Connect with us

ಬೆಂಗಳೂರು

ಸಂವಿಧಾನ ವಿರೋಧಿ ಸರ್ಕಾರ ವಜಾ ಮಾಡಲು ರಾಜ್ಯಪಾಲರಿಗೆ ಮನವಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಾಕಿಸ್ತಾನ ಪರ ಹೇಳಿಕೆ ನೀಡಿರುವುದರ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ಗಿಲ್ಲ. ದೇಶವಿರೋಧಿಗಳ ರಕ್ಷಣೆ ಮಾಡುತ್ತಿದೆ. ಈ ಸರ್ಕಾರ ವಜಾವನ್ನು ಮಾಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿರುವುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ‌ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ. ಮುಖ್ಯಮಂತ್ರಿ ಮಂಡಿಸಿರುವ ಬಜೆಟ್ ಸತ್ಯಕ್ಕೆ ದೋರವಾಗಿದೆ. ಈಗ ಪಾಕಿಸ್ತಾನ‌ ಪರ ಘೋಷಣೆ ಕೂಗಿದವರ ರಕ್ಷಣೆ ಮಾತನಾಡುತ್ತ ನೈತಿಕವಾಗಿ ದಿವಾಳಿಯಾಗಿದ್ದಾರೆ. ಇವರು ಪ್ರಜಾಪ್ರಭುತ್ವ ಕ್ಕೆ ದಕ್ಕೆಯಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ‌ ಎಂದು ಆರೋಪಿಸಿದರು.

ವಿಧಾನ ಸೌಧದಲ್ಲಿಯೇ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು, ದೇಶದ ರಕ್ಷಣೆಗೆ ಇದು ಆಪತ್ತು ಉಂಟು ಮಾಡಿದೆ. ಅಧಿವೇಶವನ ಮುಗಿದ ತಕ್ಷಣ ಇದೆಲ್ಲ ಮರೆತು ಹೋಗುತ್ತಾರೆ ಎಂದು ಕಾಂಗ್ರೆಸ್ ನವರು ಅಂದುಕೊಂಡಿದ್ದಾರೆ. ಆದರೆ, ಇದನ್ನು ರಾಜ್ಯದ ಜನರು ಮರೆಯುವುದಿಲ್ಲ. ನಮ್ಮ ಹೋರಾಟ ಮುಂದುವರೆಯುತ್ತದೆ ಎಂದರು.

ಪಾಕ್ ಪರವಾಗಿ ಸರ್ಕಾರ ನಿಲ್ಲುತ್ತದೆ ಅಂದರೆ, ಈ ಸರ್ಕಾರ ಅಧಿಕಾರದಲ್ಲಿ ಮುಂದುವರೆಯಲು ನೈತಿಕತೆ ಇಲ್ಲ. ಈ ಸರ್ಕಾರ ಎಷ್ಟು ಬೇಗ ತೊಲಗುತ್ತದೆ ರಾಜ್ಯಕ್ಕೆ ಅಷ್ಟು ಒಳ್ಳೆಯದಾಗುತ್ತದೆ. ಪಾಕಿಸ್ತಾನದ ಪರ ಘೊಷಣೆ ಕೂಗಿರುವುದು ಮಾಧ್ಯಮಗಳಲ್ಲಿ ಸ್ಪಷ್ಟವಾಗಿ ತೋರಿಸಲಾಗಿದೆ. ಇವರು ಎಫ್ ಎಸ್ ಎಲ್ ವರದಿ ಕತೆ ಏಕೆ ಹೇಳುತ್ತಿದ್ದಾರೆ. ಈ ಪ್ರಕರಣ ಮುಚ್ಚಿ ಹಾಕುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಘಟನೆ ನಡೆದು 48 ಗಂಟೆ ಕಳೆದರೂ ಯಾರನ್ನೂ ಬಂಧಿಸಿಲ್ಲ. ಬೇರೆ ಘಟನೆ ನಡೆದಾಗ ಎಫ್ ಎಸ್ ಎಲ್ ವರದಿಗಾಗಿ ಕಾಯದೇ ಮೊದಲು ಬಂಧಿಸುತ್ತಿದ್ದರು.

ಇದರಲ್ಲಿ ಏನೂ ಇಲ್ಲ ಅಂದರೆ ಪೊಲಿಸರು ಏಕೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡರು. ರಾಜ್ಯದ ಜನರು ಪಾಕಿಸ್ತಾನ ಪರವಾದವನ್ನು ಆಯ್ಕೆ ಮಾಡಿಲ್ಲ. ಇದು ಕನ್ನಡಿಗರ ಹಾಗೂ ಭಾರತೀಯರ ಹಾಗೂ ಸಂವಿಧಾನ ವಿರೋಧಿ ಸರ್ಕಾರ ಈ ಸರ್ಕಾರವನ್ನು ವಜಾ ಮಾಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು.

Advertisement

ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹರಿಪ್ರಸಾದ್ ಹೇಳಿಕೆ ಕಾಂಗ್ರೆಸ್‌ನವರ ಆಂತರಿಕ ಮನಸ್ಥಿತಿ ಏನಿದೆ ಎನ್ನುವುದನ್ನು ತೋರಿಸುತ್ತದೆ. ಪಾಕಿಸ್ತಾನದ ಭಯೋತ್ಪಾದಕರು ಪ್ರತಿದಿನ ನಮ್ಮ ಸೈನಿಕರನ್ನು ಕೊಲ್ಲುತ್ತಾರೆ. ಅವರನ್ನು ನಮ್ಮ ಸ್ನೇಹಿತರು ಎಂದು ಹೇಳಿಕೊಳ್ಳಲಾಗುತ್ತದೆಯೇ, ಇವರ ಹೇಳಿಕೆಯನ್ನು ನೋಡಿದರೆ, ದೇಶದ್ರೋಹಿಗಳು ಎಂದು ಕರೆಯಬೇಕಾಗುತ್ತದೆ ಎಂದರು.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ