Connect with us

ಬೆಂಗಳೂರು

Bangalore Water Crisis | ಬೆಂಗಳೂರಿಗೆ ಬೇಕಿದೆ ಕುಡಿಯುವ ನೀರಿನ ಗ್ಯಾರೆಂಟಿ – ಅಶೋಕ್

ಬೆಂಗಳೂರು :

ಇನ್ನೂ ಈ ವರ್ಷದ ಬೇಸಿಗೆ ಕಾಲವೇ ಆರಂಭವಾಗಿಲ್ಲ, ಆದರೆ ಈಗಾಗಲೇ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ತಮ್ಮ I.N.D.I ಮೈತ್ರಿಕೂಟದ ಡಿಎಂಕೆ ಪಕ್ಷದ ಜೊತೆ ದೋಸ್ತಿ ಉಳಿಸಿಕೊಳ್ಳಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು, ಕಾವೇರಿ ನೀರನ್ನ ಬೇಕಾಬಿಟ್ಟಿ ತಮಿಳುನಾಡಿಗೆ ಹರಿಸಿದ ನಾಡದ್ರೋಹಿ ಕಾಂಗ್ರೆಸ್ ಸರ್ಕಾರ ಈಗ ಬೆಂಗಳೂರಿನ ಜನತೆ ಖಾಸಗಿ ಟ್ಯಾಂಕರ್ ಗಳಿಗೆ ಸಾವಿರಾರು ರೂಪಾಯಿ ತೆತ್ತುವ ಪರಿಸ್ಥಿತಿ ತಂದಿಟ್ಟಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬರ ಪರಿಸ್ಥಿತಿಯಿಂದ ಬೆಂಗಳೂರು ನಗರದಲ್ಲಿ ಉಂಟಾಗಬಹುದಾದ ನೀರಿನ ಸಮಸ್ಯೆ ಬಗ್ಗೆ ಮೊದಲೇ ಅಂದಾಜಿಸಿ ಹೆಚ್ಚುವರಿ ಕೊಳವೆ ಬಾವಿಗಳನ್ನು ಕೊರೆಸಲು, ಹಳೇ ಕೊಳವೆ ಬಾವಿಗಳ ಮರುಪೂರಣ ಮಾಡಲು, ನೀರಿಗಾಗಿ ಪರ್ಯಾಯ ವ್ಯವಸ್ಥೆ ಹುಡುಕಲು ಕ್ರಮ ಕೈಗೊಂಡಿದ್ದರೆ ಇವತ್ತು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬ್ರ್ಯಾಂಡ್ ಬೆಂಗಳೂರು ಕಟ್ಟುತ್ತೇವೆ ಎಂದು ಬಾಯಿಮಾತಿಗೆ ಘೋಷಣೆ ಮಾಡಿ ಆಡಳಿತದ ಚುಕ್ಕಾಣಿಯನ್ನು ಸಂಪೂರ್ಣವಾಗಿ ಅಧಿಕಾರಿಗಳಿಗೆ ಕೊಟ್ಟು ಕಾಂಗ್ರೆಸ್ ನಾಯಕರು ಸದಾ ತಮ್ಮ ಕುರ್ಚಿ ಉಳಿಸಿಕೊಳ್ಳಲು, ಪಕ್ಕದ ರಾಜ್ಯಗಳ ಚುನಾವಣೆ ಉಸಾಬರಿ ನೋಡಿಕೊಳ್ಳಲು ಕಾಲಹರಣ ಮಾಡುತ್ತಾ ಬೆಂಗಳೂರನ್ನ ಸಂಪೂರ್ಣವಾಗಿ ನಿರ್ಲಕ್ಷ ಮಾಡಿದ ಪರಿಣಾಮ ಇವತ್ತು ಬೆಂಗಳೂರಿನ ಜನರು ಹನಿ ನೀರಿಗೂ ಪರದಾಡುವ ದುಸ್ಥಿತಿ ಬಂದಿದೆ.

Advertisement

ಸಿಎಂ ಸಿದ್ದರಾಮಯ್ಯ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರಾದ ಡಿಸಿಎಂ ಡಿಕೆ ಶಿವಕುಮಾರ್ ಅವರು ಈಗಲಾದರೂ ಎಚ್ಚೆತ್ತುಕೊಂಡು ಅಧಿಕಾರಿಗಳ ಸಭೆ ಕರೆದು ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು. ರಾಜಕಾರಣ ಬಿಟ್ಟು ಜನಕಾರಣದತ್ತ ಗಮನ ಹರಿಸಿ ಬೆಂಗಳೂರಿನ ಜನತೆಗೆ ಕನಿಷ್ಠ ಪಕ್ಷ ಕುಡಿಯುವ ನೀರಿನ ಗ್ಯಾರೆಂಟಿ ಆದರೂ ಕೊಡಬೇಕು ಎಂದು ಒತ್ತಾಯ ಮಾಡಿದ್ದಾರೆ.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ