ಟಾಪ್ ನ್ಯೂಸ್
ವಾರ್ತಾ ಇಲಾಖೆಯ ನೂತನ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ರಾಜ್ಯ ಸರಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಿಸಿ ಮಂಗಳವಾರ ಸಂಜೆ ಆದೇಶ ಹೊರಡಿಸಿತ್ತು.
1998ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ನಿಂಬಾಳ್ಕರ್ ಅವರು ಪೊಲೀಸ್ ಇಲಾಖೆಯ ವಿವಿಧ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ನಿಂಬಾಳ್ಕರ್ ಅವರಿಗೆ ಇಲಾಖೆಯ ಅಧಿಕಾರಿಗಳು ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.
ನಂತರ ಆಯುಕ್ತರು ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?