Connect with us

Featured

ಒಳಚರಂಡಿ, ಕುಡಿವ ನೀರು ಸರಬರಾಜಿಗೆ ಒತ್ತು ನೀಡಿ – ಪ್ರಗತಿ ಪರಿಶೀಲನಾ ಸಭೆ ನಡೆಸಿದ ಭೈರತಿ ಬಸವರಾಜ್​

ರೈಸಿಂಗ್​ ಕನ್ನಡ:

ಯಾದಗಿರಿ:

ಜಿಲ್ಲೆಯ ಎಲ್ಲಾ ಮತಕ್ಷೇತ್ರಗಳ ನಗರ, ಪಟ್ಟಣಗಳಲ್ಲಿ ಒಳಚರಂಡಿ ಮತ್ತು ಕುಡಿಯುವ ನೀರಿನ ಕಾಮಗಾರಿಗಳಿಗೆ ಹೆಚ್ಚಿನ ಒತ್ತು ನೀಡಿ, ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ್ ಸೂಚಿಸಿದರು. ಯಾದಗಿರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಜಿಲ್ಲಾ ನಗರಾಭಿವೃದ್ಧಿ ಕೋಶಕ್ಕೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬೈರತಿ ಬಸವರಾಜ್​​ ಅಧಿಕಾರಿಗಳಿಗೆ ಸೂಚಿಸಿದ್ರು.

Advertisement

ಜಿಲ್ಲೆಯಲ್ಲಿ ಒಳಚರಂಡಿ ಮತ್ತು ಕುಡಿಯುವ ನೀರಿನ ಕಾಮಗಾರಿಗಳ ಅನುಷ್ಠಾನಕ್ಕೆ ಸಮಸ್ಯೆಗಳಿದ್ದಲ್ಲಿ ಗಮನಕ್ಕೆ ತಂದು ಪರಿಹರಿಕೊಳ್ಳಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ಸಲ್ಲದು. ಈಗಾಗಲೇ ಕೈಗೊಂಡಿರುವ ಕಾಮಗಾರಿಗಳು ಕಾಲಮಿತಿಯಲ್ಲಿ ಪ್ರಗತಿ ಸಾಧಿಸದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸುರಪುರ, ಕೆಂಭಾವಿ, ಕಕ್ಕೇರಾ ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಸಂಬಂಧ ಅಂದಾಜು ಪ್ರತಿ ತಯಾರಿಕಾ ಹಂತದಲ್ಲಿದೆ. ಅದೇ ರೀತಿ ಬೇರೆ ಮತಕ್ಷೇತ್ರಗಳಲ್ಲಿ ನೀರು ಸರಬರಾಜು ಮತ್ತು ಒಳಚರಂಡಿ ಕಾಮಗಾರಿಗಳ ಅಂದಾಜು ಪಟ್ಟಿಗಳನ್ನು ತಯಾರಿಸಲು ಮುಖ್ಯ ಇಂಜಿನಿಯರ್ ದಿನೇಶ್ ಅವರಿಗೆ ಸೂಚಿಸಿದರು. ನಗರೋತ್ಥಾನದಲ್ಲಿ ನೀರು ಸರಬರಾಜಿಗಾಗಿ 50 ಕೋಟಿ ರೂ. ಅನುಮೋದನೆ ಆಗಿದೆ. ಈ ಪೈಕಿ ಈಗಾಗಲೇ 20 ಕೋಟಿ ಬಿಡುಗಡೆಯಾಗಿದೆ. ಅಲ್ಲದೇ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 9 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ದಿನೇಶ್ ಅವರು ಮಾಹಿತಿ ನೀಡಿದರು.

ನಾಗರಿಕ ನಿವೇಶನ ಹೆಚ್ಚಿಸಿ:

ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರ ಇನ್ನೂ ಹೆಚ್ಚಿನ ಬಡಾವಣೆಗಳನ್ನು ನಿರ್ಮಾಣ ಮಾಡುವ ಮುಖೇನ ಇಲ್ಲಿನ ನಾಗರಿಕ ನಿವೇಶನಗಳನ್ನು ಹೆಚ್ಚಿಸಬೇಕು. ನಗರಾಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಹೆಚ್ಚು ಆದಾಯವನ್ನು ಗಳಿಸಿ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಂಪನ್ಮೂಲವನ್ನು ಕ್ರೂಢೀಕರಿಸಬೇಕು ಎಂದು ಪ್ರಾಧಿಕಾರದ ಆಯುಕ್ತರಾದ ಚಂದ್ರಶೇಖರ ಬಂಕಲಗಿ ಅವರಿಗೆ ಸಚಿವರು ನಿರ್ದೇಶನ ನೀಡಿದರು. ಪ್ರಾಧಿಕಾರದಿಂದ 50:50 ಅನುಪಾತದ ವಸತಿ ಯೋಜನೆಗಾಗಿ ಜಮೀನು ಪಡೆದು ಬಡಾವಣೆಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ಬಡಾವಣೆ ಅಭಿವೃದ್ಧಿಪಡಿಸಿ ಯಾದಗಿರಿ ನಗರದ ಬಡಜನರಿಗೆ ಕಡಿಮೆ ದರದಲ್ಲಿ ನಿವೇಶನ ದೊರೆಯಲು ಕ್ರಮ ವಹಿಸಲಾಗುವುದು ಎಂದು ಚಂದ್ರಶೇಖರ ಬಂಕಲಗಿ ಅವರು ತಿಳಿಸಿದರು.

ಜಿಲ್ಲೆಯಲ್ಲಿನ ಪೌರಕಾರ್ಮಿಕರ ನೇಮಕಾತಿ ಮತ್ತು ಅವರ ಸಮಸ್ಯೆಗಳನ್ನು ಪೌರಾಡಳಿತ ಸಚಿವರ ಗಮನಕ್ಕೆ ತರಲಾಗುವುದು ಎಂಬುದಾಗಿ ಈ ಸಂದರ್ಭದಲ್ಲಿ ತಿಳಿಸಿದ ಸಚಿವರು, ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಜನಪ್ರತಿನಿಧಿಗಳ ಮಾರ್ಗದರ್ಶನದಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಮಾತನಾಡಿ, ಯಾದಗಿರಿ ಕೆ. ಗ್ರಾಮದಲ್ಲಿರುವ ಸ.ನಂ.431, 432, 433 ಮತ್ತು 434 ಗಳಲ್ಲಿಯ ಒಟ್ಟು 159 ಎಕರೆ 12 ಗುಂಟೆ ಪ್ರದೇಶದ ದೊಡ್ಡ ಕೆರೆಯನ್ನು ಅಭಿವೃದ್ಧಿಪಡಿಸುವ ಸಂಬಂಧ ಡಿ.ಪಿ.ಆರ್. ವಿಸ್ತೃತ ಯೋಜನಾ ವರದಿ ತಯಾರಿಸಲು ಇ-ಪ್ರೊಕ್ಯೂರ್‍ಮೆಂಟ್ ಮೂಲಕ ಟೆಂಡರ್ ಕರೆಯಲಾಗಿದೆ. ಕೆರೆ ಅಭಿವೃದ್ಧಿಗಾಗಿ ಪ್ರಾಧಿಕಾರದಲ್ಲಿರುವ 4 ಕೋಟಿ ರೂ. ಸಾಕಾಗುವುದಿಲ್ಲ. ಪ್ರಯುಕ್ತ ವಿವಿಧ ಇಲಾಖೆ ಹಾಗೂ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಕೆರೆ ಅಭಿವೃದ್ಧಿ ಪಡಿಸುವುದಾಗಿ ಸಚಿವರ ಗಮನಕ್ಕೆ ತಂದರು.

ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ, ನರಸಿಂಹ ನಾಯಕ (ರಾಜೂಗೌಡ), ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ ಅವರು ಉಪಸ್ಥಿತರಿದ್ದರು.

Advertisement

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ