Connect with us

ಟಾಪ್ ನ್ಯೂಸ್

ಬ್ರಾಂಡ್ ಬೆಂಗಳೂರು ಬೆಟರ್ ಬೆಂಗಳೂರು : ಡಿಕೆಶಿ

ಬೆಂಗಳೂರು : ಬ್ರಾಂಡ್ ಬೆಂಗಳೂರು ಬೆಟರ್ ಬೆಂಗಳೂರು ಆಗಬೇಕು ಎನ್ನುವ ಉದ್ದೇಶದಿಂದ ಬೆಂಗಳೂರಿನ ನೂತನವಾಗಿ ಆಯ್ಕೆಯಾಗಿರುವ ಎಲ್ಲಾ ಪಕ್ಷಗಳ ಶಾಸಕರ ಮತ್ತು ಲೋಕಸಭಾ ಸದಸ್ಯರನ್ನು ಒಳಗೊಂಡ ಸಭೆಯನ್ನು ಇಂದು ಹಮ್ಮಿಕೊಂಡು ಜನಪ್ರತಿನಿಧಿಗಳಿಂದ ಸಲಹೆ ಮತ್ತು ಸಮಸ್ಯೆಗಳ ಕುರಿತು ಮಾಹಿತಿ ಪಡೆಯಲಾಯಿತು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೆಂಗಳೂರಿನ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಧೀರ್ಘ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣೆ ಮುಗಿಯುವುದರ ಜೊತೆಯಲ್ಲಿ ರಾಜಕಾರಣ ಸಹ ಮುಗಿದಿದೆ, ಬೆಂಗಳೂರು ಅಭಿವೃದ್ಧಿ ನಮ್ಮೆಲ್ಲರ ಗುರಿ, ನಮ್ಮ ನಗರದ ಅಂತರರಾಷ್ಟ್ರೀಯ ಮಾನ್ಯತೆಯನ್ನು ಕಾಪಾಡೋಣ. ಈ ನಿಟ್ಟಿನಲ್ಲಿ ಎಲ್ಲಾ ಜನಪ್ರತಿನಿಧಿಗಳಿಗೂ ಹಾಗೂ ಹಿರಿ ಅಧಿಕಾರಿಗಳೂ ಸಲಹೆ ನೀಡಿದ್ದಾರೆ ಎಂದರು.

ಬೆಂಗಳೂರಿನ ಶಾಸಕರು ತಮ್ಮ‌ ಸಮಸ್ಯೆಗಳನ್ನು ಹೇಳಿದ್ದಾರೆ ಮತ್ತು ಸಲಹೆ ನೀಡಿದ್ದಾರೆ. ಬ್ರಾಂಡ್ ಬೆಂಗಳೂರು ಬೆಟರ್ ಬೆಂಗಳೂರು ಆಗಬೇಕು, ಕುಡಿಯುವ ನೀರು, ಕಸ ನಿರ್ವಹಣೆ, ಟ್ರಾಫಿಕ್ ಮಾಸ್ಟರ್ ಪ್ಲಾನ್ ಬಗ್ಗೆ ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ಮುಖ್ಯವಾಗಿ ಮಳೆಗಾಲದ ಸಂದರ್ಭದಲ್ಲಿ ತಲೆದೂರುವ ಮುಖ್ಯ ಸಮಸ್ಯೆಗಳಿಗೆ ಕಾರಣವಾಗಿರುವ ಒತ್ತುವರಿ ಹಾಗೂ ರಾಜಕಾಲುವೆ ನಿರ್ವಹಣೆ ಕುರಿತು ಸಹ ಚರ್ಚಿಸಲಾಯಿತು.

ಎಸ್.ಎಂ.ಕೃಷ್ಣ ಕಾಲದ ರೀತಿಯಲ್ಲಿ ಬೆಂಗಳೂರಿನ ಸ್ಟೇಕ್ ಹೋಲ್ಡರ್ ಗಳನ್ನು ಭೇಟಿ ಮಾಡಿ ವಿಷನ್ ಬೆಂಗಳೂರು ಮತ್ತು ಗ್ಲೂಬಲ್ ಬೆಂಗಳೂರು ಅಡ್ವೈಸರಿ ಕಮಿಟಿ ರಚಿಸಲು ಯೋಜಿಸಲಾಗಿದೆ. ಬೆಂಗಳೂರು ಅಭಿವೃದ್ಧಿಯಲ್ಲಿ ನೇರವಾಗಿ ಮತ್ತು ಪರೋಕ್ಷವಾಗಿ ಪಾಲುದಾರರಾಗಿರುವ ಎಲ್ಲರನ್ನೂ ಒಳ್ಗೊಂಡ ಪ್ರತ್ಯೇಕ ವಿಷಯಗಳ ಮೇಲೆ ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗುವುದು ಎಂದು ತಿಳಿಸಿದರು.

ವಾರ್ಡಿಗೊಂದು ಪ್ರತ್ಯೇಕ ಕಡತ ಮಾಡಿ ಲೆಕ್ಕಚಾರ ಇಡಬೇಕು, ವಾರ್ಡ್ ವಾರು ಅಭಿವೃದ್ಧಿ ಕಾರ್ಯಗಳ ಆರಂಭ, ಮಧ್ಯಂತರ ಮತ್ತು ಪೂರ್ಣಗೊಂಡ ವಿಡಿಯೊ ಮತ್ತು ಛಾಯಾಚಿತ್ರಗಳನ್ನು ಕಡತದಲ್ಲಿ ಮಂಡಿಸಬೇಕು, ಅಕೌಂಟಿಬಿಲಿಟಿ ಮತ್ತು ಟ್ರಾನ್ಸಫರೆನ್ಸಿಗೆ ಹೆಚ್ಚಿನ ಒತ್ತು ನೀಡಲಾಗುವುದು.

Advertisement

ಕಸ ನಿರ್ವಹಣೆಯ ಲೆಕ್ಕ ಪಕ್ಕಾ ಇರಬೇಕು, ಎಲ್ಲಿಂದ ಎಲ್ಲಿಗೆ ಸಾಗಿಸಲಾಯಿತು ಎನ್ನುವುದು ಲೆಕ್ಕವಿರಬೇಕು, ಬೆಂಗಳೂರಿನ ಸ್ವಚ್ಛತೆ ನಮ್ಮೆಲ್ಲರ ಹೊಣೆ. ಬಿಡಿಎ ಕಾಂಪ್ಲೆಕ್ಸ್ ಗಳ ರಿ-ಮಾಡೆಲಿಂಗ್ ಸಲಹೆ ಸಹ ಸ್ವೀಕರಿಸಲಾಗಿದೆ. ಕುಡಿಯುವ ನೀರಿನ ನಿರ್ವಹಣೆ ಸರಬರಾಜು ಸಮಸ್ಯೆ ಬಗ್ಗೆ ಗಮನ ಹರಿಸಲಾಗುವುದು.

ಒಂದೂವರೆ ಕೋಟಿ ಜನಸಂಖ್ಯೆ ಇರುವ ಈ ಬೆಂಗಳೂರು ಎಲ್ಲರಿಂದಲೂ ಬೆಳೆದಿದೆ. ಬೆಂಗಳೂರು ಇತಿಹಾಸವನ್ನು ಮರು ಸೃಷ್ಟಿಸುವ ಅಗತ್ಯವಿದೆ. ಮಳೆ ಬಂದ್ರೆ ಹೇಗೆ ನಿರ್ವಹಣೆ ಮಾಡಬೇಕು, ಬಾಟಲ್ ನೆಕ್ ಗಳನ್ನು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಲಾಗುವುದು, ವಿಡಿಯೋ ಕ್ಯಾಮೆರಾಗಳನ್ನು ಹಾಕಲು ಕ್ರಮ ಕೈಗೊಳ್ಳಲಾಗುವುದು.

ಹಲವರು‌ ಒಳ್ಳೊಳ್ಳೆ ಸಲಹೆಗಳನ್ನು ನೀಡಿದ್ದಾರೆ, ನಾಲ್ಕು ಜನ‌ ಎಂಪಿಗಳು ಭಾಗವಹಿಸಿದ್ದರು, ಕೆಲವರು ಮುನಿಸಿಕೊಂಡು ಹೋಗಿದ್ದಕ್ಕೆ ನಂಗೆ ಕಾರಣಗಳು ಗೊತ್ತಿಲ್ಲ. ಬದಲಾವಣೆ ಒಂದೆ ದಿನ ಮಾಡಲು ಸಾಧ್ಯವಿಲ್ಲ, ಇದೇ ರೀತಿಯಲ್ಲಿ ಕಾಲ-ಕಾಲಕ್ಕೆ ಸಂಬಂಧಿಸಿದವರ ಜೊತೆ ಸಭೆಗಳನ್ನು ಹಮ್ಮಿಕೊಳ್ಳುವ ಮೂಲಕ ನವ ಬೆಂಗಳೂರಿಗಾಗಿ ಶ್ರಮಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಉಪಸ್ಥಿತರಿದ್ದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ