ಟಾಪ್ ನ್ಯೂಸ್
ರೇವಣ್ಣ ಬಂಧನ ಬೆನ್ನಲ್ಲೇ SIT ಸಂಪರ್ಕಕ್ಕೆ ಬಂದ ಮೂವರು ಸಂತ್ರಸ್ತೆಯರು..!

ಬೆಂಗಳೂರು : ಎಸ್ಐಟಿ ಅಧಿಕಾರಿಗಳು ಸದ್ಯ ಮೂವರು ಮಹಿಳೆಯರ ಪೂರ್ವಾಪರಿ ಪರಿಶೀಲನೆ ನಡೆಸುತ್ತಿದ್ದಾರೆ. ನಿಜಕ್ಕೂ ಸಂತ್ರಸ್ತೆಯರ ಅಥವಾ ಸುಳ್ಳು ದೂರು ನೀಡಲು ಬಂದಿದ್ದಾರಾ, ಜೊತೆಗೆ ಆರೋಪಕ್ಕೆ ಪೂರಕವಾದ ಸಾಕ್ಷಿಗಳು ಏನಾದರೂ ಇದೆಯಾ ಎಂಬ ಬಗ್ಗೆಯೂ ಅಧಿಕಾರಿಗಳು ಪ್ರಾಥಮಿಕ ಮಾಹಿತಿ ಕಲೆ ಹಾಕುತ್ತಿದ್ದಾರಂತೆ. ಒಂದು ವೇಳೆ ಎಸ್ ಐ ಟಿ ಪರಿಶೀಲನೆ ವೇಳೆ ಸತ್ಯಾಂಶ ಕಂಡು ಬಂದಲ್ಲಿ ಮತ್ತೆ ಮೂವರು ಪ್ರತ್ಯೇಕ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ದೂರು ದಾಖಲಿಸಿ ಮತ್ತೆ ಎಫ್ ಐ ಆರ್ ಗಳನ್ನು ದಾಖಲಿಸುವ ಸಾಧ್ಯತೆ ಇದ್ದು, ಹೀಗಾಗಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಮತ್ತೆ ಸಂಕಷ್ಟ ಹೆಚ್ಚಾಗಲಿದೆಯಾ ಎಂಬ ಪ್ರಶ್ನೆ ಎದುರಾಗಿದೆ.
ಇನ್ನು, ಮಾಜಿ ಸಚಿವ, ಹೊಳೆನರಸೀಪುರ ಶಾಸಕ ಎಚ್.ಡಿ ರೇವಣ್ಣ ಬಂಧನ ಹಿನ್ನೆಲೆಯಲ್ಲಿ ಬೆಂಗಳೂರಿನ ಬಸವನಗುಡಿಯ ರೇವಣ್ಣ ನಿವಾಸ ಖಾಲಿ ಖಾಲಿಯಾಗಿದೆ. ಭವಾನಿ ರೇವಣ್ಣ, ಸೂರಜ್ ರೇವಣ್ಣ ಅವರು ಹೊಳೆನರಸೀಪುರ ನಿವಾಸಕ್ಕೆ ತೆರಳಿದ್ದಾರೆ. ಸದ್ಯ ಮನೆಯ ಬಳಿ ಮನೆ ಕೆಲಸದವರು, ಪೊಲೀಸ್ ಸಿಬ್ಬಂದಿ ಮಾತ್ರ ಇದ್ದಾರೆ.
ಈ ನಡುವೆ ಮಾಜಿ ಸಚಿವ ರೇವಣ್ಣ ಹಠಾತ್ ಬಂಧನದಿಂದ ಹೊಳೆನರಸೀಪುರದಲ್ಲಿ ಆತಂಕ ಮಡುಗಟ್ಟಿದೆ. ತಮ್ಮ ನಾಯಕನ ಬಂಧನ ಖಂಡಿಸಿ ಇಂದು ಪ್ರತಿಭಟನೆ ನಡೆಸಲು ಜೆಡಿಎಸ್ ಸ್ಥಳೀಯ ನಾಯಕರು ಸಿದ್ಧತೆ ನಡೆಸಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಲಿದ್ದಾರಂತೆ.
ಸತತ 20 ವರ್ಷಗಳಿಂದ ಹೊಳೆನರಸೀಪುರ ಕ್ಷೇತ್ರದ ಶಾಸಕರಾಗಿದ್ದು, ಸಚಿವರಾಗಿಯೂ ಕೆಲಸ ಮಾಡಿದ್ದರು. ಸದ್ಯ ರೇವಣ್ಣ ಅವರ ಬಂಧನದಿಂದ ಆಘಾತಗೊಂಡಿರುವ ಜೆಡಿಎಸ್ ಕಾರ್ಯಕರ್ತರು, ಬಹಿರಂಗವಾಗಿ ಮುಕ್ತವಾಗಿ ಸಮರ್ಥನೆ ಮಾಡಿಕೊಳ್ಳಲಾಗದ ಅಸಹಾಯಕ ಸ್ಥಿತಿಗೆ ತಲುಪಿದ್ದಾರಂತೆ. ಈ ನಡುವೆ ಪ್ರತಿಭಟನೆಯ ಹಿನ್ನೆಯಲ್ಲಿ ಹೊಳೆನರಸೀಪುರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?