ಬೆಂಗಳೂರು
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ
![](https://risingkannada.com/wp-content/uploads/2024/02/water-in-koppala.jpg)
ಬೆಂಗಳೂರು: ಬೆಂಗಳೂರು ಮಹಾನಗರದ ಕುಡಿಯುವ ನೀರಿನ ವೈಫಲ್ಯವನ್ನು ಖಂಡಿಸಿ ಹಾಗೂ ರಾಜ್ಯದ ಜನರಿಗೆ ಕುಡಿಯುವ ನೀರು ಕೊಡದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಬೆಂಗಳೂರು ಮಹಾನಗರದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿದರು. ಸರ್ಕಾರದ ವೈಫಲ್ಯವನ್ನು ಖಂಡಿಸಿ ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಲಾಯಿತು.
ಸಮರ್ಪಕವಾಗಿ ಬರಗಾಲ ನಿರ್ವಹಣೆ ಮಾಡುವಲ್ಲಿ ಸರ್ಕಾರ ವಿಫಲಾಗಿದೆ ಎಂದು ಆಕ್ರೋಶ ಹೊರಹಾಕಿದರು. ಕುದುರೆಗಾಡಿಯ ಮೇಲೆ ಖಾಲಿ ಟ್ಯಾಂಕ್ ಇಟ್ಟು, ಖಾಲಿ ಕೊಡ ಹಿಡಿದು ಸರ್ಕಾರದ ವಿರುದ್ಧ ನೀರಿಲ್ಲಾ ನೀರಿಲ್ಲಾ ಎಂದು ಭಜನೆ ಮಾಡುವುದರ ಮೂಲಕ ಬಿಜೆಪಿ ನಾಯಕರು ಪ್ರೋಟೆಸ್ಟ್ ನಡೆಸಿದರು.
ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರು ಕೇಂದ್ರದ ಸಂಸದ ಪಿ.ಸಿ. ಮೋಹನ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ರವಿಕುಮಾರ್, ಬಸವನಗುಡಿಯ ಶಾಸಕ ರವಿ ಸುಬ್ರಹ್ಮಣ್ಯ, ಜಯನಗರದ ಶಾಸಕ ಮತ್ತು ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಸಿ.ಕೆ.ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಅಧ್ಯಕ್ಷ ಸಪ್ತಗಿರಿ ಗೌಡ, ರಾಜ್ಯದ ಮುಖ್ಯ ವಕ್ತಾರ ಅಶ್ವತ್ಥ್ ನಾರಾಯಣ ಗೌಡ, ಮಾಜಿ ಮಹಾಪೌರರು, ಮೋರ್ಚಾಗಳ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಬೆಂಗಳೂರು ಮಹಾನಗರದ ಎಲ್ಲಾ ಮಂಡಲಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?