Featured
ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಕೊರೊನಾ 54,736 ಕೇಸ್, 17 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್ :
ಕಳೆದ 24 ಗಂಟೆಯಲ್ಲಿ ದೇಶಾದ್ಯಂತ ಕೊರೊನಾ ಆರ್ಭಟಕ್ಕೆ ಸೋಂಕಿತರ ಸಂಖ್ಯೆ 17 ಲಕ್ಷ ಗಡಿ ದಾಟಿದ್ದು ದೇಶದಲ್ಲಿ 54 ಸಾವಿರ ಕೇಸ್ ದಾಖಲಾಗಿದೆ.
ಶನಿವಾರ ದಾಖಲೆಯ 853 ಮಂದಿ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 37, 364 ಮಂದಿ ಸಾವನಪ್ಪಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯಲ್ಲಿ ದೇಸದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 17,50,724ಕ್ಕೆ ದಾಟಿದೆ. 5,76,730 ಸಕ್ರಿಯ ಪ್ರಕರಣಗಳಿವೆ. 11,45,630 ಸೋಂಕಿನಿಂದ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ.

ಮಹಾಮಾರಿಗೆ ಈವರೆಗೂ ದೇಶದಲ್ಲಿ 37,364 ಮಂದಿ ಬಲಿಯಾಗಿದ್ದಾರೆ. ಇದು ಸತತ ನಾಲ್ಕನೆ ದಿನವೂ ಸೋಂಕಿತರ ಸಂಖ್ಯೆ 50 ಸಾವಿರ ಗಡಿ ದಾಟಿದೆ.
ಜುಲೈ ತಿಂಗಳಲ್ಲಿ ದೇಶಾದ್ಯಂತ ಒಟ್ಟು 11.1 ಲಕ್ಷ ಕೊರೊನಾ ಪ್ರಕರಣಗಳು ದಾಖಲಾಗಿದ್ದು ಶೇ.65.48 ರಷ್ಟು ಎಂದು ಅಂದಾಜಿಸಲಾಗಿದೆ.
ಜನರು ಕೊರೊನಾ ಬಗ್ಗೆ ಇನ್ನಷ್ಟು ಎಚ್ಚರಿಕೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಕೇಂದ್ರ ಆರೋಗ್ಯ ಸಚಿವ ಸತ್ಯೆಂದರ್ ಜೈನ್ ತಿಳಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?