ಟಾಪ್ ನ್ಯೂಸ್
ಅಸಾದುದ್ದೀನ್ ವಿರುದ್ಧ ಬಿಜೆಪಿ ಅಚ್ಚರಿ ಅಭ್ಯರ್ಥಿ : ಮಹಿಳೆಯನ್ನು ಕಣಕ್ಕಿಳಿಸಿದ್ದು ಏಕೆ..?

ಆಲ್ ಇಂಡಿಯಾ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮಿನ್ ಅಥವಾ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಪ್ರತಿನಿಧಿಸುವ ಹೈದರಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಅದರಲ್ಲೂ ಆ ಅಭ್ಯರ್ಥಿ ಮಹಿಳೆ ಎಂಬುದು ಹೈದರಾಬಾದ್ ರಾಜಕೀಯ ಪಡಸಾಲೆಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಆ ಅಭ್ಯರ್ಥಿಯ ಹೆಸರು ಕೊಂಪೆಲ್ಲ ಮಾಧವಿ ಲತಾ. ಕೈಗಾರಿಕೋದ್ಯಮಿಯಾಗಿ, ಆಸ್ಪತ್ರೆಯ ಕಾರ್ಯ ನಿರ್ವಾಹಕಿಯಾಗಿ ಅನುಭವ ಇರುವ ಮಾಧವಿ ಲತಾ ಭರತನಾಟ್ಯ ಕಲಾವಿದೆ ಆಗಿದ್ದಾರೆ.
ಸುಮಾರು 18 ವರ್ಷ ಆರ್ ಎಸ್ ಎಸ್ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಇದರ ಜೊತೆಗೆ ಮುಸ್ಲಿಂ ಸಮುದಾಯದ ಬಡ ಮಹಿಳೆಯರ ಉನ್ನತಿಗೆ ತಮ್ಮದೇ ಆದ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಇದೇ ಕಾರಣಕ್ಕೆ ಅವರನ್ನು ಹೈದರಾಬಾದ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಮಾಧವಿ ಲತಾಗೆ ಟಿಕೆಟ್ ಘೋಷಣೆಯಾಗುವ ಮುನ್ನ ಅವರು ಯಾರು ಎಂಬುದು ಬಹುತೇಕರಿಗೆ ಗೊತ್ತೇ ಇರಲಿಲ್ಲ. ಆದರೆ ಯಾವಾಗ ಹೈದರಾಬಾದ್ ಕ್ಷೇತ್ರದಿಂದ ಮಾಧವಿ ಲತಾ ಹೆಸರು ಘೋಷಣೆಯಾಯಿತೋ, ಅಲ್ಲಿಂದ ಮುಂದೆ ಮಾಧವಿ ಲತಾ ಭಾರಿ ಚರ್ಚೆಗೆ ಕಾರಣರಾಗಿದ್ದಾರೆ.
ಹೈಕಮಾಂಡ್ ತಮಗೆ ಟಿಕೆಟ್ ನೀಡಿದ್ದು, ಅಸಾದುದ್ದೀನ್ ಓವೈಸಿ ವಿರುದ್ಧ ಸೆಣಸಲು ತಾವು ಸಿದ್ಧ ಎಂದು ಮಾಧವಿ ಲತಾ ಹೇಳಿದ್ದಾರೆ. ಹೈದರಾಬಾದ್ ಕ್ಷೇತ್ರದಲ್ಲಿ ಭಯದ ವಾತಾವರಣ ಸೃಷ್ಟಿಸಿ ಚುನಾವಣೆ ನಡೆಸಲಾಗುತ್ತದೆ. ಹಳೆ ಹೈದರಾಬಾದ್ ನಲ್ಲಿ ಮುಸಲ್ಮಾನ್ ಸಮುದಾಯದ ಜನರ ಹೆಚ್ಚಿದೆ ಎಂದು ಹಲವರು ಭಾವಿಸಿದ್ದಾರೆ. ಇದು ತಪ್ಪು. ಕ್ಷೇತ್ರದಲ್ಲಿ ಹಿಂದೂಗಳ ಹೆಸರುಗಳನ್ನು ಮತ ಪಟ್ಟಿಯಿಂದ ಕೈ ಬಿಡಲಾಗುತ್ತದೆ. ಇಲ್ಲಿ ನಿಷ್ಪಕ್ಷಪಾತ ಚುನಾವಣೆ ನಡೆದರೆ ಅಸಾದುದ್ದೀನ್ ಓವೈಸಿ ಮುಖವಾಡ ಬಯಲಾಗುತ್ತದೆ ಎಂದು ಅವರು ಹೇಳಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?