Connect with us

ರಾಜಕೀಯ

ಗ್ಯಾರಂಟಿಗಳಿಂದ ನೆಮ್ಮದಿಯಾಗಿರುವ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ಡ್ರಾಮಾ ಮಾಡುತ್ತಿದೆ

ಹಾಸನ : ಗ್ಯಾರಂಟಿಗಳಿಂದ ನೆಮ್ಮದಿ ಗಳಿಸಿರುವ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ಡ್ರಾಮಾ ಮಾಡುತ್ತಿದೆ. ಬಿಜೆಪಿಯ ಟೀಕೆ ಡ್ರಾಮಾಗಳಿಗೆ ಮರುಳಾಗಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.‌ ವಿವಿಧ ಇಲಾಖೆಗಳ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆ, ಹೊಸ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿದರು.

ರಾಜ್ಯದಲ್ಲಿ ಜನರ ತಲಾ ಆದಾಯ ಹೆಚ್ಚಳವಾಗಿದೆ. ಈ ಜಿಡಿಪಿ ಬೆಳವಣಿಗೆಗೆ ರಾಜ್ಯದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಕಾರಣ. ಇಡೀ ದೇಶದಲ್ಲಿ 18% GDP ಬೆಳವಣಿಗೆ ಆಗಿ ದೇಶದ ಅಭಿವೃದ್ಧಿಗೆ ಅತಿ ಹೆಚ್ಚು ಕೊಡುಗೆ ನೀಡಿದ ಪ್ರಥಮ ರಾಜ್ಯ ನಮ್ಮದಾಗಿದೆ. ಈ ಬೆಳವಣಿಗೆ ನಮ್ಮ ಗ್ಯಾರಂಟಿ ಯೋಜನೆಗಳ ಫಲ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ಹಾಸನ ಜಿಲ್ಲೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಿದ್ದಕ್ಕಾಗಿ 166 ಕೋಟಿ ಕೊಟ್ಟಿದ್ದೇವೆ. ಈ ಮಟ್ಟದ ಹಣ ಹಾಸನ ಮಹಿಳೆಯರಿಗೆ ಉಳಿತಾಯವಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಹಾಸನ ಜಿಲ್ಲೆಯ ಮಹಿಳೆಯರಿಗೆ 477 ಕೋಟಿ ರೂಪಾಯಿ ನೀಡಿದ್ದೇವೆ. ಈ ಹಣವೂ ಮಹಿಳೆಯರ ಖಾತೆಗೆ ನೇರವಾಗಿ ಹೋಗಿದೆ.

ಉಚಿತ ವಿದ್ಯುತ್ ನಿಂದಾಗಿ ಹಾಸನ ಜಿಲ್ಲೆಯೊಂದರಲ್ಲೇ 89 ಕೋಟಿ ರೂಪಾಯಿ ಹಣ ಜನರಿಗೆ ಉಳಿತಾಯವಾಗಿದೆ. ಅನ್ನಭಾಗ್ಯ ಯೋಜನೆಯಡಿಯಲ್ಲಿ 135.33 ಕೋಟಿ ಹಣ ಹಾಸನ ಜಿಲ್ಲೆಗೆ ನೀಡಲಾಗಿದೆ. ಯುವನಿಧಿಯಲ್ಲಿ ಮಾಡಿರುವ ಹಣ ಕೂಡ ಜಿಲ್ಲೆಯ ಯುವಜನತೆಗೆ ಉಳಿತಾಯವಾಗಿದೆ. ಹೀಗೆ ಪ್ರತೀ ಒಂದೊಂದು ಗ್ಯಾರಂಟಿ ಯೋಜನೆಯಲ್ಲಿ ಜಿಲ್ಲೆಯ ಜನರಿಗೆ ನೂರಾರು ಕೋಟಿ ಹಣ ಉಳಿತಾಯವಾಗಿದೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ಹೀಗೆ ಜಿಲ್ಲೆಯ ಜನರ ಖಾತೆಗೆ ಬಂದ ನೇರ ಹಣದಿಂದಾಗಿ ಜನರ ಕೊಳ್ಳುವ ಶಕ್ತಿ, ಉಳಿತಾಯದ ಶಕ್ತಿ ಹೆಚ್ಚಾಗಿ ಇದರ ಒಟ್ಟು ಪರಿಣಾಮ ರಾಜ್ಯದಲ್ಲಿ ಆರ್ಥಿಕ ಚಟುವಟಿಕೆ ತೀವ್ರಗೊಂಡು ಆರ್ಥಿಕ ಪ್ರಗತಿ ಕಂಡಿದೆ ಎಂದರು. ಮಹಿಳೆಯರು, ರೈತರು, ಕಾರ್ಮಿಕರು, ಹಿಂದುಳಿದವರು, ದುಡಿಯುವವರು, ಶ್ರಮಿಕರು ಎಲ್ಲರಿಗೂ ಅನುಕೂಲ ಆಗುವ ಜಾತಿ, ಧರ್ಮದ ಮಿತಿ ಇಲ್ಲದ ಕಾರ್ಯಕ್ರಮಗಳನ್ನು ನಾವು ರೂಪಿಸಿ, ಜಾರಿ ಮಾಡಿದ್ದೇವೆ.

ನಮ್ಮ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರು ನೆಮ್ಮದಿ ಕಂಡುಕೊಳ್ಳುತ್ತಿದ್ದಾರೆ. ಈ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ನಾನಾ ಡ್ರಾಮಗಳನ್ನು ಸೃಷ್ಟಿಸುತ್ತಿದೆ, ಭರ್ಜರಿ ನಾಟಕ ಆಡುತ್ತಿದೆ ಎಂದು ಟೀಕಿಸಿದರು.ಹಾಸನದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ದವಾಗಿದ್ದು, ಏರ್ ಪೋರ್ಟ್ ನಿರ್ಮಾಣಕ್ಕೆ ರಾಜ್ಯದ ಪಾಲಿನ ಹಣವನ್ನು ನಿರಂತರವಾಗಿ ನೀಡುತ್ತಿದೆ.

Advertisement

ಅಭಿವೃದ್ಧಿ ವಿಚಾರದಲ್ಲಿ ಪಕ್ಷ ರಾಜಕಾರಣಕ್ಕೆ ಅವಕಾಶ ಕೊಡದೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಆಧ್ಯತೆ ನೀಡಲಾಗುವುದು ಎಂದರು.ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ, ಕೃಷಿ ಸಚಿವರಾದ ಚಲುವರಾಯಸ್ವಾಮಿ, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಶಾಸಕರಾದ ಶಿವಲಿಂಗೇಗೌಡರು ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ