Featured
ಪಾದಚಾರಿಗೆ ಕಾರು ಡಿಕ್ಕಿ: ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ರೈಸಿಂಗ್ ಕನ್ನಡ :
ವಿಜಯಪುರ :
ಪಾದಚಾರಿಗೆ ಕಾರೊಂದು ಡಿಕ್ಕಿ ಹೊಡೆದುಕೊಂಡು ಹೋಗಿದ್ದು ಅದೃಷ್ಟವಶಾತ್ ಅಪಘಾತಕ್ಕೀಡಾದ ಪಾದಚಾರಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ನಡೆದಿದೆ.
ಪಟ್ಟಣದ ಬಿದರಕುಂದಿ ರಸ್ತೆಯಲ್ಲಿ ನಡೆದಿದ್ದು, ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪಾದಚಾರಿಯನ್ನು ಲೆಕ್ಕಿಸದೇ ಕಾರು ಚಾಲಕ ಆತನಿಗೆ ಹಾಯಿಸಿಕೊಂಡು ಮುಂದೆ ಹೋಗಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮುದ್ದೇಬಿಹಾಳ ಪಟ್ಟಣದ ಜವಳಿ ವರ್ತಕರೊಬ್ಬರಿಗೆ ಸೇರಿದ ಕಾರು ಎನ್ನಲಾಗಿದ್ದು ಮುದ್ದೇಬಿಹಾಳ ಪಟ್ಟಣದ ನಿವಾಸಿಗೆ ಕಾರು ಹಾಯ್ದಿದೆ. ಆದರೆ ಯಾವುದೇ ಪ್ರಕರಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿಲ್ಲ ಎಂದು ಪಿಎಸೈ ಮಲ್ಲಪ್ಪ ಮಡ್ಡಿ ಮಾಹಿತಿ ನೀಡಿದ್ದಾರೆ. ಅಪಘಾತವಾದ ನಂತರ ವಾಹನ ಚಾಲಕ ಕಾರು ನಿಲ್ಲಿಸದೇ ಹಾಗೆ ಚಲಾಯಿಸಿಕೊಂಡು ಹೋಗಿದ್ದಾನೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?