Featured
ಎಲ್ಲಾ ಅನರ್ಹರಿಗೂ ಬಿಜೆಪಿ ಟಿಕೆಟ್..! ಬಿಜೆಪಿ ಸೇರ್ಪಡೆ ಯಾವಾಗ..?
ಬೆಂಗಳೂರು : ಅನರ್ಹರು ಚುನಾವಣೆಗೆ ಸ್ಪರ್ಧೆ ಮಾಡಬಹುದು ಎಂಬ ತೀರ್ಪು ಬಂದಾಗಿದೆ. ಇನ್ನೇನಿದ್ರೂ, ಬಿಜೆಪಿ ಸೇರ್ಪಡೆಯಾಗಿ ಚುನಾವಣೆ ನಿಲ್ಲೋದು ಮಾತ್ರ ಬಾಕಿ ಇದೆ. ಹಾಗಿದ್ರೆ, ಎಲ್ಲಾ 17 ಅನರ್ಹರಿಗೆ ಬಿಜೆಪಿ ಟಿಕೆಟ್ ನೀಡುತ್ತಾ..? ಎಲ್ಲರೂ ಬಿಜೆಪಿಯಿಂದಲೇ ಸ್ಪರ್ಧೆ ಮಾಡ್ತಾರಾ ಅನ್ನೋದು ಸದ್ಯದ ಪ್ರಶ್ನೆ.
ಬಹುತೇಕ ಕ್ಷೇತ್ರಗಳಲ್ಲಿ ಅನರ್ಹರು ಬಿಜೆಪಿಯಿಂದಲೇ ಸ್ಪರ್ಧೆ ಮಾಡ್ತಾರೆ. ಆದ್ರೆ, ಅನರ್ಹರಿಗೆ ಬಿಜೆಪಿ ಟಿಕೆಟ್ ನೀಡಿದ್ರೂ, ಬಂಡಾಯ ಮಾತ್ರ ತಪ್ಪಿಲ್ಲ. ಅದರಲ್ಲೂ ಪ್ರಮುಖವಾಗಿ ಹೊಸಕೋಟೆ ಕ್ಷೇತ್ರದಲ್ಲಿ ಎಂಟಿಬಿ ನಾಗರಾಜ್ಗೆ ಶರತ್ ಬಚ್ಚೇಗೌಡ ಸವಾಲ್ ಆಗಿರೋದು ಬಿಜೆಪಿಗೆ ತಲೆನೋವಾಗಿದೆ. ಕಾಗವಾಡ ಕ್ಷೇತ್ರದಲ್ಲಿ ರಾಜುಕಾಗೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದು, ಬಿಜೆಪಿಗೆ ತಲೆನೋವಾಗಲಿದ್ದಾರೆ.
ಈಗಾಗಲೇ ಸಿಎಂ ಯಡಿಯೂರಪ್ಪ ಬಿಜೆಪಿ ಹೈಕಮಾಂಡ್ ಜೊತೆ ಮಾತುಕತೆ ನಡೆಸಿದ್ದಾರೆ. ಇವತ್ತೇ ಅನರ್ಹರ ಜೊತೆ ಸಭೆ ನಡೆಸಿ, ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಈ ಮಧ್ಯೆ, ಕೂಡಲೇ ಬಂಡಾಯ ಶಮನ ಮಾಡಬೇಕು ಎಂಬುದರ ಬಗ್ಗೆ ಸಿಎಂ ಬಿಎಸ್ವೈ ಚಿಂತನೆ ನಡೆಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?