ದಾವಣಗೆರೆ: ಟೈರ್ ಸ್ಫೋಟಗೊಂಡ ಪರಿಣಾಮ ಬೋಲೆರೋ ವಾಹನ ಪಲ್ಟಿಯಾಗಿದ್ದು, ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ. ವಾಹನದಲ್ಲಿದ್ದ 6 ಮಂದಿಗೆ ಗಾಯವಾಗಿರುವ ದುರ್ಘಟನೆ ದಾವಣಗೆರೆ ಹೊರವಲಯದ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.
ತಡರಾತ್ರಿ ಈ ಅಪಘಾತ ನಡೆದಿದೆ. ಘಟನೆಯಲ್ಲಿ ಬೋಲೆರೋ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮೃತಪಟ್ಟವರೆಲ್ಲರೂ ಆಂಧ್ರ ಮೂಲದವರಾಗಿದ್ದಾರೆ. ಐವರು ಗಾಯಾಳುಗಳನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ವ್ಯಕ್ತಿ ಗಂಭೀರ ಸ್ಥಿತಿಯಲ್ಲಿದ್ದು ಆತನನ್ನು ಹುಬ್ಬಳ್ಳಿಗೆ ರವಾನಿಸಲಾಗಿದೆ.
ಆಂಧ್ರ ಮೂಲದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಸಿಂಗರಾಜನಹಳ್ಳಿ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಹಾವೇರಿ ಜಿಲ್ಲೆ ಬ್ಯಾಡಿಗೆಯಿಂದ ಮೆಣಸಿನಕಾಯಿ ಖರೀದಿಗೆ ತೆರಳಿ ವಾಪಸ್ ಬರುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸು ಸ್ಥಳಕ್ಕೆ ತೆರೆಳ ಮೃತ ಪಟ್ಟ ವರನ್ನ ಜಿಲ್ಲಾ ಆಸ್ಪತ್ರೆ ಗೆ ರವಾನಿಸಿ ವಾಹನ ತೆರವು ಗೊಳಿಸಿದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?