Featured
ಲಾಕ್ಡೌನ್ನಲ್ಲಿ ಅಕ್ರಮ ಮದ್ಯ ಮಾರಾಟ : ಯಾದಗಿರಿಯಲ್ಲಿ 2.30 ಲಕ್ಷ ರೂ. ಮದ್ಯ ವಶ

ರೈಸಿಂಗ್ ಕನ್ನಡ:
ಪ್ರತಿನಿಧಿ, ದುರ್ಗೇಶ್ ಮಂಗಿಹಾಳ, ಯಾದಗಿರಿ :
ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಕಡಿವಾಣ ಹಾಕಲು ಲಾಕ್ಡೌನ್ ಜಾರಿ ಮಾಡಿದ ಹೊರತಾಗಿಯೂ ಅಕ್ರಮವಾಗಿ ನಡೆಯುತ್ತಿದ್ದ ಮದ್ಯ ಮಾರಾಟಕ್ಕೆ ಸುರಪುರ ಪೊಲೀಸರು ಕಡಿವಾಮ ಹಾಕಿದ್ದಾರೆ.
ಕೊರೊನಾ ಭೀತಿ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮದ್ಯ ಮಾರಾಟ ನಿಷೇಧ ಮಾಡಿ ಕಟ್ಟುನಿಟ್ಟಿನ ಕ್ರಮಕೈಗೊಂಡಿದೆ. ಜಿಲ್ಲೆಯಲ್ಲಿ ಲಾಕ್ ಡೌನ್ ನಡುವೆಯೂ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತಿತ್ತು.

ಖಚಿತ ಮಾಹಿತಿ ಮೇರೆಗೆ ಸುರಪುರ ಡಿವೈಎಸ್ಪಿ ವೆಂಕಟೇಶ ಹೊಗಿಬಂಡಿ ನೇತೃತ್ವದ ತಂಡ ದಾಳಿ ಮಾಡಿ 2.30 ಲಕ್ಷ ರೂ. ಮೌಲ್ಯದ ಮದ್ಯ ಜಪ್ತಿ ಮಾಡಿದೆ. ಶಹಾಪುರ ಪಟ್ಟಣದ ವೈಷ್ಣವಿ ಲಾಡ್ಜ್ ಹಾಗೂ ಭಾಗ್ಯವಂತಿ ಡಾಬಾದ ಮೇಲೆ ದಾಳಿ ಮಾಡಿ ಭಾರೀ ಮೌಲ್ಯದ ಮದ್ಯವನ್ನ ವಶಪಡಿಸಿಕೊಳ್ಳಲಾಗಿದೆ.
ಲಾಡ್ಜ್ ಮಾಲೀಕ ಉದಯನನ್ನ ಪೊಲೀಸರು ಬಂಧಿಸಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 2 ಲಕ್ಷ 30 ಸಾವಿರ ಮೌಲ್ಯದ ಅಕ್ರಮ ಮದ್ಯ ಜಪ್ತಿ ಮಾಡಿ ಕ್ರಮಕೈಗೊಂಡಿದೆ.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್