Featured
ಪೊಲೀಸ್ ಆಯುಕ್ತರ ಕಾರು ಚಾಲಕನಿಗೆ ಕೊರೊನಾ ಕಾಟ- 3 ದಿನ ಕ್ವಾರಂಟೈನ್ ಆದ ಬೆಂಗಳೂರು ಪೊಲೀಸ್ ಕಮಿಷನರ್

ರೈಸಿಂಗ್ ಕನ್ನಡ:
ಬೆಂಗಳೂರು:

ಬೆಂಗಳೂರು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ತನ್ನ ಕಾರು ಚಾಲಕನಿಗೆ ಕೊರೊನಾ ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟ ಹಿನ್ನೆಲೆಯಲ್ಲಿ, ಭಾಸ್ಕರ್ ರಾವ್ ಹೋಂ ಕ್ವಾರಂಟೈನ್ ಆಗಿದ್ದಾರೆ. 
ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಾರು ಚಾಲಕ ತನ್ನ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದ. ಆತನಿಗೆ ಸೋಂಕು ಇರುವುದು ದೃಢಪಟ್ಟಿದೆ. ಇದಾದ ನಂತರ ಆಯುಕ್ತರು ಕ್ವಾರಂಟೈನ್ ಆಗಿದ್ದಾರೆ. ಸೋಂಕಿತರಾಗಿರುವ ಆಯುಕ್ತರ ಚಾಲಕನಿಗೆ ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರು 5 ಬಾರಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದಾರೆ. ಆದ್ರೆ ಈ ಬಾರಿ ಕಾರು ಚಾಲಕನಿಗೆ ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ 3 ದಿನ ಕ್ವಾರಂಟೂನ್ ಆಗುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಈ ಮಧ್ಯೆ ಎಲ್ಲಾ ಕೆಲಸಗಳನ್ನು ಮನೆಯಿಂದಲೇ ನಿರ್ವಹಿಸುವುದಾಗಿ ಭಾಸ್ಕರ್ ರಾವ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಇಲ್ಲಿಯವರೆಗೆ 600ಕ್ಕೂ ಹೆಚ್ಚು ಪೊಲೀಸರಿಗೆ ಸೋಂಕು ತಗುಲಿರುವುದು ಖಾತರಿಯಾಗಿದೆ. 6ಕ್ಕೂ ಹೆಚ್ಚು ಪೊಲೀಸರು ಕೋವಿಡ್‌ನಿಂದ ನಿಧನರಾಗಿದ್ದಾರೆ. 1000ಕ್ಕೂ ಹೆಚ್ಚು ಪೊಲೀಸರು ಕ್ವಾರಂಟೈನ್‌ನಲ್ಲಿ ಇದ್ದಾರೆ. ಇದೀಗ ನಗರ ಪೊಲೀಸ್ ಆಯುಕ್ತರೂ ಇವರ ಸಾಲಿನಲ್ಲಿ ಸೇರಿದ್ದಾರೆ.

You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?














