Featured
#ByElection : ಕುಮಾರಸ್ವಾಮಿ ಬೇರೆ ಪಕ್ಷಗಳ ಹೆಗಲು ಬಿಡಿ, ಸ್ವಂತ ಬಲದಿಂದ ಮುಖ್ಯಮಂತ್ರಿ ಆಗಿ ತೋರಿಸಿ : HDKಗೆ ಸಿದ್ದು ಸವಾಲ್..!

ರೈಸಿಂಗ್ ಕನ್ನಡ : ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಆಗ್ತಿದ್ದಂತೆ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ನಡುವಿನ ಸಮರ ತಾರಕಕ್ಕೇರಿದೆ. ಒಬ್ಬರ ಮೇಲೊಬ್ಬರು ಕಳೆದ ನಾಲ್ಕೈದು ದಿನಗಳಲ್ಲಿ ಕೆಸರೆರಚಾಟ ಮಾಡಿಕೊಳ್ತಿದ್ದಾರೆ. ಸಿದ್ದರಾಮಯ್ಯ ಅಂತೂ ಟ್ವಿಟ್ಟರ್ನಲ್ಲಿ ಒಂದರ ಮೇಲೊಂದು ಟ್ವೀಟ್ ಮಾಡ್ತಿದ್ದು, ಹೆಚ್ಡಿಕೆ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಸನ್ಮಾನ್ಯ @hd_kumaraswamy ಅವರೇ, ನಿಮ್ಮನ್ನು ನಾನು ಸಾಕಿದ್ದೇನೆ ಎಂದು ಎಲ್ಲಿ ಹೇಳಿದ್ದೆ?
ನಿಮ್ಮನ್ನು ಸಾಕಿದ್ದು ದೇವೇಗೌಡರು (@H_D_Devegowda), ಬಳಸಿಕೊಂಡದ್ದು ಮಾತ್ರ ನಮ್ಮಂತಹವರನ್ನು.
ಬಳಸಿ ಬಿಸಾಡುವ ಪಾಠವನ್ನು ನೀವು ಬಹುಬೇಗ ಕಲಿತುಬಿಟ್ಟಿರಿ.
ಈ ಬಗ್ಗೆ @BSYBJP ಅವರನ್ನು ಕೇಳಿ,ಹೇಳ್ತಾರೆ.
3/1— Siddaramaiah (@siddaramaiah) September 24, 2019
ಸನ್ಮಾನ್ಯ ಕುಮಾರಸ್ವಾಮಿ
ಅವರೇ, ನಿಮ್ಮನ್ನು ನಾನು ಸಾಕಿದ್ದೇನೆ ಎಂದು ಎಲ್ಲಿ ಹೇಳಿದ್ದೆ..? ನಿಮ್ಮನ್ನು ಸಾಕಿದ್ದು ದೇವೇಗೌಡರು.
ಬಳಸಿಕೊಂಡದ್ದು ಮಾತ್ರ ನಮ್ಮಂತಹವರನ್ನು. ಬಳಸಿ ಬಿಸಾಡುವ ಪಾಠವನ್ನು ನೀವು ಬಹುಬೇಗ ಕಲಿತುಬಿಟ್ಟಿರಿ.
ಈ ಬಗ್ಗೆ ಯಡಿಯೂರಪ್ಪ ಅವರನ್ನು ಕೇಳಿ, ಹೇಳ್ತಾರೆ ಎಂದು ಟ್ವೀಟ್ನಲ್ಲಿ ಖಾರವಾಗಿ ತಿವಿದಿದ್ದಾರೆ. ಸನ್ಮಾನ್ಯ @hd_kumaraswamy ಅವರೇ, ನನ್ನನ್ನು ಕೂಡಾ ಬೆಳೆಸಿದ್ದು ರಾಜ್ಯದ ಜನತೆ.ನಮ್ಮ ಪಕ್ಷಕ್ಕೆ ಜನ ನೀಡಿದ ಆಶೀರ್ವಾದದ ಬಲದಿಂದ ನಾನು 5 ವರ್ಷ ಮುಖ್ಯಮಂತ್ರಿಯಾಗಿದ್ದೇ ಹೊರತು ಯಾವುದೇ ಹದ್ದು-ಗಿಣಿಗಳ ಹಂಗಿನಿಂದಲ್ಲ. @INCKarnataka
2/3— Siddaramaiah (@siddaramaiah) September 24, 2019
ಮತ್ತೊಂದು ಟ್ವೀಟ್ ಮುಂದುವರಿಸಿದ್ದು,
ಕುಮಾರಸ್ವಾಮಿ ಅವರೇ, ನನ್ನನ್ನು ಕೂಡ ಬೆಳೆಸಿದ್ದು ರಾಜ್ಯದ ಜನತೆ. ನಮ್ಮ ಪಕ್ಷಕ್ಕೆ ಜನ ನೀಡಿದ ಆಶೀರ್ವಾದದ
ಬಳದಿಂದ ನಾನು 5 ವರ್ಷ ಮುಖ್ಯಮಂತ್ರಿಯಾಗಿದ್ದೇ ಹೊರತು, ಯಾವುದೇ ಹದ್ದು-ಗಿಳಿಗಳ ಹಂಗಿನಿಂದಲ್ಲ ಎಂದು
ತಿವಿದಿದ್ದಾರೆ. ಬೇರೆ ಪಕ್ಷಗಳ ಹೆಗಲ ಮೇಲೆ ಕೂತು ಮುಖ್ಯಮಂತ್ರಿಯಾದ @hd_kumaraswamy ಅವರೇ,
ನೀವು ಸ್ವಂತ ಬಲದಿಂದ ಮುಖ್ಯಮಂತ್ರಿಯಾಗಲೂ ಎಂದಾದರೂ ಸಾಧ್ಯವೇ?@INCKarnataka
3/3— Siddaramaiah (@siddaramaiah) September 24, 2019
ಮೂರನೇ ಟ್ವೀಟ್ನಲ್ಲಿ ಮತ್ತಷ್ಟು ಆಕ್ರೋಶ ಹೊರಹಾಕಿರೋ ಸಿದ್ದು, ತಾಖತ್ ಇದ್ರೆ, ಬೇರೆ ಪಕ್ಷಗಳ ಹೆಗಲ ಮೇಲೆ ಕೂತು ಮುಖ್ಯಮಂತ್ರಿಯಾಗೋದು ಬಿಡಿ. ನೀವು ಸ್ವಂತ ಬಲದಿಂದ ಮುಖ್ಯಮಂತ್ರಿಯಾಗಲು ಎಂದಾದರೂ ಸಾಧ್ಯವೇ ಎಂದು ಟೀಕಿಸಿದ್ದಾರೆ.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















