Connect with us

Featured

ರಾಜ್ಯ ಬಿಜೆಪಿಯಲ್ಲಿ ಭಾರೀ ಬದಲಾವಣೆ – ಬಿ.ವೈ ವಿಜಯೇಂದ್ರಗೆ ರಾಜ್ಯ ಉಪಾಧ್ಯಕ್ಷ ಸ್ಥಾನ!

ರೈಸಿಂಗ್ ಕನ್ನಡ :

ಬೆಂಗಳೂರು :

Advertisement

ರಾಜ್ಯ ಬಿಜೆಪಿಗೆ ಮೇಜರ್ ಸರ್ಜರಿಯಾಗಿದೆ. ಪಕ್ಷದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆ ಮೇಲೆ ಕಣ್ಣಿಟ್ಟು, ಭಾರೀ ಲಾಬಿ ನಡೆಸಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮಗ ಬಿ.ವೈ.ವಿಜಯೇಂದ್ರ ಅವರಿಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹುದ್ದೆ ನೀಡಲಾಗಿದೆ.

ಬೆಂಗಳೂರು ಕೇಂದ್ರದಿಂದ ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿದ್ದ ಬಿ.ವೈ ವಿಜಯೇಂದ್ರ, ಅರವಿಂದ ಲಿಂಬಾವಳಿ, ನಿರ್ಮಲ ಕುಮಾರ್ ಸುರಾನ ಅವರನ್ನು ನೇಮಿಸಲಾಗಿದೆ. ಬೆಂಗಳೂರು ಕೇಂದ್ರ ಒಂದರಿಂದಲೇ ಮೂವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಉಳಿದಂತೆ ಉಡುಪಿಯಿಂದ ಶೋಭಾ ಕರಂದ್ಲಾಜೆ, ಕಲಬುರ್ಗಿಯಿಂದ ಮಾಲೀಕಯ್ಯ ಗುತ್ತೇದಾರ್, ಬೆಂಗಳೂರು ದಕ್ಷಿಣದಿಂದ ತೇಜಸ್ಬಿನಿ ಅನಂತ ಕುಮಾರ್, ಮೈಸೂರಿನಿಂದ ಪ್ರತಾಪ ಸಿಂಹ, ತುಮಕೂರಿನಿಂದ ಎಂ.ಬಿ ನಂದೀಶ್, ಬೆಂಗಳೂರು ದಕ್ಷಿಣದಿಂದ ಎಂ. ಶಂಕರಪ್ಪ, ಮೈಸೂರಿನಿಂದ ಎಂ. ರಾಜೇಂದ್ರ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ದಿ. ಅನಂತ ಕುಮಾರ್ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ಮಾಡುವ ಮೂಲಕ ಪಕ್ಷ ಸಂಘಟನೆ ಜವಾಬ್ದಾರಿ ನೀಡಲಾಗಿದೆ. ಯುವ ಮೋರ್ಚಾ ಅಧ್ಯಕ್ಷ ಹುದ್ದೆ ನೇಮಕದಲ್ಲೂ ಬಿ.ವೈ ವಿಜಯೇಂದ್ರಗೆ ಭಾರೀ ಹಿನ್ನಡೆಯಾಗಿದೆ. ಆಪ್ತ ತಮ್ಮೇಶ್‌ಗೌಡ ಅವರನ್ನು ಅಧ್ಯಕ್ಷರಾಗಿಸಲು ವಿಜಯೇಂದ್ರ ಭಾರೀ ಲಾಬಿ ನಡೆಸಿದ್ದರು. ಆದರೆ, ಪಕ್ಷದ ಹೈಕಮಾಂಡ್ ವಿಜಯೇಂದ್ರಗೆ ಮಣೆ ಹಾಕಿಲ್ಲ. ಹಾಗೆಯೇ ಯುವ ಮೋರ್ಚಾ ಅಧ್ಯಕ್ಷ ಹುದ್ದೆ ಮೇಲೆ ಸಚಿವ ವಿ.ಸೋಮಣ್ಣ ಪುತ್ರ ಡಾ‌.ಅರುಣ್ ಸೋಮಣ್ಣ ಅವರೂ ಲಾಬಿ ನಡೆಸಿದ್ದರು. ಆದರೆ, ಸೋಮಣ್ಣ ಪುತ್ರನಿಗೂ ಭಾರೀ ನಿರಾಸೆಯಾಗಿದೆ. ಯುವ ಮೋರ್ಚಾ ನೂತನ ಅಧ್ಯಕ್ಷರಾಗಿ ಡಾ. ಸಂದೀಪ್ ಅವರನ್ನು ನೇಮಿಸಲಾಗಿದೆ.

ನಾಲ್ವರನ್ನು ರಾಜ್ಯ ಪ್ರಧಾನ‌ ಕಾರ್ಯದರ್ಶಿಗಳಾಗಿ ನೇಮಿಸಲಾಗಿದೆ. ದಾವಣಗೆರೆಯಿಂದ ಎನ್. ರವಿಕುಮಾರ್, ಮೈಸೂರಿನಿಂದ ಸಿದ್ದರಾಜು, ಬೆಂಗಳೂರು ಕೇಂದ್ರದಿಂದ ಅಶ್ವಥ್ ನಾರಾಯಣ, ಹುಬ್ಬಳ್ಳಿ-ಧಾರವಾಡ ಮಹಾನಗರದಿಂದ ಮಹೇಶ್ ಟೆಂಗಿನಕಾಯಿ ಅವರು ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ರಾಜ್ಯ ಬಿಜೆಪಿ ಕಾರ್ಯದರ್ಶಿಗಳನ್ನಾಗಿ ಶಾಸಕ ಸತೀಶ್ ರೆಡ್ಡಿ, ತುಳಸಿ ಮುನಿರಾಜುಗೌಡ, ಎಸ್‌.ಕೇಶವ ಪ್ರಸಾದ್, ಜಗದೀಶ್ ಹಿರೇಮನಿ, ಸುಧಾ ಜಯ ರುದ್ರೇಶ್, ಭಾರತಿ ಮುಗ್ದಂ, ಹೇಮಲತಾ ನಾಯಕ್, ಉಜ್ವಲಾ ಬಡವಣ್ವಾಚೆ, ಕೆ.ಎಸ್. ನವೀನ್, ವಿನಯ್ ಬಿದರೆ ಅವರನ್ನು ನೇಮಿಸಲಾಗಿದೆ.

ಮಹಿಳಾ ಮೋರ್ಚಾ ಅಧ್ಯಕ್ಷ ಹುದ್ದೆಯಿಂದ ಎಂಎಲ್‌, ಹಾಗೂ ಸಿಎಂ ಬಿಎಸ್​ವೈ ಆಪ್ತೆ ಭಾರತಿ ಶೆಟ್ಟಿ ಅವರುಗೆ ಕೊಕ್​ ನೀಡಲಾಗಿದ್ದು, ಅವರ ಜಾಗಕ್ಕೆ ಗೀತಾ ವಿವೇಕಾನಂದ‌ ಅವರನ್ನು ನೇಮಕ ಮಾಡಲಾಗಿದೆ. ಇತ್ತೀಚೆಗೆ ರಾಜ್ಯಸಭೆಗೆ ನೇಮಕವಾದ ಈರಣ್ಣ ಕಡಾಡಿ ಹಾಗೂ ಅಶೋಕ್ ಗಸ್ತಿಗೂ ಅವಕಾಶ ನೀಡಲಾಗಿದ್ದು, ರಾಜ್ಯ ರೈತ ಮೋರ್ಚಾ ಅಧ್ಯಕ್ಷರನ್ನಾಗಿ ಕಡಾಡಿ ಅವರನ್ನು ನೇಮಕ ಮಾಡಲಾಗಿದೆ. ಹಾಗೆಯೇ ಅಶೋಕ್ ಗಸ್ತಿ ಅವರನ್ನು ರಾಜ್ಯ ಹಿಂದುಳಿದ ಮೋರ್ಚಾ ಅಧ್ಯಕ್ಷರಾಗಿ ನೇಮಿಸಲಾಗಿದೆ.

Advertisement

ಬಿಜೆಪಿ ರಾಜ್ಯ ಖಜಾಂಚಿಗಳಾಗಿ ಸುಬ್ಬಾ ನರಸಿಂಹ, ಲೆಹರ್ ಸಿಂಗ್, ಎಸ್.ಸಿ ಮೋರ್ಚಾ ರಾಜ್ಯಾಧ್ಯಕ್ಷರಾಗಿ ಚಲವಾದಿ ನಾರಾಯಣಸ್ವಾಮಿ, ಎಸ್.ಟಿ. ಮೋರ್ಚಾ ಅಧ್ಯಕ್ಷರಾಗಿ ತಿಪ್ಪರಾಜು ಹವಾಲ್ದಾರ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಮುಜಾಮಿಲ್ ಬಾಬು ಅವರನ್ನು ನೇಮಿಸಲಾಗಿದೆ. ಹಾಗೆಯೇ ಬಿಜೆಪಿ ರಾಜ್ಯ ವಕ್ತಾರರಾಗಿ ಕ್ಯಾ.ಗಣೇಶ್ ಕಾರ್ಣಿಕ್ ಅವರನ್ನು ನೇಮಕ ಮಾಡಲಾಗಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ