Featured
ಕಾಶ್ಮೀರದಲ್ಲಿ ಉಗ್ರರ ಉಪಟಳ – ಮತ್ತೊಬ್ಬ ಬಿಜೆಪಿ ಮುಖಂಡನ ಹತ್ಯೆ..!
![](https://risingkannada.com/wp-content/uploads/2020/08/Kashmir_3_20190819_571_855.jpg)
ರೈಸಿಂಗ್ ಕನ್ನಡ :
ವೆಬ್ ಡೆಸ್ಕ್ :
ಜಮ್ಮು-ಕಾಶ್ಮೀರದಲ್ಲಿದಲ್ಲಿ ಉಗ್ರರ ಉಪಟಳ ಮುಂದುವರಿದಿದೆ. ಕುಲಗಾಮ್ ಜಿಲ್ಲೆಯಲ್ಲಿ ಬಿಜೆಪಿ ನಾಯಕರೊಬ್ಬರನ್ನು ಉಗ್ರರು ಗುಂಡಿಟ್ಟು ಕೊಂದಿದ್ದಾರೆ. ಸಾಜದ್ ಅಹ್ಮದ್ ಖಂಡೇ ಅನ್ನೋ ಬಿಜೆಪಿ ನಾಯಕನನ್ನ ಉಗ್ರರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಜಿಲ್ಲೆಯ ಖಾಜಿಗುಂದ್ ಗ್ರಾಮದ ಸರ್ಪಂಚ್ ಆಗಿದ್ದ ಸಾಜದ್ ಕುಲಗಾಮ್ ಜಿಲ್ಲೆಯ ಬಿಜೆಪಿ ಉಪಾಧ್ಯಕ್ಷರಾಗಿದ್ದರು. ಗುರುವಾರ ಬೆಳಗ್ಗೆ ಸಾಜದ್ ಮನೆಯ ಬಳಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನ ಅನಂತನಾಗ್ ಜಿಲ್ಲೆಯ ಆಸ್ಪತ್ರೆಯೊಂದಕ್ಕೆ ಸಾಗಿಸೋ ಪ್ರಯತ್ನ ನಡೆಯಿತಾದ್ರೂ, ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾರೆ.
ಕುಲಗಾಂ ಜಿಲ್ಲೆಯಲ್ಲಿ ಎರಡು ದಿನಗಳ ಅಂತರದಲ್ಲಿ ಬಿಜೆಪಿ ನಾಯಕರ ಮೇಲೆ ನಡೆದ ಎರಡನೇ ದಾಳಿ ಇದಾಗಿದೆ. ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಹದ್ದಿನ ಕಣ್ಣಿಡಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?