Featured
ಸಿಎಂ ಬದಲಾವಣೆ ಮಾಡಿದ್ರೆ ಜನ ಚಪ್ಪಲಿ ಕೈಯಲ್ಲಿ ತೆಗೆದುಕೊಳ್ಳುತ್ತಾರೆ- ಬಿಜೆಪಿಯಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಆಗ್ತಿದೆ- ಪ್ರಮೋದ್ ಮುತಾಲಿಕ್ ಕಿಡಿ

ರೈಸಿಂಗ್ ಕನ್ನಡ:
ನಾಗರಾಜ್. ವೈ. ಕೊಪ್ಪಳ:
ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತು ಜೋರಾಗಿ ನಡೆಯುತ್ತಿದೆ. ದೆಹಲಿಯಲ್ಲಿ ಏನು ನಡೀತಾ ಇದೆ ಅನ್ನುವುದು ಯಾರಿಗೂ ತಿಳಿಯುತ್ತಿಲ್ಲ. ಈ ಮಧ್ಯೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಅನ್ನುವ ಚರ್ಚೆಗಳು ತೀವ್ರಗೊಂಡಿವೆ. ಕೊರೊನಾ ಮಹಾಮಾರಿ ಆಟ ಆಡುತ್ತಿರುವ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬದಲಾವಣೆಯಂತಹ ರಾಜಕಾರಣ ಮಾಡಬಾರದು. ಒಂದು ವೇಳೆ ಸಿಎಂ ಬದಲಾವಣೆ ಮಾಡಿದ್ದೇ ಆದರೆ, ನಿಮ್ಮಂತಹ ನಿರ್ಲಜ್ಜರು,ನಿಮ್ಮಂತಹ ಮೂರ್ಖರು ಯಾರೂ ಇಲ್ಲ ಎಂದು ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.
ಬಿಜೆಪಿಯ ಬೆಳವಣಿಗೆಗಳ ಬಗ್ಗೆ ಹರಿಹಾಯ್ದ ಪ್ರಮೋದ ಮುತಾಲಿಕ್, ಯಡಿಯೂರಪ್ಪರನ್ಉ ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದರೆ ಜನ ಬಿಡುವುದಿಲ್ಲ ಚಪ್ಪಲಿ ತೆಗೆದುಕೊಂಡು ಬೆನ್ನು ಹತ್ತುತ್ತಾರೆ ಎಂದುಎಚ್ಚರಿಕೆ ನೀಡಿದ್ದಾರೆ. ಬಿಜೆಪಿಯಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡಲಾಗುತ್ತಿದೆ. ಸಿಎಂ ಯಡಿಯೂರಪ್ಪ ನವರಿಗೆ ಎಲ್ರೂ ಸಹಕಾರ ಕೊಡಬೇಕು. ಟಿಪ್ಪು ಅಧ್ಯಾಯವನ್ನು ಪಠ್ಯಪುಸ್ತಕದಿಂದ ತೆಗೆದದ್ದು ಸ್ವಾಗತಾರ್ಹ ಕ್ರಮ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?