Featured
ರಾಶಿ ಭವಿಷ್ಯ|ಬುಧವಾರ| ಜುಲೈ23, 2020

ರಾಶಿ ಫಲ 23/07/2020, ಗುರುವಾರ

ಮೇಷ:
ಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಮಂಗಲ ಕಾರ್ಯ ಜರುಗುವುದು
ವೃಷಭ:
ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ.
ಮಿಥುನ:
ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು.ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು.
ಕಟಕ:
ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಪ್ರಗತಿ ಇರುವದು. ಹಳೆಯ ಸಾಲ ತೀರುವದು. ಅನೇಕ ಮೂಲಗಳಿಂದ ಧನಪ್ರಾಪ್ತಿಯ ಯೋಗವಿದೆ. ಬಂಧುವರ್ಗದಲ್ಲಿಯ ಅಸಮಾಧಾನಗಳು ಪರಿಹಾರವಾಗುವವು.

ಸಿಂಹ:
ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ.ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವದು
ಕನ್ಯಾ :
ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮೃತೆಗೆ ಯೋಗ್ಯ ಸಮ್ಮಾನ ದೊರೆಯುವದು.
ತುಲಾ :
ಸಾಲಗಾರರ ತೊಂದರೆ ಇರುವದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ.
ವೃಶ್ಚಿಕ :
ಪ್ರೀತಿವಿಶ್ವಾಸದ ಬಲದಿಂದ ಅಧಿಕಾರಿಗಳ ಗಮನ ಸೆಳೆಯುವಿರಿ. ಅತಿಯಾದ ಮೃದು ಧೋರಣೆ ದುರುಪಯೋಗವಾಗದಂತೆ ನೋಡಿಕೊಳ್ಳಿರಿ. ಮಂಗಲಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಇರುವದು.

ಧನಸ್ಸು:
ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ.
ಮಕರ:
ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವದು. ಕೈಗೊಂಡ ಕಾರ್ಯ ಯಶ ಕಾಣುವದು.
ಕುಂಭ:
ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ.
ಮೀನ:
ದೂರ ಪ್ರಯಾಣದ ಅವಶ್ಯಕತೆ ಕಂಡುಬರುವದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು.ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಮಶಿನರಿಗಳಿಂದ ತೊಂದರೆ ಸಾಧ್ಯತೆ

You may like

ನಿತ್ಯದ ಕಾರ್ಯವನ್ನು ಬೇರೆ ವಿಧಾನದಲ್ಲಿ ಮಾಡಿ ಯಶಸ್ಸು ಕಾಣುವಿರಿ

ಈ ರಾಶಿಯವರಿಗೆ ಸಂಜೆ ಮೇಲೆ ಕಾದಿದೆ ಕಂಟಕ!

ದಿನಕ್ಕೊಂದು ಹಸಿ ಈರುಳ್ಳಿ ಕತ್ತರಿಸಿಕೊಂಡು ತಿನ್ನಿ; ಈ ಕಾಯಿಲೆಗಳು ನಿಮತ್ತ ಕೂಡ ಸುಳಿಯಲ್ಲ!

ಈ ರಾಶಿಯವರಿಗೆ ಬಹಳ ದಿನಗಳ ಪ್ರಯತ್ನಕ್ಕೆ ಇಂದು ಫಲ ಸಿಗಲಿದೆ

ರವಿ ಗ್ರಹ ಪಿತೃಕಾರಕನಾದರೆ ಚಂದ್ರ ಗ್ರಹ ಮಾತೃಕಾರಕನಾಗಿರುವನು

ಪುರಾಣ ಎಂದರೇನು? ಎಷ್ಟು ಪುರಾಣಗಳಿವೆ ? ಯಾರು ರಚಿಸಿದ್ದಾರೆ?



















