Featured
ಮಾಸ್ಕ್ ಪ್ರಸಾದ, ವೈದ್ಯರೇ ದೇವರು- ಕೊರೊನಾ ವಾರಿಯರ್ ಆಗಿರುವ ಮಾದರಿ ವೈದ್ಯ..!
ರೈಸಿಂಗ್ ಕನ್ನಡ:
ಬೀದರ್:
ಸಾಮಾನ್ಯವಾಗಿ ದೇವಸ್ಥಾನಕ್ಕೆ ಹೋದರೆ ಅಲ್ಲಿ ಪ್ರಸಾದ ನೀಡ್ತಾರೆ. ಆದರೆ ಇಲ್ಲೊಬ್ಬ ಸಮಾಜ ಸೇವಕ ಶಿವನ ದೇವಸ್ಥಾನ ಕ್ಕೆ ಬಂದ ಭಕ್ತರಿಗೆ ಪ್ರಸಾದ ನೀಡುವ ಬದಲು ಮಾಸ್ಕ್ ನೀಡುವ ಮೂಲಕ ಮಾದರಿಯಾಗಿದ್ದಾರೆ. ಹೌದು, ಐತಿಹಾಸಿಕ ಪ್ರಸಿದ್ದ ದೇವಸ್ಥಾನಗಳಲ್ಲಿ ಒಂದು ಪಾಪನಾಶ ದೇವಸ್ಥಾನ. ಬೀದರ್ನ ಪಾಪವಿನಾಶ ಮಂದಿರಲ್ಲಿ ವೈದ್ಯರೊಬ್ಬರು ಪ್ರಸಾದ ರೂಪದಲ್ಲಿ ದೇವಸ್ಥಾನಕ್ಕೆ ಬಂದಿದ್ದ ಭಕ್ತರಿಗೆ N95 ಮಾಸ್ಕ್ ವಿತರಣೆ ಮಾಡುತ್ತಿದ್ದಾರೆ.
ಇತ್ತಿಚಿಗೆ ಜಿಲ್ಲೆಯಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು ಜನ ಮಾಸ್ಕ್ ಧರಿಸದೆ ಓಡಾಡುತ್ತಿದ್ದು, ಮಾಸ್ಕ್ ಧರಿಸದೆ ಹೊರಗಡೆ ಓಡಾಡದಂತೆ ಜನರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಕುಂಟೆ ಸಿರ್ಸಿ ಗ್ರಾಮದ ಡಾ. ಅಲ್ಲಮ ಪ್ರಭು ಆನಂದವಾಡೆ ಹೈದರಾಬಾದ್ ನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆಸಲ್ಲಿಸುತ್ತಿದ್ದು, ವೃತ್ತಿಯಲ್ಲಿ ವೈದ್ಯರಾಗಿದ್ದು ತಮ್ಮ ಸ್ವಂತ ಖರ್ಚಿನಲ್ಲೆ ಬರೊಬ್ಬರಿ
ಒಂದು ಸಾವಿರ ಎನ್ 95 ಮಾಸ್ಕ್ ವಿತರಣೆ ಮಾಡಿದರು.
ಈ ಹಿಂದೆಯೂ ಕೂಡ ಹೈದ್ರಾಬಾದ್ ನಲ್ಲಿ ನೆಲೆಸಿರುವ ಕನ್ನಡಿಗರಿಗೆ 1300 ಮಾಸ್ಕ್ಗಳನ್ನ ವಿತರಣೆ ಮಾಡುವ ಮೂಲಕ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತ ವೈದ್ಯ ವೃತ್ತಿ ಜತೆಯಲ್ಲಿ ಸಮಾಜ ಸೇವೆಗೆ ಮುಂದಾಗಿದ್ದಾರೆ. ಡಾ.ಅಲ್ಲಮ್ಮ ಪ್ರಭು ವಾಡೆಯವರಂತೆ ಇತರರು ಮಾದರಿಯಾಗಲಿ ಎನ್ನುವುದು ಜನರ ಆಶಯ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?