Featured
ಡ್ರಗ್ಸ್ ಜಾಲದ ನಂಟು: ತನಿಖೆಗೆ ಸಹಕರಿಸಿದ್ದೇವೆ, ಅಗತ್ಯವಿದ್ದರೆ ಮತ್ತೆ ಹಾಜರಾಗುತ್ತೇವೆ: ನಟ ದಿಗಂತ್

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್ :
ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ್ದೇವೆ. ತನಿಖೆಗೆ ಸಂಪೂರ್ಣವಾಗಿ ಸಹಕರಿಸಿದ್ದೇವೆ ವಿಚಾರಣೆಗೆ ಕರೆದರೆ ಮತ್ತೆ ಹಾಜರಾಗುತ್ತೇವೆ ಎಂದು ನಟ ದಿಗಂತ್ ಹೇಳಿದ್ದಾರೆ.
ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ನಂಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದರು. ಸ್ಯಾಂಡಲ್ವುಡ್ನ ಸ್ಟಾರ್ ದಂಪತಿಗಳಾದ ನಟ ದಿಗಂತ್ ಮತ್ತು ನಟಿ ಐಂದ್ರಿತಾ ರೇ ಮೂರು ಗಂಟೆಗೂ ಹೆಚ್ಚು ಕಾಲವಿಚಾರಣೆ ಎದುರಿಸಿ ಹೊರ ಬಂದರು.
ವಿಚಾರಣೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ದಿಗಂತ್, ತನಿಖೆಗೆ ಸಂಪೂರ್ಣವಾಗಿ ಸಹಕರಿಸಿದ್ದೇವೆ ವಿಚಾರಣೆಗೆ ಕರೆದರೆ ಮತ್ತೆ ಹಾಜರಾಗುತ್ತೇವೆ ಎಂದರು.
ಇನ್ನಷ್ಟು ಪ್ರಶ್ನೆಗಳನ್ನ ಕೇಳಿದಾಗ, ಬೇರೆ ಮಾಹಿತಿಗಳನ್ನ ಬಹಿರಂಗಪಡಿಸದಂತೆ ಸಿಸಿಬಿ ಪೊಲೀಸರು ಸೂಚಿಸಿದ್ದಾರೆ ಎಂದು ಹೇಳಿ ಆರ್ಟಿ ನಗರದಲ್ಲಿರುವ ತಮ್ಮ ಮನೆಗೆ ತೆರೆಳಿದರು.
ಇತ್ತ ಸಿಸಿಬಿ ಜಂಟಿ ಕಮಿಶನರ್ ಸಂದೀಪ್ ಪಾಟೀಲ್, ಒಂದು ಹಂತದ ವಿಚಾರಣೆ ಮುಗಿದಿದೆ. ಅಗತ್ಯವಿದ್ದರೆ ಮತ್ತೆ ನಟ ದಿಗಂತ್ ಮತ್ತು ನಟಿ ಐಂದ್ರಿತಾ ಕರೆಯುವುದಾಗಿ ಹೇಳಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?