Featured
ಬಿಜೆಪಿಯ 24 ಶಾಸಕರಿಗೆ ಬಂಪರ್ ಗಿಫ್ಟ್: ವಿವಿಧ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ
ರೈಸಿಂಗ್ ಕನ್ನಡ :
ಬೆಂಗಳೂರು :
ಸರ್ಕಾರ ಒಂದು ವರ್ಷ ಪೂರೈಸಿದ ಸಂಭ್ರಮದ ಹಿನ್ನಲೆಯಲ್ಲಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಪಕ್ಷದ ಶಾಸಕರಿಗೆ ಬಂಪರ್ ಗಿಫ್ಟ್ ಕೊಟ್ಟಿದ್ದಾರೆ.
24 ಮಂದಿ ಶಾಸಕರಿಗೆ ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನವನ್ನ ನೀಡಿದ್ದಾರೆ.
ಈ ಹಿಂದೆ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದರಿಗೆ ಸಿಎಂ ಸಮಾಧಾನಕರ ಬಹುಮಾನ ನೀಡಿದ್ದಾರೆ. ಅರಗ ಜ್ಞಾನೇಂದ್ರ, ರಾಜುಗೌಡ್,ದತ್ತಾತ್ರೇಯ ಪಾಟೀಲ್ ರೇವೂರ್, ತಿಪ್ಪಾರೆಡ್ಡಿಗೆ ವಿವಿಧ ನಿಗಮ ಮಂಡಳಿಗಳಲ್ಲಿ ಸ್ಥಾನ ನೀಡಿದ್ದಾರೆ.
ವಿಶೇಷವೆಂದರೆ ಇತ್ತಿಚೆಗೆ ಅತೃಪ್ತರ ಸಭೆಯಲ್ಲಿ ಭಾಗವಹಿಸಿದ್ದವರಿಗೂ ಸಿಎಂ ಮಣೆ ಹಾಕಿದ್ದಾರೆ. ಪರಣ್ಣ ಮುನವಳ್ಳಿ, ಶಿವರಾಜ್ ಪಾಟೀಲ್, ರಾಜಕುಮಾರ್ ತೇಲ್ಕೋರ್ ಅವರಿಗೂ ಅಧ್ಯಕ್ಷ ಸ್ಥಾನ ನೀಡಿ ಸಮಾಧಾನ ಮಾಡಿದ್ದಾರೆ.
24 ಶಾಸಕರಿಗೆ ನಿಗಮದ ವಿವರ
ಅರಗ ಜ್ಞಾನೇಂದ್ರ (ತೀರ್ಥಹಳ್ಳಿ) ಕರ್ನಾಟಕ ಗೃಹಮಂಡಳಿ
ಎಂ.ಚಂದ್ರಪ್ಪ (ಹೊಳಲ್ಕೆರೆ) ರಾಜ್ಯ ರಸ್ತೆ ಸಾರಿಗೆ ಸಂಸ್ಥೆ
ರಾಜುಗೌಡ (ಸುರಪುರ) ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ
ಎಂ.ಪಿ.ಕುಮಾರಸ್ವಾಮಿ (ಮೂಡಿಗೆರೆ) ಕರ್ನಾಟಕ ಮಾರುಕಟ್ಟೆ ಕನ್ಸಲ್ಟೆಂಟ್ ಮತ್ತು ಏಜೆನ್ಸಿಸ್ ಲಿಮಿಟೆಡ್
ಎಎಸ್ ಪಾಟೀಲ್ ನಡಹಳ್ಳಿ (ಮುದ್ದೆ ಬಿಹಾಳ) ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು
ಎಚ್.ಹಾಲಪ್ಪ (ಸಾಗರ) ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್
ಮಾಡಳ್ ವಿರೂಪಾಕ್ಷಪ್ಪ (ಚನ್ನಗಿರಿ) ಕರ್ನಾಟಕ ಸಾಬೂನು ಮತ್ತು ಮರ್ಜಕ ನಿಗಮ
ತಿಪ್ಪಾರೆಡ್ಡಿ (ಚಿತ್ರದುರ್ಗ) ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ
ಶಿವನಗೌಡ ನಾಯಕ್(ದೇವದುರ್ಗ) ರಸ್ತೆ ಅಭಿವೃದ್ಧಿ ನಿಗಮ
ಕಳಕಪ್ಪ ಬಂಡಿ(ರೋಣ) ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ
ಪರಣ್ಣ ಮುನವಳ್ಳಿ (ಗಂಗಾವತಿ) ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ
ಸಿದ್ದು ಸವದಿ (ತೆರೆದಾಳ) ಕರ್ನಾಟಕ ಕೈಮಗ್ಗ, ಅಭಿವೃದ್ಧಿ ನಿಗಮ ನಿಯಮಿತ
ಪ್ರೀತಮ್ ಜಿ.ಗೌಡ (ಹಾಸನ) ಅರಣ್ಯ, ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ
ರಾಜ್ಕುಮಾರ್ ಪಾಟೀಲ್ ತೇಲ್ಕೂರ್ (ಸೇಡಂ) ಈಶಾನ್ಯ ಕರ್ನಾಟಕ ರಾಜ್ಯ ಸಾರಿಗೆ
ಶಂಕರ್ ಪಾಟೀಲ್ ಮುನೇನಕೊಪ್ಪ(ನವಲಗುಂದ) ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ
ಎಚ್.ನಾಗೇಶ್ (ತಿಪಟೂರು) ಕರ್ನಾಟಕ ತೆಂಗಿನ ನಾರಿನ ಅಭಿವೃದ್ಧಿ ನಿಗಮ
ಎಸ್.ವಿ.ರಾಮಚಂದ್ರ(ಜಗಳೂರು) ಮಹರ್ಷಿ ವಾಲ್ಮೀಕಿ ಪರಶಿಷ್ಟ ಪಂಗಡ ಅಭಿವೃದ್ಧಿ ನಿಗಮ
ನೆಹರೂ ಓಲೇಕಾರ್(ಹಾವೇರಿ)ಬಾಬು ಜಗಜೀವನ ರಾಮ್ ಚರ್ಮಕೈಗಾರಿಕಾ ಅಭಿವೃದ್ಧಿ ನಿಗಮ
ಐಹೊಳೆ ದುರ್ಯೋಧನ (ರಾಯಭಾಗ) ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ
ಲಾಲಾಜಿ ಆರ್.ಟಂಡನ್ (ಕಾಪು) ರಾಜ್ಯ ಹಿಂದುಳಿದ ವರ್ಗಗಳ ಆಯೋಗ
ಬಸವರಾಜ ದಡೇಸೂರ್ (ಕನಕಗಿರಿ) ರಾಜ್ಯ ಸಮಾಜ ಕಲ್ಯಾಣ ಅಭಿವೃದ್ಧಿ ಮಂಡಳಿ
ಡಾ.ಎಸ್.ಶಿವರಾಜ್ ಪಾಟೀಲ್ (ರಾಯಚೂರು) ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ
ಸಿ.ಎಸ್.ನಿರಂಜನ್ ಕುಮಾರ್ (ಗುಂಡ್ಲುಪೇಟೆ) ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?