ ಲೆಕ್ಕ ಲೆಕ್ಕ ಅಂತ ಕೇಳ್ತಾನೆ ಇದಾರೆ. ಜನರಿಗೆ ತಪ್ಪು ಮಾಹಿತಿ ನೀಡಿ, ಬಿಜೆಪಿ ಮತ್ತು ಸರ್ಕಾರಕ್ಕೆ ಕಪ್ಪು ಚುಕ್ಕೆ ಇಡಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಅದು ಎಂದೂ ಆಗದ ಕೆಲಸ ಎಂದರು.

Advertisement

ಜುಲೈ‌26ಕ್ಕೆ ಬಿಜೆಪಿ ಒಂದು ವರ್ಷದ ಆಡಳಿತ ಪೂರೈಸಿದೆ. ಈ ಒಂದು ವರ್ಷದಲ್ಲಿ ಎದುರಾದ ಸಂಕಷ್ಟ ಹಿಂದೆದೂ ಬಂದಿರಲಿಕ್ಕಿಲ್ಲ. ಯಡಿಯೂರಪ್ಪ ಅಧಿಕಾರ ವಹಿಸಿಕೊಂಡಾಗ ಬರ ತಾಂಡವವಾಡುತ್ತಿತ್ತು. ಅಧಿಕಾರ ವಹಿಸಿಕೊಂಡ ಕೆಲ ದಿನದಲ್ಲೇ ಅತಿವೃಷ್ಠಿ ಉಂಟಾಯಿತು. ಸಿಎಂ ಒಬ್ಬರೇ ಮುಂದೆ ನಿಂತು ನೆರೆ ಹಾವಳಿ ಸಮಸ್ಯೆಯನ್ನು ಎದುರಿಸಿದರು. ಕೋವಿಡ್19 ಸಂದರ್ಭದಲ್ಲೂ ಸಿಎಂ ಸಮಪರ್ಕವಾಗಿ ಕೆಲಸ ಮಾಡಿದ್ದಾರೆ. ಸಿಎಂ ಮುಳ್ಳಿನ ಹಾಸಿಗೆಯನ್ನು ಸೂಕ್ಷ್ಮವಾಗಿ ನಿರ್ವಹಣೆ ಮಾಡಿದರು. ಸಿಎಂ ಸಮರ್ಥ ನಾಯಕತ್ವದಿಂದ ಕೆಲಸ ಮಾಡುತ್ತಿದ್ದಾರೆ ಎಂದರು.

ಕೋವಿಡ್19 ಜಗತ್ತಿಗೆ‌ ಹೊಸದು. ಆರೋಗ್ಯ ಉಪಕರಣದ ಬೇಡಿಕೆ ಮತ್ತು ಸಪ್ಲೈಯಲ್ಲಿ ಅಸಮತೋಲನ ಉಂಟಾಗಿದೆ. ಈ ಕಾರಣಕ್ಕೆ ಒಂದಷ್ಟು ಹಣ ಹೆಚ್ಚು ನೀಡಿ ಖರೀದಿ ಮಾಡಲಾಗಿದೆ. ಶೀಘ್ರವೇ ಲೆಕ್ಕ ಕುರಿತು ಬ್ಲ್ಯಾಕ್ ಆ್ಯಂಡ್ ವೈಟ್‌ನಲ್ಲಿ ಕೊಡಲಾಗುತ್ತೆ ಎಂದು ತಿಳಿಸಿದರು.

ಅಕ್ರಮ ಮರಳಿಗೆ ನಿರ್ಧಾಕ್ಷಣ್ಯ ಕ್ರಮ

ಜಿಲ್ಲೆಯಲ್ಲಿ ಅಕ್ರಮಕ್ಕೆ ಅವಕಾಶ ನೀಡಲ್ಲ. ನನ್ನ ಹೆಸರಿನಲ್ಲಿ ಯಾರೇ, ಯಾವುದೇ ಅಕ್ರಮ‌ ಚಟುವಟಿಕೆ ನಡೆಸಿದರೂ ಸಹಿಸಲ್ಲ. ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಮರಳನ್ನ ನಿಯಮಬದ್ಧವಾಗಿ ತೆಗೆದುಕೊಂಡರೆ ಸಮಸ್ಯೆ ಇಲ್ಲ. ಅಕ್ರಮವಾಗಿ ಮರಳು ಸಾಗಣೆ ಮಾಡಿದರೆ ನಿಶ್ಚಿತವಾಗಿ ಕ್ರಮ ಎಂದರು.

ಜಿಲ್ಲೆಯ ಪೊಲೀಸ್ ಇಲಾಖೆಯ ಅಧಿಕಾರಿಗಳ ನಡುವೆ ಸಮನ್ವಯತೆ ಇಲ್ಲವಾಗಿದ್ದು, ಕಾನೂನು ಸುವ್ಯವಸ್ಥೆ ಮೇಲೆ ಪರಿಣಾಮ ಬೀರಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಪಾಟೀಲ ಅವರು, ಇದು ಪೊಲೀಸ್ ಇಲಾಖೆಯ ಆಂತರಿಕ ವಿಚಾರ. ಈ ಬಗ್ಗೆ ಎಸ್ಪಿ ಹಾಗೂ ಪೊಲೀಸ್ ಸಿಬ್ಬಂದಿ ಸಭೆ ನಡೆಸಿ ಮಾಹಿತಿ ಪಡೆಯುತ್ತೇನೆ ಎಂದು ತಿಳಿಸಿದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ