Featured
ನಟ ಧ್ರುವ ಸರ್ಜಾ ಆರೋಗ್ಯದಲ್ಲಿ ಏರು ಪೇರು ವದಂತಿ: ಆತಂಕಗೊಂಡು ನಿಟ್ಟುಸಿರು ಬಿಟ್ಟ ಅಭಿಮಾನಿಗಳು
ರೈಸಿಂಗ್ ಕನ್ನಡ: ನ್ಯೂಸ್ ಡೆಸ್ಕ್:
ನಟ ಧ್ರುವ ಸರ್ಜಾ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆ ಸೇರಿದ್ದಾರೆ ಎಂಬ ಸುದ್ದಿ ಕಾಡ್ಗಿಚ್ಚಿನಂತೆ ಹರಡಿ ಅಭಿಮಾನಿಗಳನ್ನ ಆತಂಕಕ್ಕೀಡು ಮಾಡಿದ ಘಟನೆ ಶುಕ್ರವಾರ ನಡೆದಿದೆ.
ಕೆಲವು ದಿನಗಳ ಹಿಂದೆಯಷ್ಟೆ ಧ್ರುವ ಸರ್ಜಾ ತಮ್ಮ ಅಣ್ಣ, ನಟ ಚಿರಂಜೀವಿ ಸರ್ಜಾ ಅವರನ್ನ ಕಳೆದುಕೊಂಡು ದುಃಖದಲ್ಲಿದ್ದಾರೆ. ಅಗಲುವಿಕೆಯ ನೋವಿನಲ್ಲೆ ಧ್ರುವ ಸರ್ಜಾ ದಿನಗಳನ್ನ ಕಳೆಯುತ್ತಿದ್ದಾರೆ. ಇದರ ಪರಿಣಾಮ ಧ್ರುವ ಸರ್ಜಾ ಆರೋಗ್ಯದಲ್ಲಿ ಏರುಪೇರಾಗಿ ಎರಡು ದಿನಗಳ ಹಿಂದೆಯಷ್ಟೆ ಆಸ್ಪತ್ರೆಗೆ ಹೋಗಿದ್ದರು ಎಂದು ತಿಳಿದು ಬಂದಿದೆ.
ಧ್ರುವ ಸರ್ಜಾ ಆರೋಗ್ಯದಲ್ಲಿ ಏರುಪೇರಾದ ವಿಷಯ ವೈರಲ್ ಆಗಿ ಅಭಿಮಾನಿಗಳು ಆತಂಕಪಡುವಂತಾಯಿತು.ಆದರೆ ಸರ್ಜಾ ಕುಟುಂಬದ ಆಪ್ತ ಪ್ರಶಾಂತ್ ಸಂಬರ್ಗಿ, ಅಣ್ಣನ ಅಗಲಿಕೆಯ ನೋವಿನಲ್ಲಿ ಧ್ರುವ ಸರ್ಜಾ ಇರೋದು ನಿಜ. ಕಳೆದ ಎರಡು ದಿನಗಳಿಂದ ನಿದ್ದೆ ಬರದಿದ್ದ ಕಾರಣ ಆಸ್ಪತ್ರೆಗೆ ಹೋಗಿದ್ದರು. ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಇತ್ತ ಧ್ರುವ ಸರ್ಜಾ ಕೆಲವೇ ದಿನಗಳಲ್ಲಿ ಅಭಿಮಾನಿಗಳ ಮುಂದೆ ಬರುವುದಾಗಿ ಹೇಳಿ ಎಲ್ಲರನ್ನ ಸಮಧಾನಪಡಿಸಿದ್ದಾರೆ.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್