Featured
30-07-2021 : ಶುಕ್ರವಾರದ ರಾಶಿಭವಿಷ್ಯ

ಮೇಷ
ಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುತ್ತದೆ. ಮಂಗಳ ಕಾರ್ಯ ಜರುಗುವುದು.
ಅದೃಷ್ಟ ಸಂಖ್ಯೆ : 3
ವೃಷಭ
ಒಳ್ಳೆಯ ಮಾತುಗಳಿಂದ ಸಂಬಂಧ ಸುಧಾರಿಸುವುದು. ಸ್ನೇಹಿತರಲ್ಲಿ ಮನಸ್ತಾಪ ದೂರಾಗುವುದು. ಶಕ್ತಿ ಮೀರಿ ದುಡಿಯುವ ಕಾರ್ಯಭಾರವಿರುವುದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ.
ಅದೃಷ್ಟ ಸಂಖ್ಯೆ : 9
ಮಿಥುನ
ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕ ಬಲ ಕುಗ್ಗುವ ಸಂಭವವಿದೆ.
ಅದೃಷ್ಟ ಸಂಖ್ಯೆ : 4
ಕರ್ಕ
ವ್ಯವಹಾರಿಕ ಅಭಿವೃದ್ಧಿ ಇರುವದು. ನಿಂತ ಕೆಲಸಗಳು ಮುಂದುವರೆಯುತ್ತವೆ. ಕಠಿಣ ಪರಿಶ್ರಮದಿಂದ ಕೆಲಸ ಕೈಗೂಡುತ್ತದೆ. ಹಾನಿಯ ಪ್ರಮಾಣ ಕಡಿಮೆ ಯಾಗುವುದು.
ಅದೃಷ್ಟ ಸಂಖ್ಯೆ : 6
ಸಿಂಹ
ಪ್ರೀತಿ ವಿಶ್ವಾಸದ ಬಲದಿಂದ ಅಧಿಕಾರಿಗಳ ಗಮನ ಸೆಳೆಯುವಿರಿ. ಅತಿಯಾದ ಮೃದು ಧೋರಣೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಮಂಗಳಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಇರುವುದು.
ಅದೃಷ್ಟ ಸಂಖ್ಯೆ : 2
ಕನ್ಯಾ
ಬದಲಾವಣೆಯನ್ನು ಸಹಜವಾಗಿ ಸ್ವೀಕರಿಸಿ. ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸುವಿರಿ. ಸಾಮಾಜಿಕ ಗೌರವಗಳು ಅರಸಿಕೊಂಡು ಬರಲಿವೆ. ಮಾಲೀಕತ್ವದ ಆಸ್ತಿ ಕೈತಪ್ಪದಂತೆ ಎಚ್ಚರಿಕೆ ವಹಿಸಿರಿ. ಧನದ ಅಪವ್ಯಯ ಆಗದಂತೆ ನೋಡಿರಿ
ಅದೃಷ್ಟ ಸಂಖ್ಯೆ : 5
ತುಲಾ
ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಕ ಸಂಕಷ್ಟಗಳು ಎದುರಾಗುತ್ತವೆ.
ಅದೃಷ್ಟ ಸಂಖ್ಯೆ : 8
ವೃಶ್ಚಿಕ
ಆತ್ಮೀಯರೇ ವಿರೋಧಿಗಳಂತೆ ವರ್ತಿಸುತ್ತಾರೆ. ಮಾಡದ ತಪ್ಪಿಗೆ ಕ್ಷಮೆ ಕೇಳುವ ಪ್ರಸಂಗ ಇರುವದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು.
ಅದೃಷ್ಟ ಸಂಖ್ಯೆ : 3
ಧನು
ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ.
ಅದೃಷ್ಟ ಸಂಖ್ಯೆ : 7
ಮಕರ
ವ್ಯವಹಾರಿಕ ಏಳ್ಗೆ ಇರುತ್ತದೆ. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ವಿವಿಧ ಸೌಭಾಗ್ಯ ಪ್ರಾಪ್ತಿ..ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ವಾಹನ, ಮಶಿನರಿಗಳಿಂದ ತೊಂದರೆ.
ಅದೃಷ್ಟ ಸಂಖ್ಯೆ : 4
ಕುಂಭ
ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವುದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವುದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶಾಂತಚಿತ್ತರಾಗಿ ವ್ಯವಹರಿಸಿರಿ.
ಅದೃಷ್ಟ ಸಂಖ್ಯೆ : 9
ಮೀನ
ಆರೋಗ್ಯಪೂರ್ಣತೆ, ಪ್ರಸನ್ನತೆ ಇರುವುದು. ಎಲ್ಲ ಕಾರ್ಯಗಳೂ ತಮ್ಮ ಮನಸ್ಸಿನಂತೆ ನಡೆಯುವುವು. ಧನಲಾಭ, ಧಾರ್ಮಿಕ ಕಾರ್ಯ, ದೇವತಾ ಕ್ಷೇತ್ರ ದರ್ಶನ ಯೋಗವಿರುತ್ತದೆ. ವ್ಯಾಪಾರ ಸಾಧಾರಣ.
ಅದೃಷ್ಟ ಸಂಖ್ಯೆ : 1
ಶುಭಂಭವತು, #ಡಾ.ಬಸವರಾಜ್ ಗುರೂಜಿ, ವೈದಿಕ ಜ್ಯೋತಿಷಿ, 9972848937
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?