Connect with us

ಕ್ರೀಡೆ

ಕಪಿಲ್ ದೇವ್ ಸೃಷ್ಟಿಸಿದ್ದ 41 ವರ್ಷಗಳ ಹಳೆಯ ದಾಖಲೆಯನ್ನು ಮುರಿದುಬಿಟ್ರಾ ಬುಮ್ರಾ..!

Cricket : ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್​ನಲ್ಲಿ 6 ವಿಕೆಟ್ ಉರುಳಿಸಿದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಹಲವು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಅದರಲ್ಲಿ ಪ್ರಮುಖವಾದದ್ದು, ಟೀಂ ಇಂಡಿಯಾದ ಮಾಜಿ ನಾಯಕ ಕಪಿಲ್ ದೇವ್ ಅವರ 41 ವರ್ಷಗಳ ಹಳೆಯ ದಾಖಲೆಯೂ ಒಂದಾಗಿದೆ.

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 6 ವಿಕೆಟ್ ಪಡೆದರು. ಅವರು ಓಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ ಮತ್ತು ಟಾಮ್ ವಿಲಿಯಂ ಹಾರ್ಟ್ಲಿ ಹಾಗೂ ಜೇಮ್ಸ್ ಅಂಡರ್ಸನ್ ವಿಕೆಟ್ ಪಡೆದರು.

ಬುಮ್ರಾ ಪಡೆದ ಈ 6 ವಿಕೆಟ್​ಗಳಲ್ಲಿ 4 ವಿಕೆಟ್​ಗಳು 3 ರಿಂದ 6 ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುವ ಆಟಗಾರರದ್ದಾಗಿತ್ತು. 1983 ರ ನಂತರ ಭಾರತದಲ್ಲಿ ವೇಗದ ಬೌಲರ್ 3, ನಂಬರ್ 4, ನಂಬರ್ 5 ಮತ್ತು ನಂಬರ್ 6 ಬ್ಯಾಟ್ಸ್‌ಮನ್‌ಗಳ ವಿಕೆಟ್ ಪಡೆದದ್ದು ಇದೇ ಮೊದಲು.

ಇದಕ್ಕೂ ಮೊದಲು ಕಪಿಲ್ ದೇವ್ 1983ರಲ್ಲಿ ಅಹಮದಾಬಾದ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಇಂತಹ ಸಾಧನೆ ಮಾಡಿದ್ದರು. ಆ ಪಂದ್ಯದಲ್ಲಿ ಕಪಿಲ್ ದೇವ್ 83 ರನ್ ನೀಡಿ 9 ವಿಕೆಟ್ ಪಡೆದಿದ್ದರು. ಇದೀಗ ಬುಮ್ರಾ ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಎರಡನೇ ಭಾರತೀಯ ವೇಗಿ ಎನಿಸಿಕೊಂಡಿದ್ದಾರೆ. ಈ ಮೂಲಕ ಕಪಿಲ್ ದೇವ್ ಅವರ 41 ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಲ್ಲದೆ ಟೆಸ್ಟ್​ನಲ್ಲಿ 150 ವಿಕೆಟ್ ಪಡೆದ 8ನೇ ವೇಗದ ಬೌಲರ್ ಎನಿಸಿಕೊಂಡಿದ್ದಾರೆ.

ಹಾಗೆಯೇ ಅತಿ ಕಡಿಮೆ ಎಸೆತಗಳಲ್ಲಿ 150 ವಿಕೆಟ್ ಪೂರೈಸಿದ ಮೊದಲ ಬೌಲರ್ ಎಂಬ ದಾಖಲೆಯನ್ನು ಬುಮ್ರಾ ನಿರ್ಮಿಸಿದ್ದಾರೆ. ಬುಮ್ರಾ 6781 ಎಸೆತಗಳಲ್ಲಿ 150 ವಿಕೆಟ್​ಗಳ ಮೈಲಿಗಲ್ಲನ್ನು ದಾಟಿದ್ದಾರೆ. ಬುಮ್ರಾಗೂ ಮೊದಲು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ವೇಗಿ ಉಮೇಶ್ ಯಾದವ್ 7661 ಎಸೆತಗಳಲ್ಲಿ 150 ವಿಕೆಟ್ ಪಡೆದಿದ್ದರು. ಇದೀಗ ಈ ಪಟ್ಟಿಯಲ್ಲಿ ಬುಮ್ರಾ ಅಗ್ರಸ್ಥಾನಕ್ಕೇರಿದರೆ, ಉಮೇಶ್ ಯಾದವ್ ಎರಡನೇ ಸ್ಥಾನಕ್ಕೆ ಜಾರಿದ್ದಾರೆ.

ಈ ಇಬ್ಬರನ್ನು ಹೊರತುಪಡಿಸಿ ಅತಿ ಕಡಿಮೆ ಎಸೆತಗಳಲ್ಲಿ 150 ವಿಕೆಟ್ ಪೂರೈಸಿದ ಭಾರತದ ವೇಗಿಗಳ ಪೈಕಿ ಮೂರನೇ ಸ್ಥಾನದಲ್ಲಿರುವ ಮೊಹಮ್ಮದ್ ಶಮಿ, 7755 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರು. 8378 ಎಸೆತಗಳಲ್ಲಿ 150 ವಿಕೆಟ್ ಪಡೆದಿದ್ದ ಕಪಿಲ್ ದೇವ್ ನಾಲ್ಕನೇ ಸ್ಥಾನದಲ್ಲಿದ್ದಾರೆ.

Advertisement

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ