Connect with us

Featured

ಬೆಂಗಳೂರಲ್ಲಿ ಹೈ-ಅಲರ್ಟ್​ : ಉಗ್ರರಿಂದ ಬಾಂಬ್​ ದಾಳಿ ಭೀತಿ..!

ಬೆಂಗಳೂರು : ಯಾರೂ ನಿರೀಕ್ಷೆ ಮಾಡದ ರೀತಿಯಲ್ಲಿ ಬೆಂಗಳೂರಿನಲ್ಲಿ ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಜನ ಸಾಂದ್ರತೆ ಹೆಚ್ಚಿರೋ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಭಾಸ್ಕರ್​ ರಾವ್​ ಆದೇಶ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ವಹಿಸಬೇಕಾದ ಕಟ್ಟೆಚ್ಚರಗಳ ಕುರಿತು ಎಲ್ಲಾ ಪೊಲೀಸ್​ ಠಾಣೆಗಳಿಗೆ ಮಾಹಿತಿ ರವಾನೆ ಆಗಿದೆ. ಬೆಂಗಳೂರಿನ ವಿವಿಧೆಡೆ ಚೆಕ್​ಪೋಸ್ಟ್​ ಹಾಕಲಾಗಿದೆ. ಮಾಲ್​, ಮಾರುಕಟ್ಟೆ, ಪ್ರಮುಖ ಸರ್ಕಲ್​ಗಳು, ಚಿತ್ರಮಂದಿರಗಳು, ಫೈವ್​ ಸ್ಟಾರ್ ಹೊಟೇಲ್​ಗಳು, ಬೆಂಗಳೂರು ಮೆಟ್ರೋ, ವಿಧಾನಸೌಧ, ವಿಕಾಸಸೌಧ, KSRTC, BMTC ಬಸ್​ ಸ್ಟೇಷನ್​, ಶಾಲಾ-ಕಾಲೇಜುಗಳು, ಜನ ಸಾಂದ್ರತೆ ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸುವಂತೆ ಬೆಂಗಳೂರು ಪೊಲೀಸ್​ ಕಮೀಷನರ್ ಆದೇಶಿಸಿದ್ದಾರೆ.

ಸಿಸಿಟಿವಿ ಕ್ಯಾಮೆರಾಗಳು ಸರಿಯಾಗಿ ಕೆಲಸ ಮಾಡ್ತಿರುವ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ. ಪಿಜಿ ಹಾಸ್ಟೆಲ್ಸ್​​, ಅಪಾರ್ಟ್​ಮೆಂಟ್​ಗಳು, ಧಾರ್ಮಿಕ ಕೇಂದ್ರಗಳ ಸುತ್ತಮುತ್ತ ಭದ್ರತೆ ಪರಿಶೀಲನೆ ಮಾಡುವಂತೆ ಆದೇಶಿಸಲಾಗಿದೆ. ಪೊಲೀಸ್ ಕಮೀಷನರ್ ಆದೇಶದ ಹಿನ್ನೆಲೆಯಲ್ಲಿ ಇಡೀ ಬೆಂಗಳೂರಿಗೆ ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ.

ಹೈ ಅಲರ್ಟ್​​ ಯಾಕೆ..?

ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ನೀಡಿದ್ದ ಹೇಳಿಕೆ ಹಾಗೂ ಪಾಕಿಸ್ತಾನದ ಕುಕೃತ್ಯಗಳೇ ಈ ಹೈ ಅಲರ್ಟ್​ಗೆ ಕಾರಣ. ಪಾಕಿಸ್ತಾನದ ಮೇಲೆ ಅಣುಬಾಂಬ್​ ಪ್ರಯೋಗಕ್ಕೂ ನಾವು ಹಿಂದೆ ಸರಿಯಲ್ಲ. ಆದ್ರೆ, ನಾವೇ ಮೊದಲು ಬಾಂಬ್​ ಹಾಕಲು ಹೋಗಲ್ಲ ಎಂದು ರಾಜನಾಥ್ ಸಿಂಗ್, ಪಾಕಿಸ್ತಾನಕ್ಕೆ ಖಡಕ್ ವಾರ್ನಿಂಗ್ ನೀಡಿದ್ರು.

Advertisement

ಈ ಮಧ್ಯೆ, ಪಾಕಿಸ್ತಾನದ ಸೇನೆ ಗಡಿಯಲ್ಲಿ ಸನ್ನದ್ಧವಾಗಿದೆ ಎಂಬ ಮಾಹಿತಿ ಇದೆ. ಗಡಿಯಲ್ಲಿ ಪಾಕಿಸ್ತಾನ ಸೇನೆ ಜಮಾವಣೆ ಮಾಡಿದ್ದು, ದಾಳಿ ನಡೆಸೋ ಸಾಧ್ಯತೆ ಇದೆ ಎನ್ನಲಾಗಿದೆ. ಆದ್ರೆ, ಪಾಕಿಸ್ತಾನ ಸೇನೆಯನ್ನ ಪುಡಿ ಪುಡಿ ಮಾಡೋ ಶಕ್ತಿ ಭಾರತೀಯ ಸೇನೆಗಿದೆ.

ಭಯೋತ್ಪಾದಕ ದಾಳಿ ಸಾಧ್ಯತೆ..!

ಬೆಂಗಳೂರು ಸೇರಿದಂತೆ ದೆಹಲಿ, ಕೋಲ್ಕತ್ತಾ, ಹೈದ್ರಾಬಾದ್, ಮುಂಬೈ, ಚೆನ್ನೈನಂತಹ ಪ್ರಮುಖ ನಗರಗಳಲ್ಲೂ ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ. ಪಾಕಿಸ್ತಾನ ಸೇನೆ, ಭಾರತವನ್ನ ನೇರವಾಗಿ ಏನೂ ಮಾಡಲು ಸಾಧ್ಯವಿಲ್ಲ. ಹೀಗಾಗಿ, ಹಿಂಬಾಗಿಲ ಮೂಲಕ ಭಯೋತ್ಪಾದಕರನ್ನ ಬಳಸಿ, ವಿಧ್ವಂಸಕ ಕೃತ್ಯಗಳನ್ನ ಎಸಗಲು ಸಂಚು ರೂಪಿಸಿದೆ ಎನ್ನಲಾಗಿದೆ.

ಯಾವುದೇ ಕ್ಷಣದಲ್ಲೂ, ಎಲ್ಲಿ ಬೇಕಾದರೂ ಭಯೋತ್ಪಾದಕ ದಾಳಿ ನಡೆಯೋ ಸಾಧ್ಯತೆಯನ್ನ ತಳ್ಳಿ ಹಾಕುವಂತಿಲ್ಲ. ಹೀಗಾಗಿ, ಎಲ್ಲೆಡೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಆದೇಶಿಸಲಾಗಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ