Connect with us

ಕ್ರೀಡೆ

ಹಾರ್ದಿಕ್ ಪಾಂಡ್ಯಗೆ ಬ್ಯಾಟ್ ಹಿಡಿಯಲು ಪಾಠ ಹೇಳಿದ ಅನಿಲ್ ಕುಂಬ್ಳೆ!

ಬೆಂಗಳೂರು: ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಟಾಪ್ ಆರ್ಡರ್ ನಲ್ಲಿ ಬ್ಯಾಟ್ ಮಾಡಬೇಕೆಂದು ಟೀಮ್ ಇಂಡಿಯಾದ ಮಾಜಿ ಹೆಡ್ ಕೋಚ್ ಅನಿಲ್ ಕುಂಬ್ಳೆ ಸಲಹೆ ನೀಡಿದ್ದಾರೆ. ಮಾರ್ಚ್ 27 ರಂದು ಮುಂಬೈ ಇಂಡಿಯನ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ತಂಡದ ಪೈಪೋಟಿ ಎದುರಿಸಲು ಸಜ್ಜಾಗಿದೆ.

ಹದಿನೇಳನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ನ ಆರಂಭಿಕ ಪಂದ್ಯದಲ್ಲೇ ಹಾರ್ದಿಕ್ ಪಾಂಡ್ಯ ಸಾರಥ್ಯದ ಮುಂಬೈ ಇಂಡಿಯನ್ಸ್, ಯುವ ನಾಯಕ ಶುಭಮನ್ ಗಿಲ್ ಕ್ಯಾಪ್ಟನ್ಸಿಯ ಗುಜರಾತ್ ಟೈಟನ್ಸ್ ವಿರುದ್ಧ 6 ರನ್ ಗಳ ಸೋಲು ಕಂಡಿದ್ದು, ಗೆಲುವಿನ ಲಯಕ್ಕೆ ಮರಳಲು ಹೊರಟಿದೆ.

ಜಿಯೋ ಸಿನಿಮಾ ಜೊತೆ ಸ್ಪಿನ್ ದಿಗ್ಗಜ ಅನಿಲ್ ಸಂವಾದ ನಡೆಸಿದ್ದು, 169 ರನ್ ಗಳ ಗುರಿ ಹಿಂಬಾಲಿಸಿದ್ಧ ಮುಂಬೈ ಇಂಡಿಯನ್ಸ್ 162 ರನ್ ಗಳಿಗೆ ಸೀಮಿತಗೊಂಡು 6 ರನ್ ಗಳಿಂದ ಸೋಲು ಕಾಣಲು ಹಾರ್ದಿಕ್ ಪಾಂಡ್ಯ 7ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ್ದು ಪ್ರಮುಖ ಕಾರಣವಾಗಿದೆ. ಪಂದ್ಯದಲ್ಲಿ ಕೊನೆಯ 5 ಓವರ್ ಗಳಲ್ಲಿ ತಂಡಕ್ಕೆ ಗೆಲ್ಲಲು 43 ರನ್ ಅವಶ್ಯಕತೆ ಇತ್ತು.

ವಿಶ್ವದ ಐಷಾರಾಮಿ ಟಿ20 ಕ್ರಿಕೆಟ್ ಲೀಗ್ ನಲ್ಲಿ ಗುಜರಾತ್ ಟೈಟನ್ಸ್ ಪರ 4ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ್ದ ಹಾರ್ದಿಕ್ ಪಾಂಡ್ಯ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನದಿಂದ ಎಲ್ಲರನ್ನೂ ಚಕಿತಗೊಳಿಸಿದ್ದರು. ಆದರೆ ಮುಂಬೈ ಇಂಡಿಯನ್ಸ್ 12 ಎಸೆತಗಳಲ್ಲಿ ಗೆಲ್ಲಲು 25 ರನ್ ಗಳ ಅವಶ್ಯಕತೆ ಇದ್ದಾಗ ಹಾರ್ದಿಕ ಪಾಂಡ್ಯ ಕ್ರೀಸ್ ಗೆ ಬಂದಿದ್ದರು.

“ಮುಂಬೈ ಇಂಡಿಯನ್ಸ್ ಪ್ರಸಕ್ತ ಐಪಿಎಲ್ ಟೂರ್ನಿಯ ಮೊದಲ ಪಂದ್ಯದಲ್ಲಿ ಅತ್ಯುತ್ತಮ ಸ್ಥಿತಿಯಲ್ಲಿತ್ತು. ಕೊನೆಯ 5 ಓವರ್ ಗಳಲ್ಲಿ ಗೆಲ್ಲಲು 43 ರನ್ ಬೇಕಿದ್ದು 7 ವಿಕೆಟ್ ಉಳಿದಿದ್ದವು. ಅವರು ಪಂದ್ಯವನ್ನು ಅಂತಿಮ ಓವರ್ ಗಳವರೆಗೆ ತೆಗೆದುಕೊಂಡು ಹೋಗಲು ನಿರ್ಧರಿಸಿದ್ದರು. ಟಿ20 ಕ್ರಿಕೆಟ್ ನಲ್ಲಿ ಹಾರ್ದಿಕ್ ಪಾಂಡ್ಯ ಮೇಲ್ಪಂಕ್ತಿಯಲ್ಲಿ ಬಂದು ಬ್ಯಾಟ್ ಮಾಡಬೇಕು.

ನೀವು ಚೇಸ್ ಮಾಡುವಾಗ ಪಂದ್ಯವನ್ನು 19 ಓವರ್ ಗಳಲ್ಲೇ ಮುಗಿಸಲು ಪ್ರಯತ್ನಿಸಬೇಕು. 20ನೇ ಓವರ್ ಗಳವರೆಗೆ ತೆಗೆದುಕೊಂಡು ಹೋಗಲು ನೋಡಬಾರದು. ಹಿಂದಿನ ಪಂದ್ಯದ ಸೋಲಿನಿಂದ ಮುಂಬೈ ಇಂಡಿಯನ್ಸ್ ತಮ್ಮ ತಪ್ಪನ್ನು ಅರಿತುಕೊಂಡು ಮುಂದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಬೇಕು,” ಎಂದು ಅನಿಲ್ ಕುಂಬ್ಳೆ ಹೇಳಿದ್ದಾರೆ.

Advertisement
00

ಐಪಿಎಲ್ ಟೂರ್ನಿಯ 17ನೇ ಸೀಸನ್ ನಲ್ಲಿ ಬುಧವಾರ (ಮಾರ್ಚ್ 27) ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ತಂಡವು ತಮ್ಮ ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 4 ರನ್ ಗಳಿಂದ ಸೋಲು ಕಂಡಿರುವ ಪ್ಯಾಟ್ ಕಮ್ಮಿನ್ಸ್ ಸಾರಥ್ಯದ ಸನ್ ರೈಸರ್ಸ್ ಹೈದರಾಬಾದ್ ತಂಡದ ಸವಾಲು ಎದುರಿಸಲಿದೆ.

ಆರೋಗ್ಯ4 days ago

ಕಾಫಿ ಜೊತೆ 1 ಸ್ಪೂನ್‌ ತುಪ್ಪ ಸೇರಿಸಿ ಕುಡಿರಿ, ಸೊಂಟ ಸುತ್ತ ಇರೋ ಬೊಜ್ಜು ಅದ್ರಂತೆ ಕರಗಿಹೋಗುತ್ತೆ!

ರಾಜಕೀಯ2 weeks ago

ಶ್ರೀರಾಮನ 500 ವರ್ಷಗಳ ವನವಾಸಕ್ಕೆ ಮುಕ್ತಿ, ಪ್ರಧಾನಿ ನರೇಂದ್ರ ಮೋದಿಯಿಂದ ರಾಮರಾಜ್ಯ ನಿರ್ಮಾಣ

ಆರೋಗ್ಯ2 weeks ago

ಹೆಂಡತಿ ಗರ್ಭಿಣಿಯಾಗಿದ್ದಾಗ ಪ್ರತಿಯೊಬ್ಬ ಗಂಡಂದಿರು ಮಾಡಲೇಬೇಕಾದ ಕೆಲಸಗಳಿವು!

ಸಿನಿಮಾ2 weeks ago

ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ, ಪಂಚಭೂತಗಳಲ್ಲಿ ಪ್ರಚಂಡ ಕುಳ್ಳ ಲೀನ

ಸಿನಿಮಾ2 weeks ago

ದ್ವಾರಕೀಶ್ ಅಂತಿಮ ದರ್ಶನಕ್ಕೆ ಬಂದ ಯಶ್ ದಂಪತಿ

ಸಿನಿಮಾ2 weeks ago

ಮಂತ್ರಾಲಯ ಭಕ್ತರಿಗೆ ಒಂದೊಳ್ಳೆ ಗಿಫ್ಟ್ ಕೊಟ್ಟಿದ್ರು ಈ ಹಾಸ್ಯನಟ!

ಜ್ಯೋತಿಷ್ಯ2 weeks ago

ಭಗವಾನ್ ರಾಮನಿಗೆ ಈ ವಸ್ತುಗಳನ್ನ ಅರ್ಪಿಸಿ, ಸಂತೋಷ-ಸಮೃದ್ಧಿ ಸಿಗುತ್ತೆ

ಬೆಂಗಳೂರು2 weeks ago

ದ್ವಾರಕೀಶ್ ನಿಧನಕ್ಕೆ ಪ್ರಧಾನಿ ಮೋದಿ, ರಜನಿಕಾಂತ್ ಸಂತಾಪ..!

ಕ್ರೀಡೆ3 weeks ago

ಟಾಸ್​​ ಗೆದ್ದ ಬೆಂಗಳೂರು ಟೀಂ, ಆರ್​​ಸಿಬಿ ಪ್ಲೇಯಿಂಗ್​ 11ನಿಂದ ಸಿರಾಜ್-ಮ್ಯಾಕ್ಸಿ​ ಔಟ್!

ಬೆಂಗಳೂರು3 weeks ago

ಶಿವರಾಜ್​ಕುಮಾರ್ ಬ್ಯಾಂಕ್ ಬ್ಯಾಲೆನ್ಸ್ ಎಷ್ಟು ಕೋಟಿ ಸಾಲ ಗೊತ್ತಾ..?

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured10 months ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured10 months ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

ಆರೋಗ್ಯ2 years ago

ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್​ಡೌನ್​ ಫಿಕ್ಸಾ.?