Featured
ಕರ್ನಾಟಕ ಬಂದ್ ಹಿನ್ನೆಲೆ: ದಾವಣಗೆರೆಯಲ್ಲಿ ರೈತ ಸಂಘಟನೆಗಳಿಂದ ಬೈಕ್ ರಾಲಿ
ರೈಸಿಂಗ್ ಕನ್ನಡ:
ದಾವಣಗೆರೆ :
ಕರ್ನಾಟಕ ಬಂದ್ ಕರೆ ಹಿನ್ನಲೆಯಲ್ಲಿ ಭಾನುವಾರ ಜಿಲ್ಲಾ ರೈತ ಸಂಘಟನೆಗಳು ಬೃಹತ್ ಬೈಕ್ ರಾಲಿ ನಡೆಸಿದವು.
ಕೃಷಿ ಮಸೂದೆ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರೈತ ಸಂಘಟನೆಗಳು ಸೋಮವಾರ ಕರ್ನಾಟಕ ಬಂದ್ಗೆ ಕರೆಕೊಟ್ಟಿವೆ.
ಬಂದ್ಗೂ ಮುನ್ನ ದಾವಣಗೆರೆಯಲ್ಲಿ ರಾಜ್ಯ ರೈತ ಸಂಘ ಹಾಗೂ ಸಿಐಟಿಯು ಸಂಘಟನೆಗಳು ಬೈಕ್ ರಾಲಿ ನಡೆಸಿದವು. ದಾವಣಗೆರೆಯ ಜಯದೇವ ವೃತ್ತದಿಂದ ಪ್ರಮುಖ ರಸ್ತೆಗಳಲ್ಲಿ ಬೈಕ್ ರಾಲಿ ನಡೆಸಿದವು.
ಜಿಲ್ಲೆಯ ವ್ಯಾಪಾರಸ್ಥರು, ಹೋಟೆಲ್ ಹಾಗೂ ಸಾರ್ವಜನಿಕರಲ್ಲಿ ಬಂದ್ ಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.
ಸೋಮವಾರ ದಾವಣಗೆರೆಯನ್ನು ಸಂಪೂರ್ಣ ಬಂದ್ ಮಾಡುತ್ತೇವೆ. ಎಪಿಎಂಸಿ, ಭೂ ಸುಧಾರಣಾ ಕಾಯ್ದೆ ಹಿಂಪಡೆಯಬೇಕು.ಇದು ಜಾರಿಯಾದರೆ ರೈತರೆಲ್ಲ ಬೀದಿಗೆ ಬೀಳುವ ಪರಿಸ್ಥಿತಿ ಇದೆ.ಸರ್ಕಾರ ರೈತರ ಪ್ರತಿಭಟನೆಯಿಂದ ಎಚ್ವೆತ್ತುಕೊಳ್ಳಬೇಕು.ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುತ್ತೇವೆ.
ಬಿಜೆಪಿ ಮುಖಂಡರ ಕಾರ್ಯಕ್ರಮ ಸ್ಥಳದಲ್ಲು ಪ್ರತಿಭಟನೆ ನಡೆಸುತ್ತೇವೆ ಎಂದು ರೈತ ಮುಖಂಡ ಹುಚ್ಚವಹಳ್ಳಿ ಮಂಜುನಾಥ ಎಚ್ಚರಿಕೆ ನೀಡಿದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?