Featured
ಮುಖ್ಯಮಂತ್ರಿಗಳ ವೈಮಾನಿಕ ಸಮೀಕ್ಷೆ ಆಶಾದಾಯಕ: ಸಚಿವ ಪ್ರಭು ಚವ್ಹಾಣ್
![](https://risingkannada.com/wp-content/uploads/2020/10/cm-bsy-2.jpg)
ರೈಸಿಂಗ್ ಕನ್ನಡ:
ಬೀದರ್:
ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಇಂದು ಉತ್ತರ ಕರ್ನಾಟಕ ಭಾಗದಲ್ಲಿ ನಡೆಸಿರುವ ವೈಮಾನಿಕ ಸಮೀಕ್ಷೆ ಆಶಾದಾಯಕವಾಗಿದೆ ಎಂದು ಪಶು ಸಂಗೋಪನೆ, ವಕ್ಫ್, ಹಜ್ ಹಾಗೂ ಬೀದರ-ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ತಿಳಿಸಿದ್ದಾರೆ.
ಅತಿವೃಷ್ಟಿಯಿಂದ ಈ ಭಾಗದಲ್ಲಿ ಉಂಟಾಗಿರುವ ಹಾನಿಯನ್ನು ಮುಖ್ಯಮಂತ್ರಿಯವರು ಖುದ್ದಾಗಿ ವೀಕ್ಷಿಸಿದ್ದು,ಜತೆಯಲ್ಲಿ ಗೃಹಸಚಿವ ಬಸವರಾಜ್ ಬೊಮ್ಮಾಯಿ ಸಾಥ್ ನೀಡಿದ್ದರು, ಈದರೊಂದಿಗೆ ಬೀದರ ಹಾಗೂ ಯಾದರಿಯಲ್ಲಿ ಉಂಟಾಗಿರುವ ಬೆಳೆ ಹಾನಿ, ಮೂಲಭೂತ ಸೌಕರ್ಯಗಳ ನಷ್ಟ ಹೀಗೆ ನೆರೆ ಪ್ರಭಾವದಿಂದ ಜಿಲ್ಲೆಯ ಜನತೆ ಅನುಭವಿಸುತ್ತಿರುವ ಸಂಕಷ್ಟಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಸಚಿವ ಪ್ರಭುಚೌಹಾಣ್ ಹೇಳಿದ್ದಾರೆ.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಯಾದಗಿರಿ, ಕಲಬುರಗಿ, ಬೀದರ್ ಮತ್ತು ಬಳ್ಳಾರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಂದ ಬೀದರ ಮತ್ತು ಯಾದಗಿರಿ ಜಿಲ್ಲೆಗಳಲ್ಲಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ನಷ್ಟ, ಜೀವ ಹಾನಿ, ಜಲಾಶಯಗಳಲ್ಲಿ ನೀರಿನ ಸಂಗ್ರಹ ಸೇರಿದಂತೆ ನೆರೆ ಹಾನಿ ಕುರಿತಂತೆ ಸಮಗ್ರ ವರದಿ ಪಡೆದಿದ್ದಾರೆ.
ಮುಖ್ಯಮಂತ್ರಿಯವರೊಂದಿಗೆ ಬೆಂಗಳೂರಿಗೆ ವಾಪಸ್ಸಾದ ನಂತರವೂ ಜಿಲ್ಲೆಯ ಪ್ರವಾಹ ಸಂತ್ರಸ್ಥರಿಗೆ ತುರ್ತು ಪರಿಹಾರ ಕಲ್ಪಿಸುವಂತೆ ಮನವಿ ಮಾಡಿದ್ದೇನೆ. ಪ್ರವಾಹದಿಂದ ಆಗಿರುವ ಹಾನಿ, ರೈತರ ಬೆಳೆನಷ್ಟ ಎಲ್ಲವನ್ನು ಮುಖ್ಯಮಂತ್ರಿಗಳು ಖುದ್ದಾಗಿ ನೋಡಿದ್ದು, ರೈತರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ಜನರಿಗೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ಅಗತ್ಯ ಸೌಕರ್ಯ ಒದಗಿಸಲಾಗುವುದು ಎಂದು ತಿಳಿಸಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?