Featured
ಕೊರೊನಾ ಗೆದ್ದ ಬಿಗ್ ಬಿ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಅಮಿತಾಭ್ ಬಚ್ಚನ್
![](https://risingkannada.com/wp-content/uploads/2020/08/amitabh-bachchan-1459868103.jpg)
ರೈಸಿಂಗ್ ಕನ್ನಡ :
ಮುಂಬೈ :
ಕೊರೊನಾ ಸೋಂಕಿಗೆ ಗುರಿಯಾಗಿ ಆಸ್ಪತ್ರೆ ಸೇರಿದ್ದ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಕಿಲ್ಲರ್ ಕೋವಿಡ್ ವಿರುದ್ಧ ಹೋರಾಡಿ ಸಂಪೂರ್ಣವಾಗಿ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ.
20 ದಿನಗಳ ಹಿಂದೆ ಸೋಂಕಿಗೆ ಗುರಿಯಾಗಿದ್ದ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಇಲ್ಲಿನ ಪ್ರತಿಷ್ಠಿತ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರೊಂದಿಗೆ ಪುತ್ರ, ನಟ ಅಭಿಷೇಕ್ ಬಚ್ಚನ್ ಕೂಡ ಸೋಂಕಿಗೆ ತುತ್ತಾಗಿ ಆಸ್ಪತ್ರೆ ಸೇರಿದ್ದರು. ಇದಾದ ನಂತರ ನಟಿ ಐಶ್ವರ್ಯ ರೈ ಮತ್ತು ಪುತ್ರಿ ಕೂಡ ಕೊರೊನಾದಿಂದಾಗಿ ಆಸ್ಪತ್ರೆಗೆ ದಾಖಲಾದರು.
![](https://risingkannada.com/wp-content/uploads/2020/08/amitabh-bacchan-tweet.jpg)
ಇದೀಗ ಅಮಿತಾಭ್ ಬಚ್ಚನ್ ಸೋಂಕಿನಿಂದ ಗುಣಮುಖರಾಗಿದ್ದು ಇತ್ತಿಚೆಗೆ ಮತ್ತೆ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದರು. ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದರಿಂದ ಅಮಿತಾಭ್ ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಆಸ್ಪತ್ರೆಯಿಂದ ಮನೆಗೆ ಅಮಿತಾಭ್ ಬಚ್ಚನ್ ಆ್ಯಂಬುಲೆನ್ಸ್ನಲ್ಲಿ ಬಂದಿಳಿದರು.ನಟ ಅಭಿಷೇಕ್ ಬಚ್ಚನ್ ಮತ್ತು ಅಮಿತಾಭ್ ಬಚ್ಚನ್ ತಮ್ಮ ಟ್ವೀಟರ್ ಖಾತೆಯಲ್ಲಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?