Connect with us

ಬೆಂಗಳೂರು

ಬೆಂಗಳೂರಿನಲ್ಲಿ ₹1000 ಕೋಟಿ ಭೂ ಹಗರಣದಲ್ಲಿ ಬಿಜೆಪಿ ನಾಯಕರು ಭಾಗಿ: ದಾಖಲೆ ಬಿಡುಗಡೆ ಮಾಡಿದ ಎಎಪಿ

ಬೆಂಗಳೂರು: 1000 ಕೋಟಿ ಬೆಲೆಬಾಳುವ 25 ಎಕರೆ ಜುನ್ನಸಂದ್ರ ಕೆರೆ ಸಂಪೂರ್ಣ ಭೂಮಾಫಿಯಾಗಳ ಹಿಡಿತಕ್ಕೆ ಸಿಕ್ಕಿದೆ. ಮಾಜಿ ಮುಖ್ಯಮಂತ್ರಿ ಬಿಜೆಪಿಯ ಬಸವರಾಜ ಬೊಮ್ಮಾಯಿ , ಮಾಜಿ ಕಂದಾಯ ಸಚಿವ ಆರ್. ಅಶೋಕ್ , ಮಹದೇವಪುರ ಮಾಜಿ ಶಾಸಕ ಅರವಿಂದ ಲಿಂಬಾವಳಿ ಅವರು ಈ ಬೃಹತ್ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕರಾದ ಮೋಹನ್ ದಾಸರಿ ಆರೋಪಿಸಿದ್ದಾರೆ.

ನಗರದ ಪ್ರೆಸ್‌ ಕ್ಲಬ್‌ನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಜುನ್ನಸಂದ್ರ ಕೆರೆ ಅಕ್ರಮ ಒತ್ತುವರಿ ಬಗ್ಗೆ ಪೂರಕವಾದ ದಾಖಲೆಗಳನ್ನು ಆಮ್‌ ಆದ್ಮಿ ಪಾರ್ಟಿ ಬಿಡುಗಡೆ ಮಾಡಿದೆ. ಈ ಸಂದರ್ಭದಲ್ಲಿ ಮಾತನಾಡಿದ ಮೋಹನ್ ದಾಸರಿ, ಇಡೀ ಜಗತ್ತಿನಲ್ಲೇ ಭೂಮಾಫಿಯಾದಲ್ಲಿ ಬೆಂಗಳೂರಿನ ರಾಜಕಾರಣಿಗಳು ಮೊದಲ ಸ್ಥಾನ ಪಡೆಯುತ್ತಾರೆ ಎಂದರು.

ಆರ್‌ಟಿಸಿ ಸರ್ವೆ ನಂ. 32 ರ ಅಡಿ 24.33 ಎಕರೆ ಸರ್ಕಾರಿ ಕೆರೆ ಅಂಗಳವನ್ನು ನಕಲಿ ದಾಖಲೆಗಳನ್ನು ಸಲ್ಲಿಸಿ ಖಾಸಗಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. 1930ರಲ್ಲಿ ಜೋಡಿದಾರ ಅಕ್ಕಮ್ಮ ಎಂಬುವವರಿಗೆ ಜುನ್ನಸಂದ್ರ ಕೆರೆಯನ್ನು ನಿರ್ವಹಣೆ ಸಲುವಾಗಿ ಅಂದಿನ ಮೈಸೂರು ಮಹಾರಾಜರು ಒಪ್ಪಂದ ಮಾಡಿಕೊಂಡಿದ್ದರು. ಆದರೆ 1967ರಲ್ಲಿ ಭೂಸುಧಾರಣೆ ಕಾಯ್ದೆ ಜಾರಿಯಾದಾಗ, ಉಳುವವನೇ ಹೊಲದೊಡೆಯ ಎಂಬ ನಿಯಮ ಅನುಷ್ಠಾನಗೊಂಡ ಸಂದರ್ಭ ನಕಲಿ ದಾಖಲೆಗಳನ್ನು ನೀಡಿ ಜುನ್ನಸಂದ್ರ ಕೆರೆ ಭೂಮಿಯನ್ನು ಅಕ್ಕಮ್ಮ ಅವರ ಕುಟುಂಬಸ್ಥರು ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಯಾಗುವ, ಸಾರ್ವಜನಿಕ ಆಸ್ತಿಯಾದ ಜುನ್ನಸಂದ್ರ ಕೆರೆ ಪ್ರದೇಶವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ. 2023 ಡಿಸೆಂಬರ್‌ 21ರಂದು ಹೈಕೋರ್ಟ್‌ ಮಹಾರಾಜರ ಜೊತೆಗಿನ 1930ರ ಒಪ್ಪಂದವನ್ನು ಎತ್ತಿಹಿಡಿದಿದೆ. ಜೋಡಿದಾರ ವಂಶಸ್ಥರಿಗೆ ಭೂಮಿ ಸೇರಬೇಕು ಎಂದು ಆದೇಶ ನೀಡಿದೆ. ಆದರೆ ಕೋರ್ಟ್‌ನಲ್ಲಿ ದಾಖಲೆಗಳನ್ನು ಸಲ್ಲಿಸುವ ಸಂದರ್ಭ ಕೆರೆ ಅಂಗಳ ಎಂಬುದನ್ನು ಎಲ್ಲಿಯೂ ಉಲ್ಲೇಖಿಸಿಲ್ಲ. ಕೋರ್ಟ್‌ ಆದೇಶದಲ್ಲಿಯೂ ಕೆರೆ ಅಂಗಳ ಅಕ್ಕಮ್ಮ ವಂಶಸ್ಥರಿಗೆ ಸೇರಬೇಕು ಎಂದು ಹೇಳಿಲ್ಲ, ಸುಳ್ಳು ದಾಖಲೆ ನೀಡಿ ನ್ಯಾಯಾಲಯದ ದಿಕ್ಕು ತಪ್ಪಿಸಲಾಗಿದೆ ಎಂದರು.

2014ರಲ್ಲಿ ಪತ್ರಿಕೆಗಳಲ್ಲಿ ಪ್ರಕಟವಾದ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ ಅವರು, ಆಗಲೇ ಜುನ್ನಸಂದ್ರ ಕೆರೆಯನ್ನು ಸರ್ಕಾರ ತನ್ನ ವಶಕ್ಕೆ ಪಡೆದುಕೊಂಡಿತ್ತು. 2021ರಲ್ಲಿ ಈ ಕೆರೆ ಉಳಿಸಲು ಆಮ್ ಆದ್ಮಿ ಪಕ್ಷ ಹೋರಾಟಕ್ಕೆ ಮುಂದಾಗಿದ್ದಾಗ, ತಡೆಯುವ ಪ್ರಯತ್ನ ಮಾಡಿದ್ದರು. ಅಂದಿನ ಶಾಸಕರಾಗಿದ್ದ ಅರವಿಂದ ಲಿಂಬಾವಳಿ, ಕಂದಾಯ ಸಚಿವರಾಗಿದ್ದ ಆರ್. ಅಶೋಕ್‌ ಮತ್ತು ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಇವರೆಲ್ಲಾ ಸೇರಿ ₹1000 ಕೋಟಿ ಬೆಲೆ ಬಾಳುವ ಜಾಗವನ್ನು ಖಾಸಗಿಯವರಿಗೆ ನೀಡಿ ತಮ್ಮ ಕಮಿಷನ್ ಪಡೆದುಕೊಂಡಿದ್ದಾರೆ ಎಂದು ಮೋಹನ್ ದಾಸರಿ ಆರೋಪಿಸಿದ್ದಾರೆ.

ಕೂಡಲೇ ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಅರವಿಂದ ಲಿಂಬಾವಳಿ, ಆರ್. ಅಶೋಕ್, ಬಸವರಾಜ ಬೊಮ್ಮಾಯಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಕಾನೂನು ಹೋರಾಟದ ಮೂಲಕ ಮತ್ತೆ ಕೆರೆಯನ್ನು ಉಳಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ.

Advertisement

ಸರ್ಕಾರಿ ಕೆರೆಯನ್ನು ಉಳಿಸಿ ಎಂದು ನಾವು ಅಭಿಯಾನ ಮಾಡುತ್ತಿದ್ದೇವೆ. ಕೆಂಪೇಗೌಡರು ಕಟ್ಟಿದ್ದ ಕೆರೆಗಳನ್ನು ಹೇಗೆ ರಿಯಲ್ ಎಸ್ಟೇಟ್ ಮಾಫಿಯಾಗಳು ಹಾಳು ಮಾಡುತ್ತಿವೆ ಎನ್ನುವುದು ಆತಂಕ ಮೂಡಿಸುತ್ತಿದೆ. ಈ ಹಗರಣದಲ್ಲಿ ದೊಡ್ಡ ರಾಜಕಾರಣಿಗಳು, ಅಧಿಕಾರಿಗಳು ಶಾಮೀಲಾಗಿದ್ದಾರೆ, ಈ ವಿಚಾರದಲ್ಲಿ ಹೋರಾಡುತ್ತಿರುವ ಅಶೋಕ ಮೃತ್ಯುಂಜಯ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆರೋಪಿಸಿದರು.

ಆಮ್ ಆದ್ಮಿ ಪಕ್ಷದ ಮುಖಂಡ ಅಶೋಕ ಮೃತ್ಯುಂಜಯ ಅವರು ಮಾತನಾಡಿ, ಭೂ ಅಕ್ರಮ ಒತ್ತುವರಿ ವಿಚಾರವಾಗಿ ಬಿಎಂಟಿಎಫ್‌ಗೆ ದೂರು ನೀಡಲಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌, ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಗೆ ದೂರು ನೀಡಲಾಗಿದೆ. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಕೆರೆ ಉಳಿಸಿಕೊಳ್ಳಲು ಪ್ರಯತ್ನ ಪಟ್ಟಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಯುವ ಘಟಕ ರಾಜ್ಯಾಧ್ಯಕ್ಷ ಲೋಹಿತ್ ಜಿ. ಹನುಮಾಪುರ, ಎಎಪಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ದರ್ಶನ್ ಜೈನ್, ಬೆಂಗಳೂರು ನಗರ ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ ಹಾಜರಿದ್ದರು.

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ