ರಾಜ್ಯ
ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಾಗಡಿ ಶಾಸಕರಾದ ಬಾಲಕೃಷ್ಣ ಅವರ ಹೇಳಿಕೆಯನ್ನು ನಿರಾಕರಿಸಿದರು. ಕಾಂಗ್ರೆಸ್ ಲೋಕಸಭೆಯಲ್ಲಿ ಗೆಲುವು ಸಾಧಿಸದಿದ್ದರೆ, ಗ್ಯಾರಂಟಿಗಳನ್ನು ರದ್ದುಗೊಳಿಸಲಾಗುವುದು ಎಂಬ ಬಾಲಕೃಷ್ಣ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಅವುಗಳನ್ನು ಖಂಡಿತ ಮುಂದುವರಿಸಲಾಗುವುದು ಎಂದು ಸ್ಪಷ್ಟನೆ ನೀಡಿದರು.
ಕೇಂದ್ರ ಸರ್ಕಾರ ಫೆಬ್ರವರಿ 1 ರಂದು 2024–25ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಲಿದ್ದು, ಈ ಬಗ್ಗೆ ಪ್ರತಿಕ್ರಿಯೆಯನ್ನು ನಾಳೆ ನೀಡುತ್ತೇನೆ. ರಾಜ್ಯದ ಪ್ರತಿ ಜಿಲ್ಲೆಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಿಸಲಾಗಿದ್ದು, ಅವರ ಕಾರ್ಯಚಟುವಟಿಕೆಯನ್ನು ಪರಿಶೀಲನೆ ನಡೆಸಲಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದು 8 ತಿಂಗಳು ಕಳೆದಿದ್ದು, ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಈ ಅಧಿಕಾರಗಳ ಸಲಹೆ ಸೂಚನೆ, ಕಾರ್ಯವೈಖರಿಗಳ ಬಗ್ಗೆ ವಿವರ ಪಡೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?