Connect with us

Featured

ಬಿಜೆಪಿ ಸರ್ಕಾರದಂತೆಯೇ ರೈತರಿಗೆ ಪರಿಹಾರ ನೀಡಿ, ಇಲ್ಲ ಕುರ್ಚಿ ಬಿಡಿ: ಆರ್‌.ಅಶೋಕ ಆಗ್ರಹ

ಕೋಲಾರ : ಬರ ಮತ್ತು ನೆರೆ ಸಂದರ್ಭದಲ್ಲಿ ಹಿಂದಿನ ಬಿಜೆಪಿ ಸರ್ಕಾರ ರೈತರಿಗೆ ಮೂರು, ನಾಲ್ಕು ಪಟ್ಟು ಅಧಿಕ ಪರಿಹಾರ ನೀಡಿತ್ತು. ಅದೇ ಮಾನದಂಡದಲ್ಲಿ ಸಿದ್ದರಾಮಯ್ಯ ಸರ್ಕಾರ ಪರಿಹಾರ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.

ಕೋಲಾರದಲ್ಲಿ ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮೊದಲು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸುದ್ದಿಗೋಷ್ಠಿಯಲ್ಲಿ ಆರ್‌.ಅಶೋಕ ಮಾತನಾಡಿದರು. ಬರಗಾಲ ಬಂದು ಏಳು ತಿಂಗಳಾದರೂ ರೈತರಿಗೆ ಪರಿಹಾರ ನೀಡಿಲ್ಲ. ಬೆಳಗಾವಿ ಅಧಿವೇಶನ ಕಳೆದು ತಿಂಗಳಾದರೂ ಪರಿಹಾರ ಕೊಟ್ಟಿಲ್ಲ. ರೈತರು ಚಾತಕ ಪಕ್ಷಿಗಳಂತೆ ಪರಿಹಾರಕ್ಕೆ ಕಾಯುತ್ತಿದ್ದಾರೆ. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಮೇವಿನ ಸಮಸ್ಯೆ ಇದೆ. ಆದರೂ ಒಂದೇ ಒಂದು ಗೋಶಾಲೆ ತೆರೆದಿಲ್ಲ. ಅಲ್ಪಸಂಖ್ಯಾತ ಇಲಾಖೆ ಸಚಿವರು ಮನವಿ ಕೊಟ್ಟ ಮೂರು ದಿನಗಳಲ್ಲಿ ಮುಸ್ಲಿಮರಿಗೆ 1 ಸಾವಿರ ಕೋಟಿ ರೂ. ಅನುದಾನವನ್ನು ಕಾಲನಿ ಅಭಿವೃದ್ಧಿಗೆ ಬಿಡುಗಡೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರವಾಹ ಬಂದಾಗ ಎನ್ ಡಿ ಆರ್ ಎಫ್ ಮಾನದಂಡಕ್ಕಿಂತ ದುಪ್ಪಟ್ಟು ಪರಿಹಾರ ನೀಡಲಾಗಿತ್ತು. ಮೂರು ಸಾವಿರ ಕೋಟಿ ರೂ. ಗೂ ಅಧಿಕ ಪರಿಹಾರವನ್ನು ಒಂದೇ ತಿಂಗಳಲ್ಲಿ ರೈತರ ಖಾತೆಗಳಿಗೆ ಬಿಡುಗಡೆ ಮಾಡಿದ್ದೆವು. ಕೇಂದ್ರ ಸರ್ಕಾರ ಆಗಲೂ ತಡವಾಗಿ ನಮ್ಮ ಪಾಲಿನ ಹಣ ನೀಡಿತ್ತು. ಕೇಂದ್ರ ಸರ್ಕಾರ ಯಾವಾಗಲೂ ದೇಶವ್ಯಾಪಿ ಪರಿಹಾರ ನೀಡುತ್ತದೆ. ಅದು ನಿಗದಿತ ಪ್ರಕ್ರಿಯೆ ಪ್ರಕಾರವೇ ನಡೆಯುತ್ತದೆ. ಹೀಗಾಗಿ ಯಾವುದೇ ಪಕ್ಷವಿದ್ದರೂ ಸಹಜವಾಗಿಯೇ ತಡವಾಗುತ್ತದೆ ಎಂದರು.

ಏಳು ತಾಸು ಮೂರು ಫೇಸ್ ಕರೆಂಟ್ ಕೊಡುತ್ತೇವೆ ಎಂದು ಸಿದ್ದರಾಮಯ್ಯ ಪ್ರಕಟಿಸಿದ್ದರು. ಆದರೆ ಮೂರು ತಾಸು ನೀಡುತ್ತಿಲ್ಲ. ನಿರಂತರವಾಗಿ ವಿದ್ಯುತ್‌ ಕಡಿತ ಮಾಡುತ್ತಿದ್ದು, ಅದನ್ನು ರಿಪೇರಿ ಕೆಲಸ ಎಂದು ತೇಪೆ ಹಚ್ಚಲಾಗುತ್ತಿದೆ. ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಣ ಕೊಡದಿದ್ದರೂ ಕಾಂಗ್ರೆಸ್‌ ಕಾರ್ಯಕರ್ತರಿಗೆ ಕ್ಯಾಬಿನೆಟ್‌ ದರ್ಜೆಯ ಸ್ಥಾನಮಾನ ನೀಡಲಾಗುತ್ತಿದೆ. ಕಾರ್ಯಕರ್ತರಿಗೆ ಬಿರಿಯಾನಿ ತಿನ್ನಲು ಮಾತ್ರ ಇವರಿಗೆ ಹಣವಿದೆ. ರೈತರಿಗೆ ಹಣ ಕೊಡಿ, ಇಲ್ಲ ಕುರ್ಚಿ ಖಾಲಿ ಮಾಡಿ ಎಂದು ಒತ್ತಾಯಿಸಿದರು.

ಲೋಕಸಭಾ ಚುನಾವಣೆ ಬಳಿಕ ಎಲ್ಲ ಗ್ಯಾರಂಟಿಗಳು ಗೋವಿಂದ ಆಗಲಿದೆ. ಮೂಗಿಗೆ ತುಪ್ಪ ಸವರಲು ತಿರುಗಿಬಿದ್ದ ಕಾಂಗ್ರೆಸ್‌ ಶಾಸಕರಿಗೆ ಅನುಕೂಲ ಮಾಡಲಾಗುತ್ತಿದೆ. ಕೆಲವು ಶಾಸಕರು ಬಿಟ್ಟು ಹೋಗುತ್ತಾರೆ ಎಂದು ತಿಳಿದುಬಂದಿರುವುದರಿಂದ ಹೈಕಮಾಂಡ್‌ ಈ ರೀತಿ ನಾಟವಾಡುತ್ತಿದೆ ಎಂದರು.

Advertisement
ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ