Connect with us

International News

ಪಾಕ್ ಚುನಾವಣೆ ಬೆನ್ನಲ್ಲೇ ಬಾಂಬ್ ಸ್ಫೋಟ: 12 ಜನರ ಸಾವಿನ ಹೊಣೆ ಹೊತ್ತವರು ಯಾರು?

ಪಾಕಿಸ್ತಾನದಲ್ಲಿ ಚುನಾವಣೆ ವೇಳೆ ಬಾಂಬ್ಗಳ ಸದ್ದು ಹೆಚ್ಚಾಗಿದೆ. ಪಾಕಿಸ್ತಾನದ ಬಲೂಚಿಸ್ತಾನ ಪಿಶಿನ್‌ನಲ್ಲಿರುವ ಸ್ವತಂತ್ರ ಅಭ್ಯರ್ಥಿಯ ಪಕ್ಷದ ಕಚೇರಿಯ ಹೊರಗೆ ಬಾಂಬ್ ಸ್ಫೋಟಗೊಂಡಿದ್ದು, ಹನ್ನೆರಡು ಜನ ಸಾವನ್ನಪ್ಪಿದ್ದಾರೆ. 30 ಜನ ಗಾಯಗಗೊಂಡಿದ್ದಾರೆ. ಪಾಕಿಸ್ತಾನದ ಪಿಶಿನ್‌ನ ಖನೋಜೈ ಪ್ರದೇಶದಲ್ಲಿ ಸ್ವತಂತ್ರ ಅಭ್ಯರ್ಥಿ ಅಸ್ಫಂಡ್ ಯಾರ್ ಖಾನ್ ಕಾಕರ್ ಅವರ ಕಚೇರಿಯ ಹೊರಗೆ ಬಾಂಬ್ ಸ್ಫೋಟ ಮಾಡಲಾಗಿದೆ. ಇನ್ನು ಸ್ಫೋಟದ ಸಂದರ್ಭದಲ್ಲಿ ಸ್ವತಂತ್ರ ಅಭ್ಯರ್ಥಿ ಅಸ್ಫಂಡ್ ಯಾರ್ ಖಾನ್ ಕಾಕರ್ ಅವರು ತಮ್ಮ ಕಚೇರಿಯಲ್ಲಿ ಇರಲಿಲ್ಲ.

ಈ ಘಟನೆಯ ಕುರಿತು ಪಾಕಿಸ್ತಾನದ ಚುನಾವಣಾ ಆಯೋಗವು ಪ್ರಾಂತೀಯ ಮುಖ್ಯ ಕಾರ್ಯದರ್ಶಿ ಮತ್ತು ಪ್ರಾಂತೀಯ ಪೊಲೀಸ್ ಮುಖ್ಯಸ್ಥರಿಂದ ತಕ್ಷಣದ ವರದಿಗಳನ್ನು ಕೇಳಿದೆ. ಈ ಘಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಆದೇಶವನ್ನು ನೀಡಲಾಗಿದೆ ಎಂದು ಹೇಳಲಾಗಿದೆ. ಅಸ್ಫಂಡ್ ಯಾರ್ ಖಾನ್ ಕಾಕರ್ ಅವರ ಮೋಟಾರ್‌ ಬೈಕ್‌ನಲ್ಲಿ ಬಾಂಬ್ ಇಡಲಾಗಿತ್ತು ಎಂದು ಜಿಲ್ಲಾಧಿಕಾರಿ ಜುಮಾ ದಾದ್ ತಿಳಿಸಿದ್ದಾರೆ.

ಸ್ಫೋಟದಲ್ಲಿ ಗಾಯಗೊಂಡಿರುವ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕೆರದುಕೊಂಡು ಹೋಗಲಾಗಿದೆ. ಬಲೂಚಿಸ್ತಾನದ ಗೃಹ ಮತ್ತು ಬುಡಕಟ್ಟು ವ್ಯವಹಾರಗಳ ಉಸ್ತುವಾರಿ ಸಚಿವ ಮಿರ್ ಜುಬೇರ್ ಖಾನ್ ಜಮಾಲಿ ಸಾವು ಮತ್ತು ಗಾಯಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ ಮತ್ತು ಜಿಲ್ಲಾಧಿಕಾರಿಯಿಂದ ವರದಿಯನ್ನು ಕೇಳಿದ್ದಾರೆ.

ಬಲೂಚಿಸ್ತಾನದ ನುಷ್ಕಿ ಜಿಲ್ಲೆಯ ಪಾಕಿಸ್ತಾನ ಚುನಾವಣಾ ಆಯೋಗದ (ಇಸಿಪಿ) ಕಚೇರಿಯ ಹೊರಗೆ ಮತ್ತೊಂದು ಬಾಂಬ್ ಸ್ಫೋಟ ಸಂಭವಿಸಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪೊಲೀಸ್ ಹೇಳಿಕೆಯ ಪ್ರಕಾರ, ಇಸಿಪಿ ಕಚೇರಿಯ ಗೇಟ್‌ನ ಹೊರಗೆ ಸ್ಫೋಟಿಸಲಾಗಿದೆ. ಪ್ರದೇಶವನ್ನು ಸುತ್ತುವರಿದಿದ್ದು, ಆರೋಪಿಗಳನ್ನು ಸೆರೆಹಿಡಿಯಲು ಶೋಧ ಕಾರ್ಯ ನಡೆಯುತ್ತಿದೆ. ARY ನ್ಯೂಸ್ ವರದಿ ಮಾಡಿದಂತೆ ಸ್ಫೋಟದ ಸ್ವರೂಪವನ್ನು ನಿರ್ಧರಿಸಲು ವಿಚಾರಣೆಯನ್ನು ಸಹ ಪ್ರಾರಂಭಿಸಲಾಗಿದೆ. ಸಾರ್ವತ್ರಿಕ ಚುನಾವಣೆಗೂ ಮುನ್ನ ಸಂಭವಿಸಿದ ಸ್ಫೋಟ ಇದೇ ಮೊದಲಲ್ಲ. ಕಳೆದ ವಾರ, ಪಾಕಿಸ್ತಾನದ ಚುನಾವಣಾ ಆಯೋಗದ ಕರಾಚಿ ಕಚೇರಿಯ ಹೊರಗೆ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ