ರೈಸಿಂಗ್ ಕನ್ನಡ :
ಬೆಂಗಳೂರು:
ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ನಟಿ ರಾಗಿಣಿ ಅವರನ್ನ ಮತ್ತೆ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಕೇಳಿಕೊಳ್ಳುವ ಸಾಧ್ಯತೆ ಇದೆ. ನಟಿ ರಾಗಿಣಿ ಮತ್ತು ಸಂಜನಾ ಗಲ್ರಾನಿ ಭವಿಷ್ಯ ಶುಕ್ರವಾರ ನಿರ್ಧಾರವಾಗಲಿದೆ.
ಬಂಧನದಲ್ಲಿರುವ ನಟಿ ರಾಗಿಣಿ ಅವರ ಐದು ದಿನಗಳ ಕಸ್ಟಡಿಗೆ ಶುಕ್ರವಾರ ಅಂತ್ಯವಾಗಲಿದೆ.
ಈ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ನಟಿ ರಾಗಿಣಿಯನ್ನ ಕಸ್ಟಡಿಗೆ ಕೊಡುವಂತೆ ಮನವಿ ಮಾಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ನ್ಯಾಯಾಧೀಶರ ಎದುರಿಗೆ ವಿಡಿಯೊ ಕಾನ್ಫೆರೆನ್ಸ್ ಮೂಲಕ ಹಾಜರು ಪಡಿಸಲಿದ್ದಾರೆ.
ಈಗಾಗಲೇ ನಟಿ ರಾಗಿಣಿ ಅವರನ್ನ 8 ದಿನಗಳ ಕಸ್ಟಡಿಗೆ ನೀಡಿರುವ ಹಿನ್ನಲೆಯಲ್ಲಿ ಮತ್ತೆ ಪೊಲೀಸ್ ಕಸ್ಟಡಿಗೆ ಕೊಡುವ ಸಾಧ್ಯತೆ ತೀರ ಕಡಿಮೆ ಇದೆ. ಒಂದು ವೇಳೆ ಕೊಟ್ಟರೂ 2 ಮೂರು ದಿನಗಳಷ್ಟೆ ಎಂದು ಹೇಳಲಾಗುತ್ತಿದೆ.ನಟಿ ರಾಗಿಣಿ ತನಿಖೆಗೆ ಸಹಕರಿಸಿಲ್ಲ.
ಕಸ್ಟಡಿಗೆ ಕೊಡದಿದ್ದರೇ ನ್ಯಾಯಾಂಗ ಬಂಧನಕ್ಕೆ ಕಳುಹಿಸುವ ಸಾಧ್ಯತೆ ಇದೆ. ರಾಗಿಣಿಗೆ ಪರಪ್ಪನ ಅಗ್ರಹಾರ ಜೈಲಾ ಅಥವಾ ಸಾಂತ್ವಾನ ಕೇಂದ್ರದಲ್ಲಿಯೇ ಉಳಿಯುತ್ತಾರಾ ಅನ್ನೊದನ್ನ ಕಾದು ನೋಡಬೇಕಿದೆ.
ಇನ್ನು ಇದೇ ಪ್ರಕರಣದಲ್ಲಿ ಬಂಧನಕೊಳ್ಳಗಾಗಿರುವ ಮತ್ತೋರ್ವ ನಟಿ ಸಂಜನಾ ಗಲ್ರಾನಿ
ಅವರನ್ನೂ ಕೂಡ ನ್ಯಾಯಾಯಲಯಕ್ಕೆ ಸಿಸಿಬಿ ಪೊಲೀಸರು ಹಾಜರುಪಡಿಸಲಿದ್ದಾರೆ. ಸಂಜನಾ ಗಲ್ರಾನಿ ಅವರ ಪೋಲೀಸ್ ಕಸ್ಟಡಿ ಶನಿವಾರಕ್ಕೆ ಅಂತ್ಯವಾಗಲಿದೆ.ಎರಡನೇ ಶನಿವಾರ ಸರ್ಕಾರಿ ರಜೆಯಾಗಿರುವುದರಿಂದ ಸಿಸಿಬಿ ಪೊಲೀಸರು ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ಕೇಳಬಹುದಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?