Featured
ಮತ್ತೆ ಗಡಿ ಅತಿಕ್ರಮಣಕ್ಕೆ ಚೀನಾ ಕುತಂತ್ರ: ಹಿಮ್ಮೆಟಿಸಿದ ಭಾರತೀಯ ಸೇನೆ

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಲಡಾಖ್ನಲ್ಲಿ ಚೀನಾದ ಮೊಂಡುತನ ಮುಂದುವರೆದಿದ್ದು ಇದೀಗ ಎಲ್ಒಸಿಯಲ್ಲಿ ಅತಿಕ್ರಮಣಕ್ಕೆ ಪ್ರಯತ್ನಿಸಿದೆ.
ಒಂದು ತಿಂಗಳ ಹಿಂದೆಯಷ್ಟೆ ಗಲ್ವಾನ್ ಕಣಿವೆಯಲ್ಲಿ ಭಾರತದ ಭಾಗವನ್ನ ಅತಿಕ್ರಮಿಸಿ ಅಮಾನುಷ ಹಲ್ಲೆ ಎಸಗಿದ ಘಟನೆ ನಡೆದು ಎರಡು ತಿಂಗಳು ಕಳೆದಿಲ್ಲ ಆಗಲೇ ಚೀನಾ ಮತ್ತೆ ಅತಿಕ್ರಮಣಕ್ಕೆ ಪ್ರಯತ್ನಿಸಿರುವ ವಿಚಾರ ಮತ್ತೆ ಬೆಳಕಿಗೆ ಬಂದಿದೆ.
ಮೊನ್ನೆ ಶುಕ್ರವಾರ 29-30ರ ರಾತ್ರಿ ವಿವಾದಿತ ಪಾಂಗೋಂಗ್ ಟ್ಸೋ ಸರೋವರದ ದಕ್ಷಿಣ ಭಾಗದಲ್ಲಿ ಚೀನಿ ಸೈನಿಕರು ಅತಿಕ್ರಮಣಕ್ಕೆ ಮುಂದಾಗಿದ್ದಾರೆ. ಮೊದಲೇ ಈ ಸಂದರ್ಭವನ್ನ ನಿರೀಕ್ಷಿಸಿದ್ದ ಭಾರತೀಯ ಸೈನಿಕರು ಚೀನಾ ಸೈನಿಕರನ್ನ ಹಿಮ್ಮೆಟಿಸಿದ್ದಾರೆ ಎಂದು ಭಾರತೀಯ ಸೇನಾಧಿಕಾರಿಗಳು ತಿಳಿಸಿದ್ದಾರೆ.

ಮತ್ತೆ ಅತಿಕ್ರಮಣಕ್ಕೆ ಮುಂದಾಗುವ ಮೂಲಕ ಗಾಲ್ವಾನ್ ಸಂಘರ್ಷದ ಉಭಯ ದೇಶಗಳು ಒಪ್ಪಿಕೊಂಡಿದ್ದ ಯಥಾಸ್ಥಿತಿಯನ್ನ ಚೀನಾ ಮುರಿದಿದೆ.
ಮಾತುಕತೆ ಮೂಲಕ ಶಾಂತಿ ಕಾಪಾಡಲು ಭಾರತೀಯ ಸೇನೆ ಬದ್ಧವಾಗಿದೆ. ಜೊತೆಗೆ ತನ್ನ ಭೂಪ್ರಧೇಶವನ್ನ ರಕ್ಷಣ ಮಾಡಿಕೊಳ್ಳುವುದಕ್ಕೂ ಬದ್ದವಾಗಿದೆ. ಚುಶುಲ್ ಪ್ರದೇಶದಲ್ಲಿ ಉಭಯ ದೇಶಗಳ ಸೇನಾಪಡೆಗಳ ಬ್ರಗೇಡ್ ಕಮಾಂಡರ್ ಮಟ್ಟದಲ್ಲಿ ಫ್ಲಾಗ್ ಮೀಟಿಂಗ್ ನಡೆಯುತ್ತಿದ್ದು ಅಲ್ಲಿ ಈ ವಿಚಾರಗಳನ್ನ ಚರ್ಚಿಸಲಾಗುವುದೆಂದು ಸೇನಾ ಅಧಿಕಾರಿ ತಿಳಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?